Homeಮುಖಪುಟಚಾರ್ಜ್‌ಶೀಟ್ ಸಲ್ಲಿಸಲು ವಿಫಲರಾದ ಪೊಲೀಸರು: ಭಯೋತ್ಪಾದನೆ ಪ್ರಕರಣದಲ್ಲಿ ದೇವಿಂದರ್‌ಗೆ ಜಾಮೀನು!

ಚಾರ್ಜ್‌ಶೀಟ್ ಸಲ್ಲಿಸಲು ವಿಫಲರಾದ ಪೊಲೀಸರು: ಭಯೋತ್ಪಾದನೆ ಪ್ರಕರಣದಲ್ಲಿ ದೇವಿಂದರ್‌ಗೆ ಜಾಮೀನು!

- Advertisement -
- Advertisement -

ಸಮಯಕ್ಕೆ ಸರಿಯಾಗಿ ದೆಹಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ವಿಫಲವಾದ ಕಾರಣ  ಭಯೋತ್ಪಾದನೆ ಪ್ರಕರಣದಲ್ಲಿ ಅಮಾನತುಗೊಂಡ ಜಮ್ಮು ಕಾಶ್ಮೀರ ಪೊಲೀಸ್ ಅಧಿಕಾರಿ ದೇವಿಂದರ್‌ ಸಿಂಗ್ ಜಾಮೀನು ಪಡೆದಿದ್ದಾರೆ ಎಂದು ಪಿಟಿಐ ವರದು ಮಾಡಿದೆ.

ಈ ವರ್ಷದ ಆರಂಭದಲ್ಲಿ ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಇಬ್ಬರು ಹಿಜ್ಬ್-ಉಲ್-ಮುಜಾಹಿದ್ದೀನ್ ಭಯೋತ್ಪಾದಕರನ್ನು ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಅಮಾನತುಗೊಂಡ ಜಮ್ಮು ಮತ್ತು ಕಾಶ್ಮೀರ ಡಿಎಸ್ಪಿ ದವೀಂದರ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ಈ ಪ್ರಕರಣದ ಸಿಂಗ್ ಮತ್ತು ಇನ್ನೊಬ್ಬ ಆರೋಪಿ ಇರ್ಫಾನ್ ಶಫಿ ಮಿರ್ ಅವರ ವಿರುದ್ಧ ದೆಹಲಿ ಪೊಲೀಸರ ವಿಶೇಷ ಸೆಲ್ ತನಿಖಾ ಸಂಸ್ಥೆ 90 ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸುವಲ್ಲಿ ವಿಫಲವಾಗಿದೆ. ಹಾಗಾಗಿ ಭಯೋತ್ಪದಾನ ಪ್ರಕರಣದಲ್ಲಿ ನ್ಯಾಯಾಲಯವು ಜಾಮೀನು ನೀಡಿದೆ ಎಂದು ಅವರ ವಕೀಲ ಎಂ.ಎಸ್. ಖಾನ್ ಹೇಳಿದ್ದಾರೆ.

ದೇವಿಂದರ್ ಸಿಂಗ್ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸುಪರಿಂಟೆಂಟ್ ಆಗಿದ್ದು, ಎರಡು ದಶಕಗಳ ಕಾಲ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಗಳ ತಜ್ಞರಾಗಿದ್ದವರು ಮಾತ್ರವಲ್ಲ, ರಾಷ್ಟ್ರಪತಿಯವರಿಂದ ಶೌರ್ಯ ಪ್ರಶಸ್ತಿ ಪಡೆದವರು. ಆತ ಹಣಕ್ಕಾಗಿ ಉಗ್ರಗಾಮಿಗಳ ಸಾಗಾಟಗಾರನಾಗಿ ಕೆಲಸ ಮಾಡುತ್ತಿದ್ದುದು ಪ್ರಾಥಮಿಕ ತನಿಖೆಯಿಂದ ವ್ಯಕ್ತವಾಗಿತ್ತು.

1 ಲಕ್ಷ ರೂಗಳ ವೈಯಕ್ತಿಕ ಬಾಂಡ್ ಮತ್ತು ಎರಡು ಶೂರಿಟಿಗಳ ಮೇಲೆ ಜಾಮೀನು ನೀಡಲಾಗಿದೆ.


ಇದನ್ನೂ ಓದಿ: ಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಕಸ್ಟಡಿ ಅವಧಿ ಮೇ 31ರವರೆಗೆ ವಿಸ್ತರಿಸಿದ...

0
ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31 ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ಫೆಬ್ರವರಿ 26,...