Homeಮುಖಪುಟವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

ವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ 81 ವರ್ಷದ ಕವಿ ವರವರ ರಾವ್ ಅವರ ಆರೋಗ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ದೇಶದ 14 ಸಂಸದರು ಜೂನ್ 19 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ. ಅರ್ಜಿಯಲ್ಲಿ ವರವರ ರಾವ್ ಮತ್ತು ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಕೇಳಿಕೊಳ್ಳಲಾಗಿದೆ.

ಸಿಪಿಐ(ಎಂ), ಕಾಂಗ್ರೆಸ್, ಡಿಎಂಕೆ, ವಿಸಿಕೆ, ಸಿಪಿಐ ಮತ್ತು ಆರ್‌ಜೆಡಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಹದಿನಾಲ್ಕು ಸಂಸದರು, ಜೈಲುಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇವರಿಬ್ಬರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ.

ವರವರ ರಾವ್ ಅವರನ್ನು ನವೀ ಮುಂಬಯಿಯ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಸಲಾಗಿದ್ದು, ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಹಾಗೂ ಪ್ರಧಾನಿ ಮೋದಿಯನ್ನು ಹತ್ಯೆ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಆಗಸ್ಟ್ 28, 2018 ರಂದು ಬಂಧಿಸಲಾಯಿತು.

ಸಂಸದರು ತಮ್ಮ ಪತ್ರದಲ್ಲಿ, 81 ವರ್ಷ ವಯಸ್ಸಿನ ವರವರ ರಾವ್ ಪ್ರತಿದಿನ ವಾಂತಿ ಮಾಡಿಕೊಳ್ಳುತ್ತಿದ್ದಾರೆ, ಅವರ ಆರೋಗ್ಯ ಸರಿಯಿಲ್ಲ. ರಾವ್ ಹೃದಯ ರೋಗಿಯಾಗಿದ್ದರಿಂದ ಅವರ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುವ ಎಲೆಕ್ಟ್ರೋಲೈಟ್ ಅಡಚಣೆಯನ್ನು ಅವರ ಆರೋಗ್ಯ ವರದಿಗಳು ಉಲ್ಲೇಖಿಸಿವೆ ಎಂದು ಸಂಸದರು ಉಲ್ಲೇಖಿಸಿದ್ದಾರೆ. ಅವನ ಕರುಳಿನ ಹುಣ್ಣುಗಳಿಗೆ ತುರ್ತು ಪರೀಕ್ಷೆಯ ಅಗತ್ಯವಿದ್ದು, ಆರು ತಿಂಗಳುಗಳಾಗಿಯೂ ಅದನ್ನು ನಡೆಸಲಾಗಿಲ್ಲ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಅವರ ಆರೋಗ್ಯ ಇಂತಹ ದುಸ್ಥಿತಿಯಲ್ಲಿರುರುವುದರಿಂದ, ಅವರನ್ನು ಆಸ್ಪತ್ರೆಗೆ ವರ್ಗಾಯಿಸಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ. ಜೈಲಿನಲ್ಲಿ ಪ್ರಸ್ತುತ ಒದಗಿಸಲಾದ ಆರೈಕೆ ಸ್ವೀಕಾರಾರ್ಹವಲ್ಲ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಮೂಲಕ ಅಗತ್ಯ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ ”ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಪಿಆರ್ ನಟರಾಜನ್ (ಸಿಪಿಐ (ಎಂ), ಕೆಕೆ ರಾಗೇಶ್ (ಸಿಪಿಐ (ಎಂ)), ಕೆ ಸುಬ್ಬರಾಯಣ್ (ಸಿಪಿಐ), ಉತ್ತಮ ಕುಮಾರ್ ರೆಡ್ಡಿ (ಕಾಂಗ್ರೆಸ್), ಕೋಮತಿ ರೆಡ್ಡಿ ವೆಂಕಟ್ ರೆಡ್ಡಿ (ಕಾಂಗ್ರೆಸ್), ಮನೋಜ್ ಜಾ (ಆರ್‌ಜೆಡಿ), ಡಿ ರವಿಕುಮಾರ್ (ವಿಸಿಕೆ), ಥೋಲ್ ತಿರುಮಾವಾಲವನ್ (ವಿಸಿಕೆ), ಎ ರೇವಂತ್ ರೆಡ್ಡಿ (ಕಾಂಗ್ರೆಸ್), ಸುಮತಿ ತಮಿಳತಿ ತಂಗಪಾಂಡಿಯನ್ (ಡಿಎಂಕೆ), ತಿರುಚಿ ಶಿವ (ಡಿಎಂಕೆ), ಕನಿಮೋಜಿ (ಡಿಎಂಕೆ) ಮತ್ತು ಎಸ್ ವೆಂಕಟೇಶನ್ (ಸಿಪಿಐ) ) ಮೊದಲಾದ ಸಂಸದರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

