Homeಮುಖಪುಟಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ. ಆಮೂಲು ಸತತ ಮೂರನೇ ಬಾರಿಗೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

“ನೀವು ಕೆಂಡದೊಂದಿಗೆ ಆಟವಾಡಲು ಆಯ್ಕೆಮಾಡಿದಾಗ, ಕಿಡಿಯನ್ನು ಸ್ವಲ್ಪ ಹೆಚ್ಚು ದೂರ ಸಾಗಿಸಿ ನಂತರ ಬೆಂಕಿಯನ್ನು ಹರಡಿದ್ದು ಗಾಳಿ ಎಂದು ದೂಷಿಸಲು ಸಾಧ್ಯವಿಲ್ಲ” ಎಂದು ಜರ್ಗರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯ ಹೇಳಿದೆ.

ಪಟಿಯಾಲಾ ಹೌಸ್‌ ಕೋರ್ಟ್‌‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಈ ಪ್ರಕರಣದ ತನಿಖೆಯಲ್ಲಿ ದೊಡ್ಡ ಪಿತೂರಿ ಪತ್ತೆಯಾಗಿದೆ. ಕೃತ್ಯಗಳು ಮತ್ತು ಹೇಳಿಕೆಗಳ ಬಗ್ಗೆ ಪ್ರಾಥಮಿಕ ಸಾಕ್ಷ್ಯಗಳು ಇದ್ದಲ್ಲಿ, ಅದು ಎಲ್ಲರ ವಿರುದ್ಧವೂ ಸ್ವೀಕಾರಾರ್ಹ ಎಂದು ಹೇಳಿದ್ದಾರೆ. ಜರ್ಗರ್‌ಗೆ ಯಾವುದೇ ನೇರ ಹಿಂಸಾಚಾರದ ಆರೋಪವಿಲ್ಲದಿದ್ದರೂ ಸಹ, ಯುಎಪಿಎ ನಿಬಂಧನೆಗಳ ಅಡಿಯಲ್ಲಿ ಆಕೆ ತನ್ನ ಹೊಣೆಗಾರಿಕೆಯಿಂದ ದೂರ ಸರಿಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸರ್ಕಾರದ ನೀತಿಗಳನ್ನು ಅಂಗೀಕರಿಸದ ಮುಗ್ಧ ವಿದ್ಯಾರ್ಥಿಗಳ ಮೇಲೆ ತನಿಖಾ ಸಂಸ್ಥೆ ಸುಳ್ಳು ನಿರೂಪಣೆಯನ್ನು ರಚಿಸುತ್ತಿದೆ ಎಂದು ಆಕೆಯ ಸಲಹೆಗಾರರಾದ ರಿತೇಶ್ ಧಾರ್ ದುಬೆ ಮತ್ತು ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದರು. ಫೆಬ್ರವರಿ 23, 2020 ರಂದು ಚಾಂದ್ ಬಾಗ್‌ನಲ್ಲಿ ಜರ್ಗರ್ ಪ್ರಚೋದನಾಕಾರಿ ಭಾಷಣ ಮಾಡಿದರು ಎಂಬ ಪ್ರಾಸಿಕ್ಯೂಷನ್ ಆರೋಪ ಸರಿಯಿಲ್ಲ ಎಂದು ಅವರು ವಾದಿಸಿದರು. ಆ ದಿನ ಅವರು ಸ್ವಲ್ಪ ಸಮಯದವರೆಗೆ ಚಾಂದ್ ಬಾಗ್‌ಗೆ ಭೇಟಿ ನೀಡಿದ್ದರು ಆದರೆ ಹಿಂಸಾಚಾರ ಪ್ರಾರಂಭವಾಗುವ ಮೊದಲೇ ಅವರು ಅಲ್ಲಿಂದ ಹೊರಟಿದ್ದರು ಎಂದು ಅವರ ವಕೀಲರು ಹೇಳಿದ್ದಾರೆ. ಜೊತಗೆ ಅವರು ಫೆಬ್ರವರಿ 23 ರಂದು ಖುರೇಜಿಯಲ್ಲಿ ಭಾಷಣ ಮಾಡಿದ್ದರೂ ಸಹ ಅದು ಯಾವುದೇ ರೀತಿಯಲ್ಲಿ ಪ್ರಚೋದನಕಾರಿಯಾಗಿರಲಿಲ್ಲ ಎಂದು ವಾದಿಸಿದರು.

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ


ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಜರ್ಗರ್ ಅವರ “ಅನಿಶ್ಚಿತ ವೈದ್ಯಕೀಯ ಸ್ಥಿತಿ” ಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯ ತಿಹಾರ್ ಜೈಲು ಅಧೀಕ್ಷಕರಿಗೆ ಸಾಕಷ್ಟು ವೈದ್ಯಕೀಯ ನೆರವು ಮತ್ತು ಸಹಾಯವನ್ನು ನೀಡುವಂತೆ ಕೇಳಿಕೊಂಡಿದೆ.

ಫೆಬ್ರವರಿ 22-23ರಂದು ದೆಹಲಿಯ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಅಡಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ಆಯೋಜಿಸಿದವರಲ್ಲಿ ಜರ್ಗರ್‌ ಕೂಡ ಇದ್ದಾಳೆ ಎಂದು ಪೊಲೀಸರು ಆರೋಪಿಸಿ ಏಪ್ರಿಲ್ 13 ರಂದು ಅವರನ್ನು ಬಂಧಿಸಲಾಯಿತು. ಬಂಧನದ ಸಮಯದಲ್ಲಿ, ಜಾರ್ಗರ್ 13 ವಾರಗಳ ಗರ್ಭಿಣಿಯಾಗಿದ್ದಳು. ಕಳೆದ ತಿಂಗಳು ಸಹ, ಸಫೂರಾ ಜರ್ಗರ್ ಅವರ ವಕೀಲರು ಜಾಮೀನು ಕೋರಿ ಆಕೆಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಮತ್ತು ಎಫ್ಐಆರ್‌ನಲ್ಲಿ ಆಕೆಯ ಹೆಸರಿಸಲಾಗಿಲ್ಲ ಎಂದು ತಿಳಿಸಿದ್ದರು. ಆದರೂ ಅದನ್ನು ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಕ್ಕಾಗಿಯೇ ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಇನ್ನೂ ಜೀವಂತವಾಗಿದೆ ಎಂದು ಹೇಳಲಿಕ್ಕೂ ನಾಚಿಕೆ ಆಗುತ್ತೆ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...