Homeಮುಖಪುಟಉತ್ತರಪ್ರದೇಶದಲ್ಲಿ ಯುವಕನನ್ನು ಮರಕ್ಕೆ ಕಟ್ಟಿ ಸಜೀವ ದಹನ!

ಉತ್ತರಪ್ರದೇಶದಲ್ಲಿ ಯುವಕನನ್ನು ಮರಕ್ಕೆ ಕಟ್ಟಿ ಸಜೀವ ದಹನ!

- Advertisement -
- Advertisement -

ಉತ್ತರ ಪ್ರದೇಶದ ಪ್ರತಾಪಗಡ ಜಿಲ್ಲೆಯಲ್ಲಿ 22 ವರ್ಷದ ಯುವಕನನ್ನು ನೆರೆಹೊರೆಯವರು ಸೇರಿಕೊಂಡು ಮರಕ್ಕೆ ಕಟ್ಟಿ ಸೋಮವಾರ ರಾತ್ರಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ. ನೆರೆಯ ಮನೆಯ ಯುವತಿಯೊಂದಿಗೆ ಸಂಬಂಧ ಹೊಂದಿದ್ದಕ್ಕೆ ಕೋಪಗೊಂಡ ಜನರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ವರದಿಗಳು ಹೇಳುವಂತೆ ಯುವಕನಿಗೆ ಬೆಂಕಿ ಹಚ್ಚುವ ಮೊದಲು, ಯುವಕನ ಮನೆಗೆ ನುಗ್ಗಿದ ಹಲವಾರು ಜನರು, ಅವನನ್ನು ಹೊರಗೆ ಎಳೆದು ಥಳಿಸಿ, ಮರಕ್ಕೆ ಕಟ್ಟಿದ್ದರು ಎಂದಿದೆ.

ಗ್ರಾಮಸ್ಥರ ಗುಂಪೊಂದು ಘಟನೆಯ ನಂತರ ಹಳ್ಳಿಗೆ ಬಂದ ಪೊಲೀಸ್ ತಂಡದ ಮೇಲೆ ಹಲ್ಲೆ ನಡೆಸಿ ಎರಡು ವಾಹನಗಳು ಮತ್ತು ಮೋಟಾರ್ ಸೈಕಲ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದಾಗಿ ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಹತ್ಯೆಗೀಡಾದ ಯುವಕನನ್ನು ಅಂಬಿಕಾ ಪ್ರಸಾದ್ ಪಟೇಲ್ (22) ಎಂದು ಗುರುತಿಸಲಾಗಿದ್ದು, ಕಳೆದ ಒಂದು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು ಎಂದು ವರದಿಯಾಗಿದೆ. ಆದರೆ, ಯುವತಿಯ ಕುಟುಂಬ ಇದಕ್ಕೆ ವಿರುದ್ಧವಾಗಿತ್ತು. ಕೆಲವು ತಿಂಗಳ ಹಿಂದೆ ಯುವತಿಯೂ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗೆ ಆಯ್ಕೆಯಾಗಿ ಕಾನ್ಪುರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಆದರೆ ಕೆಲವು ವಾರಗಳ ಹಿಂದೆ, ಅವರಿಬ್ಬರ ಆತ್ಮೀಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

“ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಯುವತಿ ಹಾಗೂ ಆಕೆಯ ಪೋಷಕರು ಅಂಬಿಕಾ ಪಟೇಲ್ ಅವರನ್ನು ನಿಂದಿಸಿದ್ದರು. ಯುವತಿಯ ಮುಗ್ದತೆಯನ್ನು ಬಲತ್ಕಾರ ಮಾಡಲು ಬಳಸಿದ್ದಕ್ಕಾಗಿ ಪಟೇಲ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಕೂಡಾ ದಾಖಲಿಸಲಾಗಿತ್ತು. ಈಗ ನೆರೆಯ ಕೆಲವು ಜನರು ಅವರನ್ನು ಜೀವಂತ ಸುಟ್ಟುಹಾಕಲಾಗಿದೆ” ಎಂದು ಪ್ರತಾಪಗಡದ ಪೊಲೀಸ್ ಮುಖ್ಯಸ್ಥ ಅಭಿಷೇಕ್ ಸಿಂಗ್ ಹೇಳಿದ್ದಾರೆ.

ತನ್ನ ಮೇಲೆ ಪ್ರಕರಣ ದಾಖಲಾದ ನಂತರ ಅಂಬಿಕಾ ಪ್ರಸಾದ್ ಪಟೇಲ್ ಜೈಲಿಗೆ ಹೋಗಿದ್ದರು, ಆದರೆ ಮೇ 1 ರಂದು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಕೊರೊನಾ ಹಿನ್ನಲೆಯಲ್ಲಿ 71 ಜೈಲುಗಳಲ್ಲಿ ದಾಖಲಾದ 11,000 ಕೈದಿಗಳನ್ನು ಮುಕ್ತಗೊಳಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿತ್ತು.

ಯುವತಿಯ ತಂದೆ ಸೇರಿದಂತೆ ಅಪರಾಧದಲ್ಲಿ ಭಾಗವಹಿಸಿದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.  ಪಟೇಲ್ ಅವರ ಅರ್ಧ ಸುಟ್ಟ ಶವವನ್ನು ಶವಪರೀಕ್ಷೆಗೆ ಕಳುಹಿಸಲಾಗಿದ್ದು, ಗ್ರಾಮದಲ್ಲಿ ಭಾರಿ ಪೊಲೀಸ್ ಬಂದೊಬಸ್ತ್ ಮಾಡಲಾಗಿದೆ.


ಓದಿ: ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...