Homeಕರ್ನಾಟಕಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

- Advertisement -
- Advertisement -

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, “ಎಐಸಿಸಿಯಿಂದ ಕೆಲ ವಿಚಾರಗಳ ಪ್ರಸ್ತಾಪ ಮಾಡಲು ಆದೇಶ ಇದೆ.  ಕೊರೊನಾ ಹಿನ್ನೆಲೆಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡುವುದು ಬೇಡ ಅಂದುಕೊಂಡಿದ್ದೆ. ಆದರೆ ಹೈಕಮಾಂಡ್ ಸೂಚನೆ ಮೇರೆಗೆ ಮಾತನಾಡುತ್ತಿದ್ದೇನೆ. ಕೊರೊನಾದಿಂದ ಇಡೀ ದೇಶ ಅಲ್ಲೋಲ ಕಲ್ಲೋಲವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ. ಇದಕ್ಕೆ ಯಾರು ಹೊಣೆ? ಯುದ್ದದ ಸಮಯದಲ್ಲೂ ಇಂತಹ ಕಷ್ಟ ಆಗಿರಲಿಲ್ಲ. ಕೇಂದ್ರ ಯಾವುದೇ ಯೋಜನೆ ಇಲ್ಲದೇ ಲಾಕ್ಡೌನ್ ಮಾಡಿದೆ. 20 ಲಕ್ಷ ಕೋಟಿ ಶೇಕಡಾ 10 ಜಿಡಿಪಿ ಹಣ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ ಎಂದು ಹೇಳುತ್ತಾರೆ, ಆದರೆ 1.70 ಲಕ್ಷ ಕೋಟಿ ರೂಪಾಯಿ ಹಣ ಬಂದಿದೆ. ಬರೀ ಹೇಳಿದ್ದೇ ಹೇಳೋದು ಸುಳ್ಳು. ನಮಗೂ ಕೇಳಿ ಕೇಳಿ ಸಾಕಾಗಿದೆ. ಮೂರು ತಿಂಗಳ ಬಳಿಕ ಕಂತು ಕಟ್ಟಿ ಅಂದ್ರೆ ರಿಲೀಫ್ ಆಗುತ್ತಾ. ಕೆಲಸ ಇಲ್ಲದೇ ಮೂರು ತಿಂಗಳ ಬಳಿಕ ಹೇಗೆ ಕಂತು ಕಟ್ಟುತ್ತಾರೆ ಎಂದು ಖರ್ಗೆ ಪ್ರಶ್ನೆ ಮಾಡಿದರು.

ಕೂಲಿ ಕಾರ್ಮಿಕರು, ಕುಲಕಸುಬು ಆಧರಿಸಿದವರು ಬಹಳ ತೊಂದರೆಯಲ್ಲಿ ಇದ್ದಾರೆ. ಸಣ್ಣ ಕೈಗಾರಿಕೆಗಳು ಮತ್ತು ಅಸಂಘಟಿತ ಕಾರ್ಮಿಕರಿಗೆ ಬಾರಿ ತೊಂದರೆ ಆಗಿದೆ. ವಲಸಿಗ ಕಾರ್ಮಿಕರು ದೇಶದಲ್ಲಿ 8 ಕೋಟಿ ಜನ ಸಮಸ್ಯೆಯಲ್ಲಿ ಸಿಕ್ಕಿದ್ದಾರೆ. ಅವರ ಜೀವನ ಅಸ್ತವ್ಯಸ್ತ ಆಗಿದೆ. ರೈತರು ಮತ್ತು ರೈತ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಹಕನ ಬಳಿ ಹಣ ಇದ್ದರೆ ಖರೀದಿ ಮಾಡುವ ಶಕ್ತಿ ಬರುತ್ತದೆ.  ಮಾರುಕಟ್ಟೆಯಲ್ಲಿ ಬೇಡಿಕೆ ಬರುತ್ತದೆ. ಆದರೆ ಜನರ ಬಳಿ ಹಣ ಇಲ್ಲದೇ ಬೇಡಿಕೆ ಕುಸಿತ ಕಂಡಿದೆ ಎಂದು ಹೇಳಿದರು.

