HomeಮುಖಪುಟNEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

NEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

ರಾಜ್ಯ ವೈದ್ಯಕೀಯ ಸಂಸ್ಥೆಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನಿರಾಕರಿಸುವುದು ಅರ್ಹ ಅಭ್ಯರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ತಡೆ ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಯ ರಾಷ್ಟ್ರೀಯ ಕೋಟಾ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವೈದ್ಯಕೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗದ (ಒಬಿಸಿ) ವಿದ್ಯಾರ್ಥಿಗಳಿಗೆ ಸೀಟು ಕಾಯ್ದಿರಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. ಈ ಬೇಡಿಕೆಯು ನ್ಯಾಯಸಮ್ಮತವಾಗಿದೆ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ತನ್ನ ತಾಯಿಯ ಬೇಡಿಕೆಯನ್ನು ಪುನರುಚ್ಚರಿಸಿರುವ ಪ್ರಿಯಾಂಕಾ, ಸೋನಿಯಾ ಗಾಂಧಿಯವರು ಈ ವಿಚಾರದಲ್ಲಿ ಬರೆದ ಪತ್ರವನ್ನು ಟ್ವೀಟ್ ಮಾಡಿದ್ದು ಕೇಂದ್ರ ಸರ್ಕಾರ ಇದನ್ನು ಕಾರ್ಯಗತಗೊಳಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ನೀಟ್‌ ಪರೀಕ್ಷೆಯ ಅಖಿಲ ಭಾರತ ಕೋಟಾ ಅಡಿಯಲ್ಲಿ ಪದವಿಪೂರ್ವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಶದ ಏಕೈಕ ಪ್ರವೇಶ ಪರೀಕ್ಷೆಯಡಿ ರಾಜ್ಯ ವೈದ್ಯಕೀಯ ಕಾಲೇಜುಗಳಲ್ಲಿ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವಂತೆ ಕೋರಿ ಶುಕ್ರವಾರ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮೀಸಲಾತಿ ನಿರಾಕರಿಸಿದ್ದರಿಂದ ಒಬಿಸಿ ವಿದ್ಯಾರ್ಥಿಗಳು 2017 ರಿಂದ 11,000 ಸ್ಥಾನಗಳನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ


“ಅಖಿಲ ಭಾರತ ಕೋಟಾ ಅಡಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನಿರಾಕರಿಸಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಮೂಲಕ ರಾಜ್ಯ / ಕೇಂದ್ರಾಡಳಿತ ಪ್ರದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಭರ್ತಿ ಮಾಡಲಾಗುತ್ತಿದೆ. ಇದನ್ನು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ” ಎಂದು ಪ್ರಿಯಾಂಕ ಗಾಂಧಿ ಬರೆದಿದ್ದಾರೆ.

15% (ಪರಿಶಿಷ್ಟ ಜಾತಿ), 7.5% (ಪರಿಶಿಷ್ಟ ಪಂಗಡ) ಮತ್ತು 10% ಸ್ಥಾನಗಳನ್ನು ಆರ್ಥಿಕವಾಗಿ ದುರ್ಬಲ ವಿಭಾಗದ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ. ಆದರೆ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಅವರು ದೂರಿದ್ದಾರೆ.

ರಾಜ್ಯ ವೈದ್ಯಕೀಯ ಸಂಸ್ಥೆಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನಿರಾಕರಿಸುವುದು ಅರ್ಹ ಅಭ್ಯರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ತಡೆ ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ, ರಾಜ್ಯ / ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಹ, ಅಖಿಲ ಭಾರತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ಥಾನಗಳಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ವಿಸ್ತರಿಸಬೇಕೆಂದು ನಾನು ಬಲವಾಗಿ ಒತ್ತಾಯಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಈ ಕುರಿತ ತಮಿಳುನಾಡಿನ ರಾಜಕೀಯ ಪಕ್ಷಗಳ ಮೊಕದ್ದಮೆಗೆ ಉತ್ತರಿಸಿದ ಕೇಂದ್ರವು ಅಖಿಲ ಭಾರತ ಕೋಟಾ ಅಡಿಯಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವುದರಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸದ ಹೊರತು ನಮಗೆ ಸಾಧ್ಯವಿಲ್ಲ ಎಂದು ಕಳೆದ ತಿಂಗಳು ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕಾರಣ ಮೇ ತಿಂಗಳಲ್ಲಿ ನಡೆಯಬೇಕಿದ್ದ NEET ಪರೀಕ್ಷೆಯನ್ನು ಮುಂದೂಡಿದ್ದು, ಸೆಪ್ಟೆಂಬರ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.


ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...