Homeಮುಖಪುಟದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

- Advertisement -
- Advertisement -

“ಈ ಜನರು ನನ್ನ ತಂದೆಯನ್ನು ಕೊಂದಂತೆ ನನ್ನನ್ನು ಮತ್ತು ನನ್ನ ಕುಟುಂಬವನ್ನು ಕೊಲ್ಲುತ್ತಾರೆ ಎಂದು ನನಗೆ ಭಯವಾಗುತ್ತಿದೆ. ಈ ದೂರನ್ನು ನೋಂದಾಯಿಸಲು ನನ್ನ ಎಲ್ಲ ಶಕ್ತಿಯನ್ನು ಒಟ್ಟುಗೂಡಿಸುತ್ತಿದ್ದೇನೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾನು ವಿನಂತಿಸುತ್ತೇನೆ ಮತ್ತು ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಸಾಹಿಲ್ ಪರ್ವೇಜ್ ಮಾರ್ಚ್ 19 ರಂದು ಈಶಾನ್ಯ ದೆಹಲಿ ಗಲಭೆಯ ನಂತರ ಸ್ಥಾಪಿಸಲಾದ ಇಡ್ಗಾ ಪರಿಹಾರ ಶಿಬಿರದಲ್ಲಿ ನೀಡಿದ ದೂರಿನಲ್ಲಿ ಬರೆದಿದ್ದಾರೆ.

ಫೆಬ್ರವರಿ 25 ರಂದು ಅವರ ತಂದೆಯ ಮರಣದ ಸಮಯದಲ್ಲಿ, ಎಫ್‌ಐಆರ್‌ನಲ್ಲಿ ಐಪಿಸಿ (ಕೊಲೆ) ಯ ಸೆಕ್ಷನ್ 302 ಅನ್ನು ಮಾತ್ರ ಲಗತ್ತಿಸಿತ್ತು, ಆದರೆ ಸಾಹಿಲ್ ಅವರ ವಿವರವಾದ ದೂರಿನ ನಂತರ ಸಂಬಂಧಿತ ಸೆಕ್ಷನ್‌ಗಳನ್ನು ಅಸ್ತಿತ್ವದಲ್ಲಿರುವ ಎಫ್‌ಐಆರ್‌ಗೆ ಸೇರಿಸಲಾಗಿದೆ. ಪರಿಣಾಮವಾಗಿ, ಉತ್ತರ ಘೋಂಡಾದಿಂದ ಇಪ್ಪತ್ತಕ್ಕೂ ಹೆಚ್ಚು ಜನರನ್ನು ಪ್ರಶ್ನಿಸಲಾಯಿತು ಮತ್ತು 16 ಜನರನ್ನು ಬಂಧಿಸಲಾಯಿತು ಎಂದು ದಿ ಕ್ವಿಂಟ್‌ ವರದಿ ಮಾಡಿದೆ.

ಈ ಹದಿನಾರು ಆರೋಪಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸಕ್ರಿಯ ಸದಸ್ಯರಾಗಿದ್ದು, ಹಲವು ಹುದ್ದೆಗಳನ್ನು ಹೊಂದಿದ್ದರು ಎನ್ನಲಾಗಿದೆ.

ಕೊಲೆ (ಸೆಕ್ಷನ್ 302), ಗಲಭೆ (ಸೆಕ್ಷನ್ 147), ಮಾರಣಾಂತಿಕ ಆಯುಧದಿಂದ ಶಸ್ತ್ರಸಜ್ಜಿತವಾದ ಗಲಭೆ (ಸೆಕ್ಷನ್ 148), ಕಾನೂನುಬಾಹಿರ ಗುಂಪುಸೇರುವಿಕೆ (ಸೆಕ್ಷನ್ 149) ಮತ್ತು ಕ್ರಿಮಿನಲ್ ಪಿತೂರಿ (ಸೆಕ್ಷನ್ 120 ಬಿ) ಸೆಕ್ಷನ್‌ಗಳನ್ನು ಹಾಕಿ ಏಪ್ರಿಲ್ 9 ರಂದು ಬಂಧಿಸಲಾಯಿತು. ಪ್ರಕರಣದ ಚಾರ್ಜ್‌ಶೀಟ್ ಕೂಡ ಸಲ್ಲಿಸಲಾಗಿದೆ.

ದಿ ಕ್ವಿಂಟ್‌ ದೆಹಲಿ ಗಲಭೆಯ ಸಂದರ್ಭದಲ್ಲಿ ನಡೆದ ಘಟನೆಗಳನ್ನು ಮೆಲುಕು ಹಾಕುತ್ತಿದೆ. ಏಕೆಂದರೆ ಇತ್ತೀಚೆಗೆ ಪೊಲೀಸರು ಸಲ್ಲಿಸುತ್ತಿರುವ ಚಾರ್ಜ್‌‌ಶೀಟ್‌ಗಳಲ್ಲಿ ಕೇವಲ ಪ್ರಗತಿಪರ, ಎಡಪಂಥೀಯ ಮತ್ತು ವಿದ್ಯಾರ್ಥಿ ಕಾರ್ಯಕರ್ತರ ಮೇಲೆ ದೋಷಾರೋಪಣೆ ಮಾಡಿದ್ದು, ಗಲಭೆಗೆ ಪ್ರಚೋದನೆ ನೀಡಿದ ಮತ್ತು ಗಲಭೆಯಲ್ಲಿ ಭಾಗವಹಿಸಿದ ಬಿಜೆಪಿ ಮತ್ತು ಅದರ ಅಂಗಸಂಘಟನೆಗಳ ಸದಸ್ಯರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ.

ತನ್ನ ದೂರಿನಲ್ಲಿ ಪರ್ವೇಜ್ ಹೆಸರಿಸಿರುವ ದೇವೇಶ್ ಮಿಶ್ರಾ ಅವರನ್ನು ಇನ್ನೂ ಬಂಧಿಸಿಲ್ಲ ಅಥವಾ ಚಾರ್ಜ್‌ಶೀಟ್ ನಲ್ಲಿ ಅವರನ್ನು ಉಲ್ಲೇಖಿಸಿಲ್ಲ. ಅವರು 1996 ರಿಂದ ಸಂಘದೊಂದಿಗೆ ಕೆಲಸ ಮಾಡುತ್ತಿದ್ದಾರೆ ಮತ್ತು ಕಳೆದ ಎಂಟು ವರ್ಷಗಳಿಂದ ಆರ್‌ಎಸ್‌ಎಸ್‌ನ ಯಮುನಾ ವಿಹಾರ್ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರನ್ನು ವಿಶ್ವ ಹಿಂದೂ ಪರಿಷತ್‌ಗೆ ಸ್ಥಳಾಂತರಿಸಲಾಯಿತು ಮತ್ತು ಈಗ ಅವರ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.

ದೂರಿನಲ್ಲಿ ಹೆಸರಿಸಲಾದ ಇನ್ನೊಬ್ಬ ವ್ಯಕ್ತಿ ಸುಭಾಷ್ ತ್ಯಾಗಿಯನ್ನು ಸಹ ಇದುವರೆಗೆ ಬಂಧಿಸಿಲ್ಲ. ಇವರು ಕೂಡ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

ಹೆಚ್ಚಿನ ಮಾಹಿತಿಗೆ ಕ್ವಿಂಟ್ ವರದಿ ಓದಿ


ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...