90% ವಿಕಲಾಂಗತೆ ಹೊಂದಿರುವ ಡಾ. ಜಿ.ಎನ್. ಸಾಯಿಬಾಬ ಅವರ ಆರೋಗ್ಯ ಕೂಡಾ ದುರ್ಬಲವಾಗಿದ್ದು ಅವರಿಗೆ ಕೂಡಾ ಚಿಕಿತ್ಸೆಯನ್ನು ನೀಡುವಂತೆ ಕೇಳಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋಧಿಸಿದ್ದಾರೆಂದು ಬಂಧನಕ್ಕೊಳಗಾಗಿ ಜೈಲಿನಲ್ಲಿರುವ 11 ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಕವಿ ಮತ್ತು ಬರಹಗಾರ ವರವರ ರಾವ್ ಕೂಡಾ ಸೇರಿದ್ದಾರೆ. ಇದಲ್ಲದೆ ಸುಧಾ ಭರದ್ವಾಜ್, ಶೋಮಾ ಸೇನ್, ಆನಂದ್ ತೇಲ್ಟುಂಬ್ಡೆ, ಗೌತಮ್ ನವಲಖಾ, ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಸುರೇಂದ್ರ ಗ್ಯಾಡ್ಲಿಂಗ್, ಮಹೇಶ್ ರೌತ್, ಸುಧೀರ್ ಧವಾಲೆ ಮತ್ತು ರೋನಾ ವಿಲ್ಸನ್ ಇತರರು ಕೂಡಾ ಈ ಪಟ್ಟಿಯಲ್ಲಿ ಸೇರಿದ್ದಾರೆ.

ಈ ಪತ್ರವಲ್ಲದೆ ಜೂನ್ 16 ರಂದು ಚಲನಚಿತ್ರ ನಟರಾದ ಸೌಮಿತ್ರ ಚಟರ್ಜಿ, ಅಡೂರ್‌ ಗೋಪಾಲಕೃಷ್ಣನ್, ನಸೀರುದ್ದೀನ್ ಷಾ ಮತ್ತು ಅಪರ್ಣ ಸೇನ್ ಸೇರಿದಂತೆ 500 ಗಣ್ಯರು ಬಂಧನನಕ್ಕೊಳಗಾದ ಸಾಮಾಜಿಕ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಪತ್ರ ಬರೆಯಲಾಗಿತ್ತು.

ಅಲ್ಲದೆ ಮೇ 28 ರಂದು ವರವರ ರಾವ್ ಅವರನ್ನು ಸರ್ಕಾರಿ ನಿಯಂತ್ರಿತ ಜೆಜೆ ಆಸ್ಪತ್ರೆಗೆ ದಾಖಲಿಸಿದ ನಂತರ ಅವರ ಪತ್ನಿ ಮೇ 30 ರಂದು ಅವರನ್ನು ಜಾಮೀನಿನ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆಸ್ಪತ್ರೆಯ ಮೂಲಗಳ ಪ್ರಕಾರ ರಾವ್ ಅವರು ತನಗೆ ತಲೆತಿರುಗುತ್ತಿದೆ ಎಂದು ಹೇಳಿದ್ದರು ಹಾಗೂ ಸ್ವಲ್ಪ ಸಮಯದ ವರೆಗೆ ಅವರು ಮೂರ್ಚೆ ಹೋಗಿದ್ದರು ಎನ್ನಲಾಗಿತ್ತು. ಆದರೂ ಅವರನ್ನು ಕೇವಲ ಮೂರು ದಿನಗಳಷ್ಟೇ ಇಡಲಾಗಿತ್ತು.


ಓದಿ: ಸಫೂರಾ ಝರ್ಗರ್‌ ಸೇರಿದಂತೆ ಸಾಮಾಜಿಕ ಕಾರ್ಯಕರ್ತರ ಬಿಡುಗಡೆಗೆ 500 ಗಣ್ಯರ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...