Homeಮುಖಪುಟಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೇಹ್‌ಗೆ ಭೇಟಿ ನೀಡಿ, ಜೂನ್ 15 ರಂದು ಚೀನಿ ಸೈನಿಕರೊಂದಿಗಿನ ಮುಖಾಮುಖಿಯಲ್ಲಿ ಗಾಯಗೊಂಡ ಭಾರತೀಯ ಗಾಯಾಳು ಸೈನಿಕರನ್ನು ಭೇಟಿಯಾಗಿದ್ದಾರೆ. ಆದರೆ ಅವರ ಈ ಭೇಟಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಜೂನ್ 19 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮೋದಿಯವರು ಯಾರೂ ನಮ್ಮ ದೇಶದ ಗಡಿಯೊಳಗೆ ಕಾಲಿಟ್ಟಿಲ್ಲ ಎಂದಿದ್ದರು. ಅಂದ ಮೇಲೆ ಇಷ್ಟೊಂದು ಸೈನಿಕರು ಗಾಯಾಳುಗಳಾಗಲು ಕಾರಣವೇನೆಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಅಲ್ಲದೇ ಮೋದಿಯವರು ಸೈನಿಕರನ್ನು 17 ದಿನಗಳ ನಂತರ ಭೇಟಿ ಮಾಡಿದ್ದಾರೆ. ಇದು ಒಳ್ಳೇಯದು. ಆದರೆ ಆ ಫೋಟೊಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕಾದ ಅಗತ್ಯವೇನಿದೆ ಎಂಬ ಪ್ರಶ್ನೆ ಎದ್ದಿದೆ.

ಚೇತರಿಸುತ್ತಿದ್ದ ಸೈನಿಕರ ವಾರ್ಡಿಗೆ ಹೋಗಿ, ಅವರ ಬಳಿ ನಿಂತು, ಅವರ ಫೊಟೋ ತೆಗೆದು ಇಡೀ ಜಗತ್ತಿಗೆ ತೋರಿಸುತ್ತಿದ್ದೀರಲ್ಲಾ, ಗಡಿ ರಕ್ಷಣೆ ಮಾಡುತ್ತಾ ಚೀನೀ ಸೈನಿಕರ ವಿರುದ್ಧ ಹೋರಾಡಿದ ಈ ಸೈನಿಕರ ಮುಖಚರ್ಯೆಯನ್ನು ವಿರೋಧಿ ದೇಶದ ಸೈನಿಕರು ನೋಡುತ್ತಾರೆ. ಭದ್ರತೆಯ ದೃಷ್ಟಿಯಿಂದ ಇದು ತೀರಾ ಅಪಾಯಕಾರಿ ಎನ್ನುವ ಕನಿಷ್ಟ ಪ್ರಜ್ಞೆಯೂ ಈ ದೇಶದ ಪ್ರಧಾನಿಯವರಿಗಿಲ್ವಾ? ಎಂದು ಕನ್ನಡದ ಯುವ ಬರಹಗಾರ ಅಲ್ಮೆಡಾ ಗ್ಲಾಡ್‌ಸನ್‌ ಪ್ರಶ್ನಿಸಿದ್ದಾರೆ.

ಇನ್ನು ಕೆಲವರು ಮೋದಿಯವರು ರಾಜಕೀಯ ಪ್ರಚಾರಕ್ಕಾಗಿ ಸೈನಿಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸೈನಿಕರನ್ನು ಮೋದಿ ಭೇಟಿ ಮಾಡಿದ್ದು ಆಸ್ಪತ್ರೆಯಲ್ಲಲ್ಲ, ಅದು ಪಾರ್ಟಿ ಹಾಲ್. ಹಾಗಾಗಿ ಮೋದಿ ನಡೆಸಿದ್ದು ಇವೆಂಟ್ ಮ್ಯಾನೆಜ್ಮೆಂಟ್ ಎಂಬ ಟೀಕೆ ಕೇಳಿಬಂದಿದೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿಯವರು ಲೇಹ್ ಗೆ ಭೇಟಿ ನೀಡಿದಾಗ ಅದೇ ಹಾಲ್‌ನಲ್ಲಿ ಸೈನಿಕರು ಅವರಿಗೆ ಔತಣ ನೀಡಿದ್ದರು. ಈಗ ಅದೇ ಹಾಲ್‌ನಲ್ಲಿ ಸೈನಿಕರನ್ನು ಕೂರಿಸಲಾಗಿದೆ ಎಂದು ಎರಡೂ ಫೋಟೊಗಳನ್ನು ಪೋಸ್ಟ್‌ ಮಾಡಿ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಆರೋಪಿಸಿದ್ದಾರೆ.

#ಜಗವೇ_ನಾಟಕರಂಗ_ಅದರಲ್ಲಿ_ಮೋದಿಯವರು_ಒಬ್ಬ_ಮಹಾನ್_ಪಾತ್ರಧಾರಿ ದೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ.

Posted by ನಾಗೇಗೌಡ ಕೀಲಾರ ಶಿವಲಿಂಗಯ್ಯ on Friday, July 3, 2020

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದಾರೆ.

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯು ಹಲವಾರು ಪ್ರಧಾನಿಗಳು ಗಡಿಗೆ ಭೇಟಿ ಕೊಟ್ಟು ನಮ್ಮ ಸೈನಿಕರನ್ನು ಮಾತನಾಡಿಸಿ ಧೈರ್ಯ ತುಂಬಿದ್ದರು. ಆದರೆ ಅವರ್ಯಾರು ಈ ರೀತಿ ಫೋಟೊ ತೆಗೆಸಿಕೊಂಡು ಸಾರ್ವಜನಿಕವಾಗಿ ಪ್ರದರ್ಶನ ಮಾಡಿರಲಿಲ್ಲ ಎಂದು ಹಲವಾರು ನೆಟ್ಟಿಗರು ಟೀಕಿಸಿದ್ದರೆ.


ಇದನ್ನೂ ಓದಿ: ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...