Homeಮುಖಪುಟನಮ್ಮ ಬಗ್ಗೆ ಚಿಂತೆ ಬಿಡಿ, ಇತರರು ನಮಗಿಂತಲೂ ಹೆಚ್ಚು ಬಳಲುತ್ತಿದ್ದಾರೆ : ಕೊರೊನಾ ಸೋಂಕಿತೆ ನಟಿ...

ನಮ್ಮ ಬಗ್ಗೆ ಚಿಂತೆ ಬಿಡಿ, ಇತರರು ನಮಗಿಂತಲೂ ಹೆಚ್ಚು ಬಳಲುತ್ತಿದ್ದಾರೆ : ಕೊರೊನಾ ಸೋಂಕಿತೆ ನಟಿ ಮೋಹೆನಾ

- Advertisement -
- Advertisement -

ಟಿವಿ ತಾರೆ ಮೋಹೆನಾ ಕುಮಾರಿ ಸಿಂಗ್‌ರವರ ಇಡೀ ಕುಟುಂಬವೂ ಕೊರೊನಾ ವೈರಸ್‌ಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸುತ್ತಿರುವ ಅಭಿಮಾನಿಗಳಿಗೆ ಅವರು ’ನಮ್ಮ ಬಗ್ಗೆ ಚಿಂತೆ ಬಿಡಿ, ಇತರರು ನಮಗಿಂತಲೂ ಹೆಚ್ಚು ಬಳಲುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಯೆ ರಿಷ್ಟಾ ಕ್ಯಾ ಕೆಹ್ಲತಾ ಹೈ ಪಾತ್ರದಲ್ಲಿ ಹೆಸರುವಾಸಿಯಾಗಿರುವ ಮೋಹೆನಾರವರು ಇಂದು ಬೆಳಿಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ತಮಗೆ ಮತ್ತು ತಮ್ಮ ಕುಟುಂಬದ 17 ಜನಕ್ಕೆ ಕೊರೊನಾ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದಾರೆ. “ನಿದ್ರೆ ಮಾಡಲು ಸಾಧ್ಯವಿಲ್ಲ. ಈ ಆರಂಭಿಕ ದಿನಗಳು ಮನೆಯಲ್ಲಿ ನಮಗೆಲ್ಲರಿಗೂ ವಿಶೇಷವಾಗಿ ನಮ್ಮ ಮಕ್ಕಳು ಮತ್ತು ನಮ್ಮ ಹಿರಿಯರಿಗೆ ಕಷ್ಟಕರವಾಗಿದೆ. ಆದರೆ ನಾವು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ನಾವು ಚೆನ್ನಾಗಿರುತ್ತೇವೆ. ನಮಗಿಂತ ಹೆಚ್ಚು ಬಳಲುತ್ತಿರುವ ಜನರು ಸುತ್ತಲೂ ಇರುವುದರಿಂದ ಯಾವುದರ ಬಗ್ಗೆಯೂ ದೂರು ನೀಡಲು ನಮಗೆ ಹಕ್ಕಿಲ್ಲ” ಎಂದು ಬರೆದುಕೊಂಡಿದ್ದಾರೆ.

ಮೊಹೇನಾ ಅವರು 2019 ರ ಅಕ್ಟೋಬರ್‌ನಲ್ಲಿ ಸುಯೇಶ್ ರಾವತ್ (ಉತ್ತರಾಖಂಡ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರ ಪುತ್ರ) ಅವರನ್ನು ವಿವಾಹವಾದರು. ನಂತರ ಅವರು ಡೆಹ್ರಾಡೂನ್‌ಗೆ ಸ್ಥಳಾಂತರಗೊಂಡರು. ತಾನು, ತನ್ನ ಪತಿ, ಅತ್ತೆ, ಅತ್ತಿಗೆ ಮತ್ತು ತನ್ನ ಐದು ವರ್ಷದ ಮಗ ಮತ್ತು ಕುಟುಂಬದ ಇತರ ಕೆಲವು ಸದಸ್ಯರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿಯೂ ಅವರು ಈ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.

View this post on Instagram

??

