Homeಮುಖಪುಟಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ಕೇರಳದಲ್ಲಿ ಮೇ 2021ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಲ್.ಡಿ.ಎಫ್ ಪುನಃ ಅಧಿಕಾರಕ್ಕೆ ಏರಿದರೆ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕ್ಕಾರಕ್ಕೇರಲಾಗದ 40 ವರ್ಷದ ದಾಖಲೆ ಮುರಿಯಲಿದೆ.

- Advertisement -
- Advertisement -

ಕೇರಳದಲ್ಲಿ ಈಗಲೇ ವಿಧಾನಸಭಾ ಚುನಾವಣೆ ನಡೆದರೂ ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಎಡರಂಗ ಸರ್ಕಾರವೇ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಏಷ್ಯಾನೆಟ್ – ಸಿಫೋರ್ ನಡೆಸಿರುವ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಸಿಎಂ ಯಾರಾಗಬೇಕು ಎಂಬ ಪ್ರಶ್ನೆಗೆ ಶೇಕಡ 27ರಷ್ಟು ಜನರು ಪಿಣರಾಯಿ ವಿಜಯನ್‌ಗೆ ಜೈ ಅಂದಿದ್ದಾರೆ.

ಕೇರಳದಲ್ಲಿ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಸಮೀಕ್ಷೆ ನಡೆಸಿರುವ ಏಷ್ಯಾನೆಟ್-ಸಿಫೋರ್ ಸಂಸ್ಥೆಗಳು ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಈಗ ಚುನಾವಣೆ ನಡೆದರೂ ಎಡರಂಗ 77-83 ಸೀಟುಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದರು.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳ ಪೈಕಿ ಸರಳ ಬಹುಮತ ಪಡೆದು ಮತ್ತೆ ಎಲ್.ಡಿ.ಎಫ್ ಅಧಿಕಾರಕ್ಕೆ ಏರಲಿದೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 54-60 ಸ್ಥಾನಗಳನ್ನು ಪಡೆದರೆ, ಬಿಜೆಪಿ 3 ರಿಂದ 7 ಸ್ಥಾನ ಗಳಿಸಲಿದೆ ಎಂದು ಭವಿಷ್ಯ ನುಡಿದಿದೆ.

ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಶೇಕಡ 42ರಷ್ಟು ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಶೇ.39ರಷ್ಟು ಮತ ಪಡೆಯಲಿದೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಶೇ.18ರಷ್ಟು ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.

ಕೇರಳದಲ್ಲಿ ಮೇ 2021ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಲ್.ಡಿ.ಎಫ್ ಪುನಃ ಅಧಿಕಾರಕ್ಕೆ ಏರಿದರೆ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕ್ಕಾರಕ್ಕೇರಲಾಗದ 40 ವರ್ಷದ ದಾಖಲೆ ಮುರಿಯಲಿದೆ.

ಸರ್ವೇಯಲ್ಲಿ ಭಾಗವಹಿಸಿದ ಶೇಕಡ 27ರಷ್ಟು ಜನರು ಪಿಣರಾಯಿ ವಿಜಯನ್ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಕ್ರಿಯೆ ನೀಡಿದ್ದರೆ ಪ್ರತಿಪಕ್ಷ ಕಾಂಗ್ರೆಸ್ ನ ಒಮನ್ ಚಾಂಡಿ ಗೆ ಶೇ. 23ರಷ್ಟು ಮಂದಿ ಮುಖ್ಯಮಂತ್ರಿ ಆಗಬೇಕು ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಿಪಿಎಂ ನಾಯಕಿ, ಪ್ರಸಕ್ತ ಆರೋಗ್ಯ ಸಚಿವೆ ಕೆ.ಕೆ. ಶೈಲಜ ಅವರಿಗೆ ಶೇ.12ರಷ್ಟು ಮಂದಿ ಬೆಂಬಲ ನೀಡಿದ್ದಾರೆ. 2018ರಲ್ಲಿ ನಿಫಾ ಸೋಂಕು ಮತ್ತು 2020ರಲ್ಲಿ ಕೊರೊನ ಸೋಂಕು ನಿಯಂತ್ರಿಸುವಲ್ಲಿ ಯಶಸ್ವಿಯಾದ ನಂತರ ಅವರು ದೇಶ ಮತ್ತು ವಿಶ್ವಾದ್ಯಂತ ಹೆಸರು ಗಳಿಸಿದ್ದಾರೆ ಎಂದು ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಆರೋಗ್ಯ ಮಂತ್ರಿ ಕೆ.ಕೆ ಶೈಲಜ

