Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...