A post shared by Mohena Kumari Singh (@mohenakumari) on

ತನ್ನ ಹೇಳಿಕೆಯಲ್ಲಿ, ತಾನು ಬೇಗ ಗುಣಮುಖಲಾಗಲೆಂದು ಹಾರೈಸಿದ ಅಭಿಮಾನಿಗಳಿಗೆ ಮೋಹೇನಾ ಕೃತಜ್ಞತೆಯ ಸಂದೇಶವನ್ನು ಅರ್ಪಿಸಿದ್ದಾರೆ. “ನೀವು ಕಳುಹಿಸುತ್ತಿರುವ ಎಲ್ಲಾ ಸಂದೇಶಗಳು, ಪ್ರಾರ್ಥನೆಗಳು ಮತ್ತು ಪ್ರೀತಿಗೆ ನಾನು ಪ್ರತಿಯೊಬ್ಬರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ಇದು ನಮ್ಮ ಉತ್ಸಾಹವನ್ನು ಉಳಿಸುತ್ತದೆ ಮತ್ತು ನಮ್ಮ ಹೃದಯದಲ್ಲಿ ನಿಮಗೆ ತುಂಬಾ ಕೃತಜ್ಞತೆ ಇದೆ” ಎಂದು ತಿಳಿಸಿದ್ದಾರೆ.

ಯೆ ರಿಷ್ಟಾ ಕ್ಯಾ ಕೆಹ್ಲತಾ ಹೈ ಚಿತ್ರದಲ್ಲಿ ಮೋಹೆನಾ ಜೊತೆ ನಟಿಸಿದ ಮತ್ತೊಬ್ಬ ನಟಿ ನಿಧಿ ಉತ್ತಮ್, “ಮೋಹ್, ಮತ್ತು ಇಡೀ ಕುಟುಂಬಕ್ಕೆ ನಮ್ಮೆಲ್ಲರ ಪ್ರಾರ್ಥನೆ ಮತ್ತು ಪ್ರೀತಿ. ನೀವು ಅಂತಹ ಪ್ರಬಲ ವ್ಯಕ್ತಿ ಎಂದು ನನಗೆ ತಿಳಿದಿದೆ, ನೀವು ಖಂಡಿತವಾಗಿಯೂ ಹೋರಾಡುತ್ತೀರಿ ಮತ್ತು ಬೇಗನೆ ಗುಣಮುಖರಾಗುತ್ತೀರಿ.” ಎಂದು ಬರೆದಿದ್ದಾರೆ.

ಮೋಹೇನಾ ಕುಮಾರಿ ಸಿಂಗ್ ಅವರು ಮಧ್ಯಪ್ರದೇಶದ ರೇವಾ ರಾಜಮನೆತನದ ಮಹಾರಾಜ ಪುಷ್‌ಪ್ರಜ್ ಸಿಂಗ್ ಮತ್ತು ರಾಗಿಣಿ ಸಿಂಗ್ ಅವರ ಪುತ್ರಿ. ಜನಪ್ರಿಯ ಟಿವಿ ಶೋ ಯೆ ರಿಷ್ಟಾ ಕ್ಯಾ ಕೆಹ್ಲತಾ ಹೈ ಚಿತ್ರದಲ್ಲಿ ಕೀರ್ತಿ ಗೋಯೆಂಕಾ ಪಾತ್ರವನ್ನು ನಿರ್ವಹಿಸುವುದರಲ್ಲಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ದಿಲ್ ದೋಸ್ತಿ ಡ್ಯಾನ್ಸ್ ಎಂಬ ಟಿವಿ ಕಾರ್ಯಕ್ರಮದಲ್ಲಿ ಮೋಹೆನಾ ಕೂಡ ಕಾಣಿಸಿಕೊಂಡಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋ ಝಲಕ್ ದಿಖ್ಲಾ ಜಾ ನಲ್ಲಿ ನೃತ್ಯ ಬೋಧಕಿಯಾಗಿಯೂ ಕೆಲಸ ಮಾಡಿದ್ದಾರೆ. ಅವರು ಡ್ಯಾನ್ಸ್ ರಿಯಾಲಿಟಿ ಶೋ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ 3 ನಲ್ಲಿ ಸ್ಪರ್ಧಿಯಾಗಿದ್ದರು.


ಇದನ್ನೂ ಓದಿ: ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....