Homeಮುಖಪುಟ2.44 ಲಕ್ಷ ಅನುಯಾಯಿಗಳಿರುವ 'ವಿಬೋ ಆಪ್' ಅನ್ನು ಡಿಲೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

2.44 ಲಕ್ಷ ಅನುಯಾಯಿಗಳಿರುವ ‘ವಿಬೋ ಆಪ್’ ಅನ್ನು ಡಿಲೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಇದು ವೈಯಕ್ತಿಕವಾಗಿ ಹಾಗೂ ಆರ್ಥಿಕವಾಗಿ ಚೀನಾಗೆ ಗಡಿಯ ವಿಚಾರದಲ್ಲಿ ಕಠಿಣ ಸಂದೇಶವಾಗಿದೆ ಎಂದು ಬಿಜೆಪಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅಭಿಪ್ರಾಯ ಪಟ್ಟಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ 59 ಚೀನೀ ಆ್ಯಪ್‌ಗಳನ್ನು ಭಾರತ ನಿಷೇಧಿಸಿದ್ದರಿಂದ ಸುಮಾರು 2.44 ಲಕ್ಷ ಅನುಯಾಯಿಗಳನ್ನು ಹೊಂದಿರುವ ಚೀನಾದ ಸಾಮಾಜಿಕ ಜಾಲತಾಣ ವೀಬೊ ಆಪ್ ನಲ್ಲಿನ ತಮ್ಮ ಖಾತೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಡಿಲೀಟ್ ಮಾಡಿದ್ದಾರೆ.

59 ಚೈನೀಸ್ ಆ್ಯಪ್‌ಗಳ ನಿಷೇಧವನ್ನು ದೇಶ ಘೋಷಿಸಿದ ಕ್ಷಣದಿಂದ ಮೋದಿ ವೀಬೊ ಆಪ್ ತೊರೆಯಲು ನಿರ್ಧರಿಸಿದ್ದಾರೆ ಎಂದು ವಿಶ್ವಾಸಾರ್ಹ ಸರ್ಕಾರಿ ಮೂಲಗಳು ಐಎಎನ್‌ಎಸ್‌ಗೆ ತಿಳಿಸಿವೆ.

“59 ಚೀನೀ ಆ್ಯಪ್‌ಗಳನ್ನು ನಿಷೇಧಿಸಲು ಸರ್ಕಾರ ಕ್ರಮ ಕೈಗೊಂಡದ್ದರಿಂದ, ಪ್ರಧಾನಿ ಮೋದಿ ಚೀನಾದ ಸಾಮಾಜಿಕ ಜಾಲತಾಣ ವೇದಿಕೆ ವೀಬೊದಿಂದ ನಿರ್ಗಮಿಸುತ್ತಾರೆ. ಇದು ಆರ್ಥಿಕವಾಗಿ ಹಾಗೂ ವೈಯಕ್ತಿಕವಾಗಿ ಗಡಿಯ ವಿಚಾರದಲ್ಲಿ ಕಠಿಣ ಸಂದೇಶವಾಗಿದೆ” ಎಂದು ಬಿಜೆಪಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅಭಿಪ್ರಾಯ ಪಟ್ಟಿದ್ದಾರೆ.

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಫೋಟೋಗಳನ್ನು ಹೊಂದಿದ್ದ ಎರಡು ಪೋಸ್ಟ್‌ಗಳು ಸೇರಿದಂತೆ ಪ್ರಧಾನ ಮಂತ್ರಿ ವೀಬೊ ಖಾತೆಯ ಮೇಲಿನ ಎಲ್ಲಾ ಪೋಸ್ಟ್‌ಗಳು, ಚಿತ್ರಗಳು ಮತ್ತು ಕಾಮೆಂಟ್‌ಗಳನ್ನು ಅಳಿಸಲಾಗಿದೆ.

ಕಳೆದ ತಿಂಗಳು, ಸರ್ಕಾರದ ನಿಯಂತ್ರಣ ಮತ್ತು ಸೆನ್ಸಾರ್‌ಶಿಪ್‌ಗೆ ಹೆಸರುವಾಸಿಯಾದ ಚೀನಾದ ಸಾಮಾಜಿಕ ಮಾಧ್ಯಮ ವೇದಿಕೆಗಳು ನರೇಂದ್ರ ಮೋದಿಯವರ ಭಾಷಣ ಮತ್ತು ಗಡಿ ಸಾಲಿನಲ್ಲಿ ಭಾರತದ ಅಧಿಕೃತ ಹೇಳಿಕೆಗಳನ್ನು ತೆಗೆದುಹಾಕಿದೆ. ದೇಶದ ಗಡಿ ಪರಿಸ್ಥಿತಿಯ ಬಗ್ಗೆ ಮೋದಿಯವರ ಜೂನ್ 18 ರ ಹೇಳಿಕೆಗಳು ಸೋಷಿಯಲ್ ಮೀಡಿಯಾ ಅಪ್ಲಿಕೇಶನ್ ವೀಚಾಟ್‌ನಲ್ಲಿ ಬಳಕೆದಾರರಿಗೆ ನೀಡಲು ಆಗಲಿಲ್ಲ.

ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಹಿಂಸಾಚಾರ ನಡೆದು 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಧಾನ ಮಂತ್ರಿ ಖುದ್ದಾಗಿ ಹೇಳಿದ್ದಾರೆ. ಚೀನಾದ ಮಾತ್ರ ಇನ್ನೂ ಎಷ್ಟು ಸಾವುನೋವುಗಳಾಗಿವೆ ಎಂದು ಬಹಿರಂಗಪಡಿಸಿಲ್ಲ.

ಗಡಿ ವಿಚಾರವನ್ನು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರ ಹೇಳಿಕೆಯನ್ನು ಕೂಡಾ ಅಧಿಕೃತ ವೀಚಾಟ್ ಖಾತೆಯಿಂದ ತೆಗೆದುಹಾಕಲಾಗಿದೆ.

ಸಂದೇಶವನ್ನು ಅಳಿಸಿದ ನಂತರ WeChat ನಲ್ಲಿ “ಈ ವಿಷಯವು ನಮ್ಮ ನಿಯಮಗಳನ್ನು ಉಲ್ಲಂಘಿಸುವ ಕಾರಣ ಅದನ್ನು ವೀಕ್ಷಿಸಲು ಸಾಧ್ಯವಿಲ್ಲ.” ಎಂದು ಬರೆಯಲಾಗಿದೆ

2015 ರಲ್ಲಿ ಚೀನಾ ಭೇಟಿಗೆ ಮುಂಚಿತವಾಗಿ, ಮೋದಿಯವರು ವೀಬೊದಲ್ಲಿ ಖಾತೆಯನ್ನು ತೆರೆದರು, ಇದನ್ನು ಚೀನಾದ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಆಗಿದ್ದು, ಟ್ವಿಟರ್‌ಗೆ ಸಮಾನವೆಂದು ಪರಿಗಣಿಸಲಾಗಿದೆ.


ಓದಿ: ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...