ಸದನ ಸಮಿತಿ ಕಾರ್ಯಭಾರಕ್ಕೆ ಇಲ್ಲಿಯವರೆಗೆ ಯಾವ ಸ್ವೀಕರ್ ಕೂಡ ಅಡ್ಡಿಪಡಿಸಿರಲಿಲ್ಲ. ಆದರೆ, ಇದೇ ಮೊದಲ ಬಾರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಮಿತಿಯ ಕಾರ್ಯಗಳಿಗೆ ಅಡ್ಡಿಪಡಿಸಿದ್ದಾರೆ. ಪಿಪಿಇ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ತಡೆ ಸ್ಪೀಕರ್ ಕಾಗೇರಿಯವರು ತಡೆನೀಡಿರುವ ಕಾರಣ ವಿರುದ್ಧವೇ ಹಕ್ಕುಚ್ಯುತಿ ಮಂಡನೆಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ನಿರ್ಧರಿಸಿದೆ ಎಂದು ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಅವ್ಯವಹಾರಗಳ ಬಗ್ಗೆ ತನಿಖೆ ಮಾಡಲು ಸ್ವಾತಂತ್ರ್ಯ ಸಿಗುತ್ತಿಲ್ಲ. ಕರ್ತವ್ಯ ನಿರ್ವಹಣೆಗೆ ಚ್ಯುತಿಯಾಗಿದೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿಯವರನ್ನು ಭೇಟಿ ಮಾಡಿ ತಿಳಿಸಲಾಗಿದೆ. ಸ್ಪೀಕರ್ ವಿರುದ್ಧ ಹಕ್ಕುಚ್ಯುತಿಯನ್ನು ಸಲ್ಲಿಸುವ ಬಗ್ಗೆ ಮಂಗಳವಾರ ಸಭೆ ನಡೆಸಿ ತೀರ್ಮಾನಿಸುವುದಾಗಿ ಎಚ್.ಕೆ.ಪಾಟೀಲ್ ಹೇಳಿದರು.
ಪಿಪಿಎ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲವೆಂಬ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್.ಕೆ.ಪಾಟೀಲ್, ಪಿಪಿಇ ಕಿಟ್ ಅವ್ಯವಹಾರದ ಬಗ್ಗೆ ಸಮಿತಿಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಇದರ ಪರಿಶೀಲನೆ ಮಾಡಲು ಹೊರಟಿದ್ದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯೇ ಹೊರತು ಕಾಂಗ್ರೆಸ್ ಪಕ್ಷ ಅಲ್ಲ ಎಂದು ತಿರುಗೇಟು ನೀಡಿದರು.
ಓದಿ: ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ
ವಿಡಿಯೋ ನೋಡಿ: ಈ ಸುದ್ದಿ… ಕರ್ನಾಟಕ ತಲೆ ತಗ್ಗಿಸಬೇಕಾದ ಸುದ್ದಿ