ಬಿಜೆಪಿ ರಾಜ್ಯಧ್ಯಕ್ಷ ಕೆ.ಸುರೇಂದ್ರನ್ ಸಿಎಂ ಆಗುವುದನ್ನು ಶೇ.7ರಷ್ಟು ಮಂದಿ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಲ ಅವರಿಗೆ ಶೇ.5ರಷ್ಟು ಬೆಂಬಲ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇರಳ ರಾಜ್ಯವು ಕೋವಿಡ್ ಅನ್ನು ನಿಭಾಯಿಸಿದ ರೀತಿಗೆ ಪ್ರಪಂಚಾದ್ಯಂತ ಹೆಸರುವಾಸಿಯಾಗಿದೆ. ಸದ್ಯಕ್ಕೆ ಅಲ್ಲಿ 5000 ಕ್ಕಿಂತ ಕಡಿಮೆ ಪ್ರಕರಣಗಳಿದ್ದರೆ ದಕ್ಷಿಣದ ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳು 1 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿವೆ. ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಇದು ಜನರ ಮೇಲೆ ಪ್ರಭಾವ ಬೀರಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ವಿಜಯನ್ ಸಾಧನೆಯ ವಿಚಾರದಲ್ಲಿ ಶೇ.16 ರಷ್ಟು ಜನ ಅತ್ಯುತ್ತಮ ಎಂದಿದ್ದಾರೆ. ಶೇ.51 ರಷ್ಟು ಜನರು ಉತ್ತಮ ಎಂದಿದ್ದಾರೆ. ಹಾಗೆಯೇ ಶೇ.16 ರಷ್ಟು ಜನರು ಕಳಪೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.86% ಜನರು ಒಟ್ಟಾರೆ ಸರ್ಕಾರ ಉತ್ತಮವಾಗಿ ಸಾಂಕ್ರಾಮಿಕವನ್ನು ನಿರ್ವಹಿಸಿದೆ ಎಂದು ಸೂಚಿಸಿದ್ದಾರೆ.

ಸಮೀಕ್ಷೆಯ ಪ್ರಮುಖ ವಿಷಯವೇನೆಂದರೆ ಕೇರಳದಲ್ಲಿ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯದಲ್ಲಿ ಎರಡನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಬಿಜೆಪಿಯು ಒಮ್ಮೆಗೇ ಶೇ.18ರಷ್ಟು ಮತ ಪಡೆಯಲಿದೆ ಎಂದು ಹೇಳಲಾಗಿದೆ.

ಜೂನ್18 ರಿಂದ 29ರವರೆಗೆ ನಡೆದ ಈ ಸಮೀಕ್ಷೆಯು 50 ವಿಧಾನಸಭಾ ಕ್ಷೇತ್ರಗಳ 10409 ಜನರನ್ನು ಮಾತಾಡಿಸಿ ಅಭಿಪ್ರಾಯ ಪಡೆದಿದೆ.


ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ಇದನ್ನೂ ಓದಿ: ಪವನ್ ಖೇರಾ: ಟಿವಿಯಲ್ಲಿ ಮಿಂಚುತ್ತಿರುವ ಹೊಸ ಶೈಲಿಯ ಆಕ್ರಮಣಶೀಲ ಕಾಂಗ್ರೆಸಿಗ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...