Homeಮುಖಪುಟಭಾರತ-ಚೀನಾ ಗಡಿ ಬಿಕ್ಕಟ್ಟು: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಭಾರತ-ಚೀನಾ ಗಡಿ ಬಿಕ್ಕಟ್ಟು: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

- Advertisement -
- Advertisement -

ಚೀನಾದೊಂದಿಗಿನ ಗಡಿ ಬಿಕ್ಕಟ್ಟಿನ ಕುರಿತು ವಿರೋಧ ಪಕ್ಷಗಳ ನಾಯಕರು ಕೇಂದ್ರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಕ್ಕಟ್ಟಿಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿ ತೀವ್ರವಾಗಿ ಟೀಕಿಸಿದ್ದಾರೆ.

ಗಾಲ್ವಾನ್ ಕಣಿವೆಯ ಸಂಘರ್ಷದ ಕುರಿತು ಪ್ರಧಾನಮಂತ್ರಿಯ ಹೇಳಿಕೆಗಳ ಕುರಿತು ರಾಹುಲ್ ಗಾಂಧಿ ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ‘ಸುರೇಂದರ್ ಮೋದಿ’ ಎಂದು ಕರೆದಿದ್ದಾರೆ. ರಾಹುಲ್ ಗಾಂಧಿ ತನ್ನ ಸರಣಿ ಪ್ರಶ್ನೆಗಳಲ್ಲಿ, ‘ಪ್ರಧಾನಿ ಏಕೆ ಮೌನವಾಗಿದ್ದಾರೆ?’, ‘ಅವರು ಯಾಕೆ ತಲೆಮರೆಸಿಕೊಂಡಿದ್ದಾರೆ?’ ಭಾರತ ಸರ್ಕಾರವು ನಿದ್ರಿಸುತ್ತಿದೆ ಮತ್ತು ಸಮಸ್ಯೆಯನ್ನು ನಿರಾಕರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿಲುವುಗಳ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಭಾರತೀಯ ಸೇನೆಗೆ ರಾಜ್‌ನಾಥ್ ಸಿಂಗ್ ಏಕೆ ಅವಮಾನಿಸುತ್ತಿದ್ದಾರೆ ಎಂದು ಕೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಗಾಲ್ವಾನ್ ವ್ಯಾಲಿಯ ಪರಿಸ್ಥಿತಿಯ ಬಗ್ಗೆ ಸತ್ಯವನ್ನು ಬಹಿರಂಗಪಡಿಸುವಂತೆ ಪ್ರಧಾನಿ ಮೋದಿಯವರನ್ನು ಆಗ್ರಹಿಸಿದ್ದಾರೆ. ಅಲ್ಲದೆ ಚೀನಾ ಆಕ್ರಮಿಸಿದ ಭಾರತದ ಭಾಗಗಳ ಬಗ್ಗೆ ಮಾಹಿತಿ ನೀಡಲು ಪ್ರಧಾನಿಯವರನ್ನು ಕೇಳಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖ್ಯ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಗಡಿ ಸಂಘರ್ಷದ ಸಂಭಂದಿಸಿ ಪ್ರಧಾನಿ ಮೋದಿಯವರ ಪ್ರತಿಕ್ರಿಯೆಯನ್ನು ಖಂಡಿಸಿದ್ದಾರೆ.

 

ತೃಣಮೂಲ ಕಾಂಗ್ರೆಸ್ ನ ಯುವ ವಿಂಗ್ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ, ಚೀನಿಯರು ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿದ್ದಾರೆಯೇ ಇಲ್ಲವೇ ಎಂದು ಕೇಳಿದ್ದಾರೆ.

ಭಾರತದ ಭೂಪ್ರದೇಶಕ್ಕೆ ಯಾರೂ ಪ್ರವೇಶಿಸದಿದ್ದರೆ 20 ಸೈನಿಕರು ಹೇಗೆ ಸತ್ತರು ಎಂದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ಜೂನ್ 15 ರಂದು ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನ್ಯದೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ.


ಓದಿ: ತಮ್ಮ ಮಾತಿನಿಂದಾಗುವ ಪರಿಣಾಮವನ್ನು ಮೋದಿ ಅರಿಯಬೇಕು: ಮನಮೋಹನ್ ಸಿಂಗ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...