Homeಕರ್ನಾಟಕ16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ

16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ

- Advertisement -
- Advertisement -

ಕೊರೊನಾ ವಾರಿಯರ್ಸ್‌ಗಳಾಗಿ ದುಡಿಯುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ 16 ತಿಂಗಳಿಂದ ಶಿಷ್ಯವೇತನ ನೀಡಿಲ್ಲವೆಂದು ಆರೋಪಿಸಿ ದಾವಣೆಗೆರೆಯಲ್ಲಿ ವೈದ್ಯ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 7 ದಿನಕ್ಕೆ ಕಾಲಿಟ್ಟಿದೆ.

ದಾವಣಗೆರೆ ಜೆಜೆಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ನಗರದ ಜಯದೇವ ಸರ್ಕಲ್ ನಲ್ಲಿ ಧರಣಿ ನಡೆಸುತ್ತಿದ್ದು, ಶಿಷ್ಯವೇತನ ಸಿಗುವವರೆಗೂ ಹೋರಾಟ ನಿಲ್ಲುಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಸಂಸದರಾದ ಜಿ.ಎಂ ಸಿದ್ದೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್ ಭೇಟಿ ನೀಡಿ ಶಿಷ್ಯವೇತನ ದೊರಕಿಸುವ ಭರವಸೆ ನೀಡಿದರೂ ಪ್ರತಿಭಟನೆ ಮುಂದುವರೆದಿದೆ.

ನಾವೆಲ್ಲರೂ ಬಡತನದ ಹಿನ್ನೆಲೆಯಿಂದ ಬಂದವರು. ಕಷ್ಟಪಟ್ಟು ಶುಲ್ಕ ಕಟ್ಟಿ ಓದುತ್ತಿದ್ದೇವೆ. ಕೊರೊನಾ ಹಿನ್ನೆಲೆಯಲ್ಲಿ ವಾರಿಯರ್ಸ್‌ಗಳಾಗಿ ದುಡಿದಿದ್ದೇವೆ. ಗೃಹವೈದ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದೇವೆ. ಆದರೆ 16 ತಿಂಗಳುಗಳಿಂದ ನಮಗೆ ಶಿಷ್ಯವೇತನ ಬಂದಿಲ್ಲ. ಕಾಲೇಜು ಆಡಳಿತ ಮಂಡಳಿ ಸರ್ಕಾರವನ್ನು ದೂರಿದರೆ, ಸರ್ಕಾರ ಕಾಲೇಜನ್ನು ದೂರುತ್ತಿದೆ. ಇದರ ಮಧ್ಯೆ ನಾವು ಹೇಗೆ ಬದುಕಬೇಕು ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಶಿಷ್ಯವೇತನ ಕುರಿತು ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಸ್ಥಳೀಯ ಶಾಸಕರಾದ ಶಾಮನೂರು ಶಿವಶಂಕರಪ್ಪರೊಡನೆ ನಾವು ಉನ್ನತ ಮಟ್ಟದ ಸಭೆ ನಡೆಸಿದ್ದೇವೆ. ಅದರಂತೆ ಜೆಜೆಎಂ ಕಾಲೇಜಿನ ಆಡಳಿತ ಮಂಡಳಿಯೇ ಶಿಷ್ಯವೇತನ ಭರಿಸಬೇಕೆಂದು ಮುಖ್ಯಮಂತ್ರಿಗಳು ತಿಳಿಸಿರುವ ಪ್ರಕಾರ ಆಡಳಿತ ಮಂಡಳಿಯವರು ಒಪ್ಪಿಕೊಂಡಿರುತ್ತಾರೆ. ಸೋಮವಾರದ ನಂತರ ಗೃಹವೈದ್ಯರಿಗೆ ಶಿಷ್ಯವೇತನವನ್ನು ಶೀಘ್ರವಾಗಿ ಬಿಡುಗಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಶಾಖೆ, ರಿಸರ್ಚ್ ಡಾಕ್ಟರ್ಸ್‌ ಅಸೋಷಿಯೇಶನ್ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.


ಇದನ್ನೂ ಓದಿ: ಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...