13 ಸಾವಿರ ಪ್ಯಾಸೆಂಜರ್ ರೈಲು ದೇಶದಲ್ಲಿ ಓಡಾಟ ಮಾಡುತ್ತಿದ್ದವು. 2.30 ಕೋಟಿ ಜನರು ದಿನವೂ ಪ್ರಯಾಣಿಸುತ್ತಿದ್ದರು. 5-6 ಕೋಟಿ ಜನ ವಲಸಿಗ ಕಾರ್ಮಿಕರು ಇದ್ರು. ಪ್ಯಾಸೆಂಜರ್ ರೈಲಿನಲ್ಲಿ ನಾಲ್ಕು ದಿನದಲ್ಲಿ ಕಳುಹಿಸಿಕೊಡಬಹುದಿತ್ತು. ಲಾಕ್ಡೌನ್​ಗೂ ಮೊದಲು ಅವರನ್ನು ಅವರ ಸ್ಥಳಗಳಿಗೆ ತಲುಪಿಸಬಹುದಿತ್ತು. ಹಾಗೇ ಮಾಡಿದ್ರೆ ಬೀದಿಯಲ್ಲಿ ಸಾವು, ರಸ್ತೆಯಲ್ಲಿ ಹೆರಿಗೆ ಆಗುವುದು ಕಾಣುತ್ತಿರಲಿಲ್ಲ. ರೈಲ್ವೆ ಹಳಿಗಳ ಮೇಲೆ ಮಲಗಿ ಸಾಯುತ್ತಿರಲಿಲ್ಲ. ಅನ್ನ ಮತ್ತು ನೀರಿಲ್ಲದೇ ಜನರು ಪ್ರಾಣ ಬಿಡುತ್ತಿರಲಿಲ್ಲ ಎಂದು ಕೇಂದ್ರ ಸರ್ಕಾರದ ನಡೆಯ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ 50 ಕೋಟಿ ಕೊಟ್ಟಿದ್ದಾರೆ. ಬರೀ ಪ್ರಚಾರ ಗಿಟ್ಟಿಸಿಕೊಳ್ಳುವುದಷ್ಟೇ ಇವರ ಕೆಲಸ. ಬಾಂಬೆಯಿಂದ ಲಕ್ನೋಗೆ ಹೋಗಬೇಕಾದರೆ ಬಿಹಾರ ಕಡೆ ಕಳಿಸಿದ್ದಾರೆ. ಮೂವತ್ತು ಗಂಟೆಯಲ್ಲಿ ಮುಗಿಯುವ ಪಯಣ 72 ಗಂಟೆ ಬೇಕಾಯಿತು. ಸೂಕ್ತ ವ್ಯವಸ್ಥೆ, ಊಟ ಇಲ್ಲದೆ ಇಷ್ಟು ಸಮಯ ಅವರು ರೈಲಿನಲ್ಲಿ ಇರೋದು ಹೇಗೆ? ಎಂದು ಖಾರವಾಗಿ ಪ್ರಶ್ನಿಸಿದರು.

ಸರ್ಕಾರ ಮಾತನಾಡಲು ಸಿದ್ದವಿದೆ. ಆದರೆ ಕೆಲಸ ಮಾಡುವ ಹುಮ್ಮಸ್ಸು ಇಲ್ಲ. ಜನರ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸಿಲ್ಲ. ಜನರಿಗಾಗಿ ನಾವು ಸುಮ್ಮನಿದ್ದೇವೆ. ಸರ್ಕಾರದ ವೈಫಲ್ಯಗಳನ್ನ ಜನರ ಗಮನಕ್ಕೆ ತರುತ್ತಿದ್ದೇವೆ. ಕೂಲಿ ಕಾರ್ಮಿಕರನ್ನು ಕಳುಹಿಸಿ ಕೊಡುವ ವಿಚಾರದಲ್ಲಿ ಕೇಂದ್ರ ರೈಲ್ವೆ ಇಲಾಖೆ ವಿಫಲವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ. ಕೂಡಲೇ ಕೇಂದ್ರ ರೈಲ್ವೆ ಸಚಿವ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದು ಖರ್ಗೆ ಒತ್ತಾಯಿಸಿದ್ದಾರೆ.


ಓದಿ: ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...