ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಕಳೆದ ಎಂಟು ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆಯಾಗುತ್ತಲೇ ಇರುವುದಕ್ಕೆ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಇಂದೂ ಕೂಡ ಪೆಟ್ರೋಲ್ ಬೆಲೆ 62 ಪೈಸೆ ಮತ್ತು ಡಿಸೇಲ್ ಬೆಲೆಯಲ್ಲಿ 64 ಪೈಸೆ ಹೆಚ್ಚಳವಾಗಿದೆ.
ಪೆಟ್ರೋಲ್ ಮತ್ತು ಡಿಸೆಲ್ ಬೆಲೆಯಲ್ಲಿ ನಿರಂತರ ಏರಿಕೆಯಿಂದ ಗ್ರಾಹಕರ ಮೇಲೆ ಬರೆ ಎಳೆದಂತಾಗಿದೆ. ದೇಶದಲ್ಲಿ ತೈಲ ಬೆಲೆ ಹೆಚ್ಚಾಗಿರುವುದರಿಂದ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 75.78 ರೂಗೆ ಏರಿಕೆಯಾಗಿದೆ. ಡಿಸೆಲ್ ಬೆಲೆ 74.03 ರೂಗೆ ಹೆಚ್ಚಾಗಿದೆ.
ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬೇರೆ ರೀತಿಯಾಗಿದೆ. ಸ್ಥಳೀಯ ತೆರಿಗೆ ಅಥವಾ ಮೌಲ್ಯ ವರ್ಧಿತ ತೆರಿಗೆ ವಿಧಿಸಿರುವುದರಿಂದ ಬೆಲೆ ಮತ್ತಷ್ಟು ಹೆಚ್ಚಾಗಿದೆ.
ಕಳೆದ ಭಾನುವಾರದಿಂದ ಆರಂಭವಾಗಿರುವ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಏರಿಕೆ ಇಂದೂ ಕೂಡ ಹೆಚ್ಚಾಗಿದೆ. IOC, BPCL, HPCL ತೈಲ ಕಂಪನಿಗಳು ಅಬಕಾರಿ ಶುಲ್ಕವನ್ನು ಹೆಚ್ಚಿಸಿ ಗ್ರಾಹಕರಿಗೆ ಹೊರ ಹಾಕಿವೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ 15 ವರ್ಷಗಳಲ್ಲೇ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಭಾರತ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಸಂಕಷ್ಟದಲ್ಲಿರುವ ಜನರನ್ನು ಕೇಂದ್ರ ಸರ್ಕಾರವು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಅಭಿಪ್ರಾಯಪಟ್ಟಿದೆ.
ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಮಾತನಾಡಿ, ದೇಶದಲ್ಲಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರುತ್ತಿದೆ. ಆದರೂ ಕೇಂದ್ರ ಸರ್ಕಾರ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. ಅಬಕಾರಿ ಸುಂಕ ಹೆಚ್ಚಿಸಿರುವುದರಿಂದ ಪೆಟ್ರೋಲ್ ಬೆಲೆ ಶೇ.258ಪಟ್ಟು ಹೆಚ್ಚಳವಾಗಿದ್ದು, ಡೀಸೆಲ್ ಬೆಲೆ ಶೇ. 819 ಪಟ್ಟು ಏರಿಕೆಯಾಗಿದೆ. 2014ರಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಈ ದೊಡ್ಡ ಪ್ರಮಾಣದಲ್ಲಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ ಎಂದು ದೂರಿದ್ದಾರೆ.
ಇದನ್ನೂ ಓದಿ: ಭಾರತೀಯ ಭೂಪ್ರದೇಶವನ್ನು ಒಳಗೊಂಡ ನಕ್ಷೆ ಅಂಗೀಕರಿಸಿದ ನೇಪಾಳ


