Homeಮುಖಪುಟಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣ ಕೇರಳದ ಮಲಪ್ಪುರಂ ಜಿಲ್ಲೆಯ ವಲಂಚೇರಿಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಲಂಚೇರಿ ಮೂಲದ ಬಾಲಕೃಷ್ಣನ್ ಎಂಬವರ ಪುತ್ರಿ ದೇವಿಕಾ (14) ಸ್ವತಃ ಬೆಂಕಿ ಹಚ್ಚಿ ಜೀವ ಕಳೆದುಕೊಂಡಿದ್ದಾರೆ.

ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣ ಖಿನ್ನತೆಗೆ ಒಳಗಾಗಿದ್ದ ಬಾಲಕಿಯೂ ಈ ಹೆಜ್ಜೆ ಇಟ್ಟಿದ್ದಾರೆ ಎಂದು ವಿದ್ಯಾರ್ಥಿನಿಯ ಪೋಷಕರು ತಿಳಿದ್ದಾರೆ.

“ಮನೆಯಲ್ಲಿ ಟೆಲಿವಿಷನ್ ಕಾರ್ಯನಿರ್ವಹಿಸದ ಕಾರಣ ಮಗುವಿಗೆ ತೊಂದರೆಯಾಯಿತು. ಜೊತೆಗೆ, ಯಾವುದೇ ಸ್ಮಾರ್ಟ್‌ಫೋನ್ ಇರಲಿಲ್ಲ. ಇದರಿಂದಾಗಿ ಅಧ್ಯಯನದ ಮೇಲೆ ಪರಿಣಾಮ ಬೀರುತ್ತದೆಂದು ಅವಳು ಹೆದರುತ್ತಿದ್ದಳು” ಎಂದು ಪೋಷಕರು ಹೇಳಿದ್ದಾರೆ.

ದಿನಗೂಲಿ ಕಾರ್ಮಿಕರಾಗಿರುವ ಬಾಲಕೃಷ್ಣನ್ ಕೊರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ  ನಿರುದ್ಯೋಗಿಯಾಗಿದ್ದರು ಎನ್ನಲಾಗಿದೆ.

ಕುಟುಂಬವು ಸ್ಮಾರ್ಟ್‌‌ಫೋನ್ ಹೊಂದಿರಲಿಲ್ಲ ಹಾಗೂ ಅವರ ಟಿವಿಯೂ ಸ್ವಲ್ಪ ಸಮಯದ ಹಿಂದೆ ಹಾಳಾಗಿದ್ದು, ಆನ್‌ಲೈನ್ ತರಗತಿಗಳು ಪ್ರಾರಂಭವಾಗುವ ಮೊದಲು ಅದನ್ನು ದುರಸ್ತಿ ಮಾಡಲು ದೇವಿಕಾ ತನ್ನ ತಂದೆಯನ್ನು ಕೇಳಿಕೊಂಡಿದ್ದರು. ಆದರೆ ಆರ್ಥಿಕ ಪರಿಸ್ಥಿತಿಯೂ ಸರಿಯಿಲ್ಲದ ಕಾರಣದಿಂದ ಕುಟುಂಬಕ್ಕೆ ಅದನ್ನು ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ದೇವಿಕಾ ಮನೆಯಿಂದ ದೊರೆತ ಆತ್ಮಹತ್ಯಾ ಪತ್ರದಲ್ಲಿ ತಪ್ಪಿಹೋದ ತರಗತಿಗಳು ಹಾಗೂ ಅವರ ಕುಟುಂಬದ ಆರ್ಥಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಸೋಮವಾರ ಸಂಜೆ 6 ಗಂಟೆಗೆ ತನ್ನ ಮನೆಯ ಸಮೀಪದ ನಿರ್ಜನ ತೋಟದಲ್ಲಿ ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಕೇರಳದ ಶಾಲಾ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಆನ್‌ಲೈನ್‌‌ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಒಂದರಿಂದ ಹನ್ನೆರಡನೇ ತರಗತಿಯ ವಿಶೇಷ ಅವಧಿಗಳು ಕೈಟ್ ವಿಕ್ಟರ್ಸ್ ಚಾನೆಲ್ ಮತ್ತು ಇಂಟರ್ನೆಟ್ ಮೂಲಕ ಪ್ರಸಾರವಾಗುತ್ತವೆ.

ಆದರೆ ಈ ಹೊಸ ವ್ಯವಸ್ಥೆಯ ಬಗ್ಗೆ ಮತ್ತು ಟಿವಿ ಅಥವಾ ಇಂಟರ್ನೆಟ್ ಇಲ್ಲದ ವಿದ್ಯಾರ್ಥಿಗಳು ತರಗತಿಗಳಿಗೆ ಹೇಗೆ ಹಾಜರಾಗುತ್ತಾರೆ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.


ಓದಿ: ಶಾಲೆಗಳು ಸಮಾಜ ಒಡೆಯುತ್ತಿವೆ: ಶಿಕ್ಷಣ ವ್ಯವಸ್ಥೆಯನ್ನು ತಲೆಕೆಳಗು ಮಾಡಬೇಕಿದೆ: ಇವಾನ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...