Homeಮುಖಪುಟಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

ಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಫರ್ಹಾನ್ ಜುಬೇರಿ ಮತ್ತು ರವೀಶ್ ಅಲಿ ಖಾನ್ ಅವರನ್ನು ನಿನ್ನೆ ಬಂಧಿಸಲಾಗಿದೆ. ಆನಂತರ ರವೀಶ್‌ನನ್ನು ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ್ದರೆ, ಫರ್ಹಾನ್ ಅವರನ್ನು ಅಲಿಘರ್‌ನ ಜೈಲಿಗೆ ಕಳುಹಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಭಾರತವು ನಾಲ್ಕನೇ ಹಂತದ ಲಾಕ್‌ಡೌನ್ ಅನ್ನು ಎದುರಿಸುತ್ತಿರುವಾಗ ಹಲವಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಈ ಬಂಧನಗಳು ಸಹ ಜರುಗಿವೆ.

ಫರ್ಹಾನ್ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರೆ, ರವೀಶ್ ಪ್ರಸ್ತುತ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಫರ್ಹಾನ್ ಅವರ ವಿರುದ್ಧ ಸುಮಾರು 10-11 ಆರೋಪಗಳನ್ನು ಪೊಲೀಸರು ಹೊರಿಸಿದ್ದಾರೆ. ಫರ್ಹಾನ್ ಮತ್ತು ರವಿಶ್ ವೈಯಕ್ತಿಕ ಕೆಲಸಗಳಿಗಾಗಿ ಮದ್ರಾಕ್ ಬಳಿ ಕಾರಿನಲ್ಲಿ ಚಲಿಸುತ್ತಿದ್ದಾಗ, ನಾಗರಿಕರ ಬಟ್ಟೆಯಲ್ಲಿದ್ದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನಾವು ವೇಗವಾಗಿ ಕಾರು ಚಲಾಯಿಸುತ್ತಿದ್ದೆವು. ಪೊಲೀಸರು ನಮ್ಮ ಕಾರನ್ನು ನಿಲ್ಲಿಸಿ, ಬ್ಯಾರಿಕೇಡ್ ಅನ್ನು ನಮ್ಮ ಕಾರಿನ ಕಡೆಗೆ ಎಸೆದರು, ಅದು ಸೈಡ್ ವ್ಯೂ ಕನ್ನಡಿ ಬಿದ್ದು ನನ್ನ ಕೈಗೆ ಬಡಿಯಿತು. ನನಗೆ ಗಾಯಗಳಾಗಿವೆ ಆದರೆ ಗಂಭೀರವಾಗಿಲ್ಲ” ಎಂದು ರವಿಶ್ ದಿ ಕ್ವಿಂಟ್‌ಗೆ ತಿಳಿಸಿದ್ದಾರೆ.

ಫರ್ಹಾನ್ ವಿರುದ್ಧ ಪೊಲೀಸರು ಹಲವು ಆರೋಪಗಳನ್ನು ಹೊರಿಸಿದ್ದಾರೆ. ನನ್ನ ಮೇಲೆ ಯಾವುದೇ ಪ್ರಕರಣಗಳಿಗಲ್ಲ. ಆದರೂ ಸಹ ನನ್ನನ್ನು ಸುಮಾರು ಆರು ಗಂಟೆಗಳ ಕಾಲ ಬಂಧಿಸಿದ್ದರು ಎಂದು ರವೀಶ್‌ ತಿಳಿಸಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿಗೆ ಸಂಬಂಧಿಸಿದಂತೆ ಈ ಬಂಧನಗಳು ನಡೆಯುತ್ತಿರುವುದು ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.

ಫರ್ಹಾನ್ ವಿರುದ್ಧ ದೇಶದ್ರೋಹ, ಕೊಲೆ ಯತ್ನದ ಆರೋಪ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಫರ್ಹಾನ್ ಅವರು ವಿಶ್ವವಿದ್ಯಾಲಯದ ಸಮನ್ವಯ ಸಮಿತಿಯ ಸದಸ್ಯರಗಿದ್ದರು. ಅವರ ವಿರುದ್ಧದ ಆರೋಪಗಳ ಕೆಲವು ಐಪಿಸಿ ವಿಭಾಗಗಳು ಕೆಳಗಿನಂತಿವೆ.

188 – ಸಾರ್ವಜನಿಕ ಕೆಲಸಕ್ಕೆ ಅಡ್ಡಿ ಮತ್ತು ಅಸಹಕಾರ.
147 – ಗಲಭೆ ಪ್ರಯತ್ನ.
307 – ಕೊಲೆ ಯತ್ನ.
353 – ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಪರಾಧ.
504 – ಶಾಂತಿ ಉಲ್ಲಂಘಿಸುವ ಪ್ರಚೋದನೆ.
506 – ಕ್ರಿಮಿನಲ್ ಬೆದರಿಕೆ.
336 – ಜೀವಬೆದರಿಕೆ.
124 ಎ – ದೇಶದ್ರೋಹ.
153 ಎ – ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು.

ಕಳೆದ ವಾರವಷ್ಟೇ ಜೆಎನ್‌ಯೂ ವಿಶ್ವವಿದ್ಯಾನಿಲಯ ಪಿಂಜ್ರಾತೋಡ್‌ ಸಂಘಟನೆಯ ಕಾರ್ಯಕರ್ತರಾದ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಬಂಧಿಸಲಾಗಿತ್ತು. ನಾಲ್ಕು ದಿನಗಳಿಂದ ಅವರನ್ನು ಕಸ್ಟಡಿಯಲ್ಲಿಡಲಾಗಿದೆ.

ಮೇ 23 ರಂದು ಜಫರಾಬಾದ್ ಧರಣಿ ಪ್ರತಿಭಟನೆಯಲ್ಲಿ ಪಾತ್ರವಹಿಸಿದ್ದಕ್ಕಾಗಿ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಯಿತು ಮತ್ತು ಮರುದಿನ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಇಬ್ಬರು ಮಹಿಳೆಯರನ್ನು ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಮತ್ತೆ ಬಂಧಿಸಲಾಯಿತು.

ಅವರ ಮೇಲೆ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳು ಮತ್ತು ಸಾರ್ವಜನಿಕ ಆಸ್ತಿ ನಾಶವನ್ನು ತಡೆಗಟ್ಟುವ ಕಾಯ್ದೆಯಡಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಮತ್ತೆರೆಡು ದಿನ JNU ಕಾರ್ಯಕರ್ತೆಯರ ಪೊಲೀಸ್‌ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...