Homeಮುಖಪುಟಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ

ಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಚೀನಾ ಕಾರಣವೆಂದು ಅಮೆರಿಕಾ ಪ್ರಾರಂಭಿಸಿದ ಅಭಿಯಾನದಿಂದ ಭಾರತ ದೂರವಿರಬೇಕು ಎಂದು ಚೀನಾ ಬಯಸಿದೆ. ಪೂರ್ವ ಲಡಾಕ್‌ನಲ್ಲಿ ಉಭಯ ರಾಷ್ಟ್ರಗಳ ನಡುವೆ ಗಡಿ ಉದ್ವಿಗ್ನತೆ ತಗ್ಗಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿರುವಾಗಲೂ, ಚೀನಾ ರಾಜತಾಂತ್ರಿಕ ಮಾರ್ಗಗಳ ಮೂಲಕ ಈ ವಿಷಯವನ್ನು ಭಾರತಕ್ಕೆ ತಿಳಿಸಿದೆ.

ಭಾರತ ಮತ್ತು ಚೀನಾದ ಹಿರಿಯ ರಾಜತಾಂತ್ರಿಕರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿರುವಾಗ ಕೊರೊನಾ ಸಾಂಕ್ರಾಮಿಕ ವಿಷಯ ಕೂಡಾ ಚರ್ಚೆಗೆ ಬಂದಿದೆ. ಈ ವಿಡಿಯೋ-ಕಾನ್ಪರೆನ್ಸ್ ಭಾರತೀಯ ಸೇನೆಯ ಕಮಾಂಡರ್‌ಗಳು ಮತ್ತು ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿಯ ಜೊತೆಗೆ ಮಾತುಕತೆಯ ಚೌಕಟ್ಟನ್ನು ನಿಗದಿಪಡಿಸಿತು.

“ಭಾರತ ಮತ್ತು ಚೀನಾದ ಹಿರಿಯ ರಾಜತಾಂತ್ರಿಕರು, ಚೀನಾ ಮತ್ತು ಭಾರತವು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಸಹಕಾರವನ್ನು ಇನ್ನಷ್ಟು ಹೆಚ್ಚಿಸಬೇಕು, ವಿಶ್ವ ಆರೋಗ್ಯ ಸಂಸ್ಥೆಗೆ ಬೆಂಬಲ, ಬಹುಪಕ್ಷೀಯತೆಯನ್ನು ದೃಡವಾಗಿ ಎತ್ತಿಹಿಡಿದು ಹಾಗೂ ಉತ್ತೇಜಿಸಿ ಅಭಿವೃದ್ಧಿಶೀಲ ರಾಷ್ಟ್ರಗಳ ಸಾಮಾನ್ಯ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಬೇಕು ಎಂದು ಒಪ್ಪಿಕೊಂಡರು” ಎಂದು ಭಾರತದ ಚೀನಾ ರಾಯಭಾರಿ ಸನ್ ವೀಡಾಂಗ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌‌ನಲ್ಲಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ನವೀನ್ ಶ್ರೀವಾಸ್ತವ ಭಾರತವನ್ನು ಪ್ರತಿನಿಧಿಸಿದರೆ. ವೂ ಜಿಯಾಂಗ್‌ಹಾವೊ, ಚೀನಾ ಸರ್ಕಾರದ ನಿಯೋಗವನ್ನು ಮುನ್ನಡೆಸಿದರು.

“ಕೊರೊನಾ ಸಾಂಕ್ರಾಮಿಕ ಮತ್ತು ವಿವಿಧ ಬಹುಪಕ್ಷೀಯ ವೇದಿಕೆಗಳಲ್ಲಿ ಎದುರಿಸುತ್ತಿರುವ ಸವಾಲಿನ ಬಗ್ಗೆ ಎರಡೂ ಕಡೆಯವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು” ಎಂದು ವಿದೇಶಾಂಗ ಸಚಿವಾಲಯ  ನವದೆಹಲಿಯಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೆ, ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬೀಜಿಂಗ್‌ನಲ್ಲಿ ಬಿಡುಗಡೆ ಮಾಡಿದ ಪ್ರತ್ಯೇಕ ಪತ್ರಿಕಾ ಪ್ರಕಟಣೆಯಲ್ಲಿ ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಎರಡೂ ದೇಶಗಳು ಸಹಾಕಾರ ಮಾಡುವುದಾಗಿ ಹಾ‌ಗೂ ಸಾಂಕ್ರಾಮಿಕ ಪರಿಸ್ಥಿತಿಯ ರಾಜಕೀಯೀಕರಣವನ್ನು ವಿರೋಧಿಸಲು ಒಪ್ಪಿಕೊಂಡಿದೆ ಎಂದು ಹೇಳಿದೆ.

ಅಮೆರಿಕಾ ಕೊರೊನಾ ಸಾಂಕ್ರಮಿಕಕ್ಕೆ ಚೀನಾ ಕಾರಣವೆಂದು ಪದೇ ಪದೇ ಹೇಳುತ್ತಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿ ಇದೆ ಎಂದು ಆರೋಪಿಸಿದ್ದರು. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಗೆ ಧನ ಸಹಯ ಮಾಡುವುದನ್ನು ಕೂಡಾ ಅಮೆರಿಕಾ ನಿಲ್ಲಿಸಿದೆ. ಆದರೆ ಕೊರೊನಾ ಕಾರಣಕ್ಕಾಗಿ ಚೀನಾವನ್ನು ದೂರುವ ಕಾರ್ಯದಿಂದ ಭಾರತ ಅಂತರ ಕಾಯ್ದುಕೊಂಡಿತ್ತು.

ಆದಾಗ್ಯೂ, ಯುರೋಪಿಯನ್ ಒಕ್ಕೂಟ ಮತ್ತು ಇತರ ಹಲವಾರು ರಾಷ್ಟ್ರಗಳು ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ಪ್ರಾಯೋಜಿಸಿದ ವೈರಸ್‌ನ ಮೂಲವನ್ನು ಪತ್ತೆ ಹಚ್ಚುವ ನಿರ್ಣಯದೊಂದಿಗೆ ಭಾರತ ನಿಂತು ಕೊಂಡಿದೆ.

ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೂರವಾಣಿಯಲ್ಲಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆಯ ಬಗ್ಗೆಯೂ ಚರ್ಚಿಸಿದ್ದರು.


ಓದಿ: ಭಾರತ-ಚೀನಾ ಗಡಿ ವಿವಾದ-ವಿಶ್ವದ ಬಲಶಾಲಿ ದೇಶಗಳು ಭಾರತದ ಪರ ನಿಂತಿವೆಯೇ? ಫೋಸ್ಟ್ ಕಾರ್ಡ್ ಹರಡಿದ ಸುಳ್ಳುಗಳೇನು ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...