Homeಮುಖಪುಟದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

- Advertisement -
- Advertisement -

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ಪ್ರಚೋದನಾಕಾರಿ ದ್ವೇಷದ ಬಗ್ಗೆ ಯಾವುದೇ ಉಲ್ಲೇಖ ಮಾಡದೇ, ಆ ಸಮಯದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ಮೇಲೆ ಆಪಾದನೆಯನ್ನು ಹೊರಿಸಲಾಗಿದೆ.

2,000 ಪದಗಳ ಕಾಲಾನಕ್ರಮಣಿಕೆಯಲ್ಲಿ ಡಿಸೆಂಬರ್ 13 ರಿಂದ ಫೆಬ್ರವರಿ 25 ರವರೆಗೆ ನಡೆದ ಘಟನೆಗಳನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಕಪಿಲ್ ಮಿಶ್ರಾ ಸೇರಿದಂತೆ ಬಿಜೆಪಿ ನಾಯಕರ ದ್ವೇಷದ ಭಾಷಣಗಳನ್ನು ಪೊಲೀಸರು ಎಲ್ಲಿಯೂ ಉಲ್ಲೇಖಿಸಿಲ್ಲ.

ಚಾರ್ಜ್‌ಶೀಟ್‌ನಲ್ಲಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಶಾಹೀನ್ ಬಾಗ್ ಮತ್ತು ಸಿಎಎ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದ ಸ್ಥಳದಲ್ಲಿದ್ದ ಪ್ರತಿಭಟನಾಕಾರರ ಬಗ್ಗೆ ಮಾತ್ರ ಉಲ್ಲೇಖಿಸಲಾಗಿದೆ.

ಕೋಮುವಾದಿ ಮತ್ತು ದ್ವೇಷದ ಟ್ವೀಟ್‌ಗಳಿಗೆ ಹೆಸರುವಾಸಿಯಾದ ಕಪಿಲ್ ಮಿಶ್ರಾ ಫೆಬ್ರವರಿ 23 ರಂದು ಈಶಾನ್ಯ ದೆಹಲಿಯ ಜಾಫ್ರಾಬಾದ್‌ ಬಳಿಯ ಮೌಜ್‌ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರ್‍ಯಾಲಿಯನ್ನು ನಡೆಸಿದ್ದರು. ಅಲ್ಲಯೇ ಸಿಎಎ ವಿರೋಧಿ ಹೋರಾಟ ಸಹ ನಡೆಯುತ್ತಿತ್ತು.

“ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ನಾವೇ ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಕಪಿಲ್‌ ಮಿಶ್ರಾ ಆಡಿದ್ದ ಮಾತುಗಳು ವೈರಲ್‌ ಆಗಿದ್ದವು. ಕೆಲವು ಗಂಟೆಗಳ ನಂತರ, ಎರಡು ಗುಂಪುಗಳ ನಡುವೆ ಘರ್ಷಣೆಗಳು ಭುಗಿಲೆದ್ದವು, ಅದು ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಾಯಿತು. ಹಿಂಸಾಚಾರದಲ್ಲಿ ಸುಮಾರು 50 ಜನರು, ಅವರಲ್ಲಿ ಹೆಚ್ಚಿನವರು ಮುಸ್ಲಿಮರು ಸಾವನ್ನಪ್ಪಿದರು.


ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ


ಕಪಿಲ್ ಮಿಶ್ರಾ ಅವರ ಹೇಳಿಕೆಗಳು ಟೀಕೆಗೆ ಗುರಿಯಾಗಿದ್ದವು. ದೆಹಲಿ ಹೈಕೋರ್ಟ್ ಆತನ ವಿರುದ್ಧದ ನಿಷ್ಕ್ರಿಯತೆಯ ಬಗ್ಗೆ ಪೊಲೀಸರನ್ನು ಪ್ರಶ್ನಿಸಿತು. ಬಿಜೆಪಿಯ ಕಪಿಲ್ ಮಿಶ್ರಾ, ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಆದೇಶಿಸಿತ್ತು. ಆದರೆ ಅದೆಲ್ಲ ಘಟನೆಗಳನ್ನು ಪ್ರಸ್ತುತದ ಚಾರ್ಜ್‌ಶೀಟ್ ಬಿಟ್ಟುಬಿಟ್ಟಿದೆ.

ಆ ವಿಚಾರಣೆಯೊಂದರಲ್ಲಿ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರು ಕೋಪಗೊಂಡು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. “ಕೇಂದ್ರ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಈ ಮೂರು ಬಿಜೆಪಿ ನಾಯಕರ ವಿರುದ್ಧ ಏಕೆ ಎಫ್ಐಆರ್ ಹಾಕಿಲ್ಲ? ಅವರ ದ್ವೇಷ ಭಾಷಣಗಳಿಗಾಗಿ ನೀವು ಅದನ್ನು ಏಕೆ ನೋಂದಾಯಿಸುತ್ತಿಲ್ಲ? ಅಪರಾಧ ನಡೆದಿದೆ ಎಂಬುದನ್ನು ಅಂಗೀಕರಿಸಲು ಸಹ ನೀವು ಬಯಸುವುದಿಲ್ಲವೇ? ” ಎಂದು ಪ್ರಶ್ನಿಸಿದ್ದರು.

ಆದರೆ ಎರಡೇ ದಿನದಲ್ಲಿ ಆ ನ್ಯಾಯಾಧೀಶರನ್ನು ದೆಹಲಿಯಿಂದ ಹರಿಯಾಣಕ್ಕೆ ವರ್ಗಾಯಿಸಲಾಯಿತು, ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿತ್ತು.

ಇಲ್ಲಿಯವರೆಗೆ ಪೊಲೀಸರು ದಾಖಲಿಸಿದ ಎಫ್‌ಐಆರ್‌ ಮತ್ತು ಬಂಧನಗಳ ಪ್ರಕಾರ ಗಲಭೆಯ ಸಂಚುಕೋರರು ಸಾಮಾಜಿಕ ಕಾರ್ಯಕರ್ತರು ಅಥವಾ ಸಿಎಎ ವಿರೋಧಿ ಪ್ರತಿಭಟನೆಗೆ ಸಂಬಂಧಿಸಿರುವ ಮುಸ್ಲಿಂ ವಿದ್ಯಾರ್ಥಿ ಮುಖಂಡರೇ ಆಗಿದ್ದಾರೆ.

ಈವರೆಗೆ ಗಲಭೆ ಪ್ರಕರಣಗಳಲ್ಲಿ ಪೊಲೀಸರು 783 ಎಫ್‌ಐಆರ್‌ ಮತ್ತು 70 ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ. 90 ದಿನಗಳ ಗಡುವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮವನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...