ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಲಾಗಿದ್ದು, ಪ್ರಚೋದನಕಾರಿ ಸಂದೇಶಗಳನ್ನು ಮುಖಪುಟದಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಅದರ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.
ವೆಬ್‌ಸೈಟ್ ಅನ್ನು ಬೆಳಿಗ್ಗೆ ಹ್ಯಾಕ್ ಮಾಡಲಾಗಿದ್ದು ಅದಕ್ಕಾಗಿ ವಿಎಚ್‌ಪಿಯ ಉನ್ನತ ನಾಯಕತ್ವವು ತಾತ್ಕಾಲಿಕವಾಗಿ ಸೈಟ್ ಅನ್ನು ಮುಚ್ಚಲು ನಿರ್ಧರಿಸಿದೆ. ಸೈಟ್‌ಗೆ ಲಾಗ್ ಇನ್ ಆದಾಗ ಅದು “ನಿರ್ವಹಣೆಯಲ್ಲಿದೆ” ಎಂದು ತೋರಿಸುತ್ತಿದೆ.
ಹ್ಯಾಕರ್‌ಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಗೃಹ ಸಚಿವಾಲಯ (ಎಂಎಚ್‌ಎ) ಮತ್ತು ದೆಹಲಿ ಪೊಲೀಸ್ ಸೈಬರ್ ಸೆಲ್ ಅನ್ನು ಸಂಪರ್ಕಿಸಿದ್ದೇವೆ ಎಂದು ಕುಮಾರ್ ಹೇಳಿದ್ದಾರೆ.
ಹ್ಯಾಕರ್‌ಗಳು ವೆಬ್‌ಸೈಟ್‌ನಲ್ಲಿ “ಪ್ರಚೋದನಕಾರಿ” ಘೋಷಣೆಗಳನ್ನು ಪೋಸ್ಟ್ ಮಾಡಿರುವುದು ಆತಂಕದ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.
ವೆಬ್‌ಸೈಟ್‌ನಲ್ಲಿ “ಮುಸ್ಲಿಮರ ನರಮೇಧ ಬೇಡ, ಹಿಂದುತ್ವ ಬೇಡ, ದಲಿತರು ಮತ್ತು ಮುಸ್ಲಿಮರು ಮೋದಿ ಸರ್ಕಾರದ ವಿರುದ್ಧ ಹೋರಾಡಬೇಕು” ಎಂಬ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
“ಇದು ಸಣ್ಣ ಘಟನೆಯಲ್ಲ. ಇದು ನಮ್ಮ ಬೆಂಬಲಿಗರನ್ನು ಮತ್ತು ಸದಸ್ಯರನ್ನು ಕೆರಳಿಸುವುದು. ಇದು ಕೋಮು ಗೊಂದಲವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದರು.
ಈ ಹಿಂದೆ 2013 ರಲ್ಲಿ, ವಿಎಚ್‌ಪಿ ಇದರ ಅಧಿಕೃತ ಫೇಸ್‌ಬುಕ್ ಪುಟವನ್ನು ಹ್ಯಾಕ್ ಮಾಡಲಾಗಿತ್ತು. ನಂತರ ಅದರ ನಾಯಕರು “ದುರುದ್ದೇಶಪೂರಿತ ಧಾರ್ಮಿಕ ಮತ್ತು ರಾಜಕೀಯ” ವಿಷಯಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಓದಿ: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!
ನಮ್ಮ ಯೂಟ್ಯೂನ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ



ಇದು ೇಗೆ ಪ್ರಚೋದನಕಾರಿ ಹೇಳಿಕೆ ಆಗುತ್ತದೆ.