HomeUncategorizedಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಮಾತು : ಯುಪಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲೆ ವಜಾ

ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಮಾತು : ಯುಪಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲೆ ವಜಾ

- Advertisement -
- Advertisement -

ಉತ್ತರ ಪ್ರದೇಶ ಕಾನ್ಪುರದ ಸರಕಾರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲೆ ಡಾ.ಆರತಿ ಲಾಲ್‌ ಚಾಂದನಿ ಅವರ ದ್ವೇಷ ಮಾತುಗಳಿಗಾಗಿ ಅವರನ್ನು ಅವರ ಹುದ್ದೆಯಿಂದ ಕಿತ್ತೊಗೆಯಲಾಗಿದೆ. ಅವರು ತಬ್ಲೀಘಿ ಜಮಾಅತ್‌ ಮುಸ್ಲಿಮರನ್ನು ಭಯೋತ್ಪಾದಕರು ಎಂದು ಉಲ್ಲೇಖಿಸಿ ದ್ವೇಷಕಾರುವ ಮಾತುಗಳನ್ನು ಆಡಿದ್ದರು. ಈ ಮಾತಿನ ವಿಡಿಯೊ ವೈರಲ್‌ ಆಗಿ ಭಾರೀ ಕೋಲಾಹಲವನ್ನೆಬ್ಬಿಸಿತ್ತು.

ವೀಡಿಯೊದಲ್ಲಿ ತಾನು ‘ತಬ್ಲೀಘಿ ಅಥವಾ ಮುಸ್ಲಿಮರು’ ಎಂಬ ಪದವನ್ನು ಹೇಳಿಲ್ಲ ಎಂದಿರುವ ಆರತಿ, ಪತ್ರಕರ್ತ ವಿಡಿಯೋವನ್ನು ಮಾರ್ಫ್ ಮಾಡಿದ್ದಾರೆ. ತನ್ನಿಂದ ಹಣವನ್ನು ಸುಲಿಗೆ ಮಾಡಲು ಅವರು ಈ ರೀತಿ ಮಾಡಿದ್ದಾರೆ. ಪತ್ರಕರ್ತನ ವಿರುದ್ದ ಎಫ್‌ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ.

 

ಈ ಸಂಬಂಧ ವೈದ್ಯಕೀಯ ಶಿಕ್ಷಣ ಪ್ರಧಾನ ಕಾರ್ಯದರ್ಶಿ ರಜನೀಶ್ ದುಬೆ, ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್  ಅವರಿಂದ ವರದಿ ಕೋರಿದ್ದರು, ಇದಾದ ನಂತರ ಪ್ರಾಂಶುಪಾಲರಾದ ಡಾ.ಆರತಿ ಲಾಲ್‌ ಚಾಂದನಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇದಲ್ಲದೆ ವೈದ್ಯೆಯ ದ್ವೇಷ ಮಾತಿನ ವಿಡಿಯೊ ಜಾಗತಿಕ ಮಟ್ಟದಲ್ಲಿ ವೈರಲ್‌ ಆಗಿದ್ದು, ಗಲ್ಪ್ ದೇಶಗಳಲ್ಲಿ ಹಿಂದೂ ವೈದ್ಯರು ಹಾಗೂ ದಾದಿಯರನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹ ಪ್ರಾರಂಭವಾಗಿದೆ. ಅಲ್ಲದೆ ಭಾರತೀಯರೊಂದಿಗೆ ಎಲ್ಲಾ ಆರೋಗ್ಯ ಸೇವೆಗಳ ಒಪ್ಪಂದವನ್ನು ತಕ್ಷಣಕ್ಕೆ ನಿಲ್ಲಿಸಬೇಕು ಎಂದು ಕುವೈತ್‌ನ ಪ್ರಭಾವಿ ಸಂಸದರಾದ ಮೊಹಮ್ಮದ್ ಹೈಫ್ ಅಲ್ ಮುತೈರಿ ತಮ್ಮ ದೇಶದ ಆರೋಗ್ಯ ಸಚಿವಾಲಯವನ್ನು ಒತ್ತಾಯಿಸಿದ್ದಾರೆ.

ಅಲ್ಲಿನ ಸಾಮಾಜಿಕ ಕಾರ್ಯಕರ್ತರು ಕೂಡಾ ಇದಕ್ಕೆ ಧ್ವನಿ ಸೇರಿಸಿದ್ದಾರೆ. ಮುಸ್ಲಿಂ ರೋಗಿಗಳಿಗೆ ವಿಷವುಣಿಸಿ ಕೊಲ್ಲಲು ಹಿಂದೂತ್ವ ವೈದ್ಯರು ಸ್ವಯೋಪ್ರೇರಿತರಾಗಿ ಹೊರಟಿರುವುದು ಅತ್ಯಂತ ಅಪಾಯಕಾರಿ ಪ್ರವೃತ್ತಿಯಾಗಿದೆ. ಅರಬ್ ಸಂಸತ್ತು ಹಾಗೂ ಆರೋಗ್ಯ ಸಚಿವಾಲಯ ಎಚ್ಚೆತ್ತುಕೊಂಡಿವೆ, ಮದ್ಯ ಪ್ರಾಚ್ಯದಲ್ಲಿ ಇಸ್ಲಾಮೋಫೋಬಿಕ್ ಸಂಘಿ ವೈದ್ಯರನ್ನು ತಡೆಯಲು ಹಾಗೂ ತನಿಖೆ ಮಾಡಲಾಗುತ್ತಿದೆ ಎಂದಿದ್ದಾರೆ.

ಡಾ.ಆರತಿ ಲಾಲ್‌ ಚಾಂದನಿ ಮಹಾರಾಣಿ ಲಕ್ಷ್ಮಿ ಬಾಯಿ ವೈದ್ಯಕೀಯ ಕಾಲೇಜು  ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ದ್ವೇಷ ಮಾತುಗಳನ್ನು ಸ್ಟಿಂಗ್‌ ಮೂಲಕ ಚಿತ್ರೀಕರಿಸಿದ ಪತ್ರಕರ್ತನ ವಿರುದ್ಧ ಯಾವುದೇ ಎಫ್‌ಐಆರ್ ಇನ್ನೂ ದಾಖಲಾಗಿಲ್ಲ ಎನ್ನಲಾಗದೆ.


ಓದಿ:  ಕ್ಯಾಮರ ಎದುರೆ ಇಸ್ಲಾಮೋಫೋಬಿಯ ಹರಡಿದ ಪ್ರಾಂಶುಪಾಲೆ: ತೀವ್ರ ವಿರೋಧ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...