Homeಮುಖಪುಟಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

- Advertisement -
- Advertisement -

ಪಂಜಾಬ್ ರಾಜ್ಯ ಕಾಂಗ್ರೆಸ್‌ ಒಡೆದ ಮನೆಯಾಗಿರುವುದು ಹಳೆಯ ಸುದ್ದಿ. ಆದರೆ, ಕ್ರಿಕೆಟಿಗ ಮಾಜಿ ಸಚಿವ ನವಜೋತ್‌ ಸಿಂಗ್ ಸಿಧು ಇದೀಗ ಎಎಪಿ ಪಾಲಾಗಲಿದ್ದಾರೆ ಎಂಬುದು ಹೊಸ ಸುದ್ದಿ. ಹೌದು..! ಕಳೆದ ಹಲವು ದಿನಗಳಿಂದ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಜೊತೆಗೆ ವೈಮನಸ್ಸು ಹೊಂದಿದ್ದ ಸಿಧು ಕೊನೆಗೂ ಆಮ್ ಆದ್ಮಿ ಪಾರ್ಟಿಯ ಪಾಲಾಗಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಸಿಧುಗೆ ಆದರದ ಸ್ವಾಗತ ನೀಡಿರುವುದು ಈ ಎಲ್ಲಾ ಗುಮಾನಿಗೆ ಕಾರಣವಾಗಿದೆ.

ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ ನಂತರ ಸಿಧು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ, ಬಿಜೆಪಿಯಲ್ಲಿ ಸರಿಯಾದ ಸ್ಥಾನಮಾನ ಸಿಗದಿದ್ದ ಕಾರಣ ಅವರು ಬಿಜೆಪಿ ತ್ಯಜಿಸಿ 2017ರ ವಿಧಾನಸಭಾ ಚುನಾವಣೆ ಸಂದರ್ಭದ್ಲಲಿ ಕಾಂಗ್ರೆಸ್ ಪಾಲಾಗಿದ್ದರು. ಅಸಲಿಗೆ ಅವರು ಕಾಂಗ್ರೆಸ್‌ ಸೇರುವ ಮುನ್ನವೇ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿತ್ತು. ಈ ಸಂಬಂಧ ನವಜೋತ್ ಸಿಂಗ್ ಸಿಧು ಜೊತೆಗೆ ಚುನಾವಣಾ ತಂತ್ರಗಾರ ನಿಪುಣ ಪ್ರಶಾಂತ್ ಕಿಶೋರ್ ಮಾತುಕತೆಯನ್ನೂ ನಡೆಸಿದ್ದರು.

ಆದರೆ, ಈ ಮಾತುಕತೆ ಫಲಪ್ರದವಾಗಲಿಲ್ಲ. ಹೀಗಾಗಿ ಸಿಧು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಅಲ್ಲದೆ, 2017ರ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಿಎಂ ಅಮರಿಂದರ್ ಸಿಂಗ್ ಅವರ ಸಚಿವ ಸಂಪುಟದಲ್ಲಿ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದರು. ಆದರೆ, ದಿನ ಕಳೆದಂತೆ ಸಿಎಂ ಅಮರಿಂದರ್‌ ಸಿಂಗ್ ಹಾಗೂ ಸಿಧು ನಡುವಿನ ಭಿನ್ನಾಭಿಪ್ರಾಯ ಬೆಳೆಯುತ್ತಲೇ ಇತ್ತು. ಈ ಕುರಿತು ಸಿಧು ಕಾಂಗ್ರೆಸ್‌ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್‌ ಗಾಂಧಿಗೆ ಹಲವು ಬಾರಿ ದೂರು ನೀಡಿದ್ದರು. ಆದರೆ, ಇದರಿಂದ ಯಾವುದೇ ಪ್ರಯೋಜನವಾಗಿರಲಿಲ್ಲ.
ಹೀಗಾಗಿ ಕೊನೆಗೂ ಸಿಧು ಕಾಂಗ್ರೆಸ್‌ ತೊರೆಯಲಿರುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ, ಪಂಜಾಬ್‌ನಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ಬಲವಾದ ಮತ್ತೊಂದು ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಅವರು ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ರಾಷ್ಟ್ರ ರಾಜಕಾರಣದಲ್ಲಿ ಪ್ರಸ್ತುತ ಸದ್ದು ಮಾಡುತ್ತಿದೆ.

ಇದಕ್ಕೆ ಇಂಬು ನೀಡುವಂತೆ ದೆಹಲಿಯ ಎಎಪಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, “ಕ್ರಿಕೆಟಿಗ ಮಾಜಿ ಸಚಿವ ನವಜೋತ್‌ ಸಿಂಗ್ ಸಿಧು ಎಎಪಿ ಸೇರಲು ಸಮ್ಮಿತಿ ಸೂಚಿಸಿದರೆ ಅವರನ್ನು ಸಂತೋಷದಿಂದ ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು” ಎಂಬ ಹೇಳಿಕೆ ಹಲವಾರು ಗುಮಾನಿಗಳಿಗೆ ಕಾರಣವಾಗಿದೆ. ಆದರೆ, ದೆಹಲಿ ಮೂಲಗಳ ಪ್ರಕಾರ ಸಿಧು ಎಎಪಿ ಸೇರ್ಪಡೆ ಖಚಿತ ಎನ್ನಲಾಗುತ್ತಿದೆ.

2017ರಲ್ಲಿ ನಡೆದ ಪಂಜಾಬ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುವಲ್ಲಿ ಸಫಲವಾಗಿತ್ತು. ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿಯನ್ನು ಸೋಲಿಸಿ ಅಧಿಕಾರಕ್ಕೆ ಬಂದಿತ್ತು. 117 ಸದಸ್ಯಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 77 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಎಎಪಿ 20, ಎಸ್ಎಡಿ 15, ಬಿಜೆಪಿ 3 ಹಾಗೂ ಲೋಕ ಇನ್ಸಾಫ್ ಪಾರ್ಟಿ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಚುನಾವಣೆಯಲ್ಲಿ ರಾಜಕೀಯ ತಂತ್ರಗಾರ ನಿಪುಣ ಪ್ರಶಾಂತ್‌ ಕಿಶೋರ್‌ ಕಾಂಗ್ರೆಸ್‌ ಪರ ಕೆಲಸ ಮಾಡಿದ್ದರು ಎಂಬುದು ಉಲ್ಲೇಖಾರ್ಹ.


ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ…


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...