Homeಮುಖಪುಟಮೋದಿ ಭಾರತದ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ರೂಪಿಸಿದ್ದಾರೆ: ಯಶವಂತ್ ಸಿನ್ಹಾ ವ್ಯಂಗ್ಯ

ಮೋದಿ ಭಾರತದ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ರೂಪಿಸಿದ್ದಾರೆ: ಯಶವಂತ್ ಸಿನ್ಹಾ ವ್ಯಂಗ್ಯ

- Advertisement -
- Advertisement -

ಕೊರೊನಾ ವೈರಸ್ ಪ್ರಕರಣಗಳಲ್ಲಿ ಭಾರತ ಅಗ್ರಸ್ಥಾನಕ್ಕೆ ಏರುವುದು ಮತ್ತು ಆರ್ಥಿಕತೆಯು ಕುಸಿಯುತ್ತಿರುವ ಬಗ್ಗೆ ಮಾತನಾಡಿದ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ, ಪ್ರಧಾನಿ ನರೇಂದ್ರ ಮೋದಿ ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ರೂಪಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

“ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ರೂಪಿಸಿದ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು. ಮುಂದಿನ ವರ್ಷ ಇನ್ನಷ್ಟು ಉತ್ತಮವಾಗುವ ಭರವಸೆ ಮೂಡಿಸಿದ್ದು, ಕೊರೊನಾ ಪ್ರಕರಣದಲ್ಲಿ ಭಾರತ ಅಗ್ರ ಸ್ಥಾನಕ್ಕೇರಲಿದೆ ಜೊತೆಗೆ ಆರ್ಥಿಕತೆ ಸಂಪೂರ್ಣ ಕುಸಿಯಲಿದೆ “ಎಂದು ಯಶ್ವಂತ್ ಸಿನ್ಹಾ ಹೇಳಿದ್ದಾರೆ.

ಪ್ರಧಾನಿ ಮೋದಿ ತಮ್ಮ ಎರಡನೇ ಅವಧಿಯ ಆಡಳಿತದ ಮೊದಲ ವಾರ್ಷಿಕೋತ್ಸವದಂದು ರಾಷ್ಟ್ರಕ್ಕೆ ಬರೆದ ಪತ್ರವನ್ನು ಯಶ್ವಂತ್ ಸಿನ್ಹಾ ತನ್ನ ಟ್ವಿಟ್ಟರ್ ನಲ್ಲಿ ಬಳಸಿದ್ದಾರೆ. ಕಳೆದ ವರ್ಷ ಇದೇ ದಿನದಂದು ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದ ಸುವರ್ಣ ಯುಗವನ್ನು ಆರಂಭಿಸಲಾಗಿತ್ತು. ಹಲವು ದಶಕಗಳ ಬಳಿಕ ದೇಶದ ಜನತೆ ಪೂರ್ಣಾವಧಿಯನ್ನು ಪೂರೈಸಿದ್ದ ಸರಕಾರಕ್ಕೆ ಬಹುಮತ ನೀಡಿದ್ದರು ಎಂದು ಮೋದಿ ಪತ್ರದಲ್ಲಿ ಬರೆದಿದ್ದರು.

ಈ ಹಿಂದೆ ಬಿಜೆಪಿ ಸರ್ಕಾರಗಳಲ್ಲಿ ಹಣಕಾಸು ಮತ್ತು ವಿದೇಶಾಂಗ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ನಂತರ 2018 ರಲ್ಲಿ ಅವರು ಬಿಜೆಪಿಯನ್ನು ತೊರೆದಿದ್ದರು. ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ಮೋದಿ, ಕೇಂದ್ರ ಸರ್ಕಾರ ಹಾಗೂ ಅದರ ಆರ್ಥಿಕ ನೀತಿಗಳನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ.


ಓದಿ: ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...