Homeಮುಖಪುಟಮೌನ ಮೋದಿ ಕಾಣೆಯಾಗಿದ್ದಾರೆ: ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ಮೌನ ಮೋದಿ ಕಾಣೆಯಾಗಿದ್ದಾರೆ: ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

- Advertisement -
- Advertisement -

#MaunModiMissing (ಮೌನ ಮೋದಿ ಕಾಣೆಯಾಗಿದ್ದಾರೆ) ಎಂಬ ಹ್ಯಾಸ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ. ಭಾರತದಲ್ಲಿ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆಯಿದ್ದಾಗ ನಿರಂತರವಾಗಿ ಜನರನ್ನು, ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರು ಈಗ ಭಾರತ ಪ್ರಪಂಚದಲ್ಲಿಯೇ ನಾಲ್ಕನೇ ಸ್ಥಾನಕ್ಕೆ ತಲುಪಿದ್ದು ಪ್ರಕರಣಗಳ ಸಂಖ್ಯೆ ಮೂರು ಲಕ್ಷಕ್ಕೂ ಅಧಿಕವಾಗಿರುವಾಗ ಮೋದಿ ಮೌನವಹಿಸಿರುವುದೇಕೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಮೋದಿ – ವಿನಾಶದ ಮನುಷ್ಯ

650ಕ್ಕು ಹೆಚ್ಚು ವಲಸಿಗರು ಸತ್ತರು
ಚೀನಾ ಭಾರತದ ಪ್ರದೇಶವನ್ನು ಆಕ್ರಮಿಸಿಕೊಂಡಿದೆ
ಜಿಡಿಪಿ 3.1% ಕ್ಕೆ ಇಳಿದಿದೆ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ
ನಿರುದ್ಯೋಗ 45 ವರ್ಷಗಳಲ್ಲೇ ಹೆಚ್ಚಾಗಿದೆ
ಪಿಎಂ ಕೇರ್ ಹಣ ವಂಚನೆಯಾಗುತ್ತಿದೆ
‌ಎಲ್‌ಪಿಜಿ ಸಿಲಿಂಡರ್ ಬೆಲೆ 11.50 ರಷ್ಟು ಏರಿಕೆಯಾಗಿದೆ

ಆದರೆ ಭಕ್ತರಿಗೆ ಮೋದಿ ವಿಶ್ವದ ಅತ್ಯುತ್ತಮ ಪ್ರಧಾನಿ .. !! #MaunModiMissing ಎಂದು ಮಧುರವರು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು ಕಡಿಮೆಯಾಗಿದ್ದಾಗ, ಪಿಎಂ ಮೋದಿ ಟಿವಿಯಲ್ಲಿ ನಿಯಮಿತವಾಗಿ ಪ್ರದರ್ಶನ ನೀಡುತ್ತಿದ್ದರು! ಈಗ ನಾವು 3 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿರುವಾಗ, ರಾಷ್ಟ್ರದಲ್ಲಿ ಭಯ ಆವರಿಸುತ್ತಿದೆ. ಜೊತೆಗೆ ಚೀನಾ ಮತ್ತು ನೇಪಾಳದೊಂದಿಗಿನ ಗಡಿ ಸಮಸ್ಯೆಗಳು ಉದ್ಭವಿಸಿವೆ. ಆದರೆ ಪ್ರಧಾನಿ ಮೋದಿ ಕಣ್ಮರೆಯಾಗಿದ್ದಾರೆ ಮತ್ತು ಜನರಿಂದ ಅಡಗಿದ್ದಾರೆ ಎಂದು ರೋಹನ್ ಗುಪ್ತ ಟ್ವೀಟ್‌ ಮಾಡಿದ್ದಾರೆ.

ಮಾರ್ಚ್ ಮತ್ತು ಏಪ್ರಿಲ್ ನಡುವೆ, ಮೋದಿಯವರು 5 ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಟಿವಿಯಲ್ಲಿ ಬಂದು ಮಾತನಾಡಿದರು. ತರೇವಾರಿ ಟಾಸ್ಕ್‌ಗಳನ್ನು ನೀಡಿದರು. ಅವಿವೇಕಿ ಘೋಷಣೆಗಳನ್ನು ಮಾಡಿದರು, ವಿಲಕ್ಷಣವಾದ ವಿವರಣೆಗಳು ಮತ್ತು ಸಿದ್ಧಾಂತಗಳನ್ನು ನೀಡಿದರು. ಅಂದಿನಿಂದ ಅವರು ಏಕೆ ಕಾಣೆಯಾಗಿದ್ದಾರೆ? ಎಂದು ವಿನಯ್‌ ಕುಮಾರ್‌ ಎಂಬುವವರು ಪ್ರಶ್ನಿಸಿದ್ದಾರೆ.

ಮಹಾಭಾರತಕ್ಕೆ ಸಮಾನಾಂತರವಾಗಿ 21 ದಿನಗಳಲ್ಲಿ ನಾವು COVID-19 ಅನ್ನು ಸೋಲಿಸುತ್ತೇವೆ ಎಂದು ಹೇಳಿಕೊಂಡ ವ್ಯಕ್ತಿ ಎಲ್ಲಿದ್ದಾರೆ ಎಂದು ಹಲವಾರು ಜನ ನೆಟ್ಟಿಗರು ಪ್ರಶ್ನೇ ಕೇಳುತ್ತಿದ್ದಾರೆ.


ಇದನ್ನೂ ಓದಿ:

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...