Homeಮುಖಪುಟಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು...

ಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು…

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ವಾರ ಎಂಟು ಪೊಲೀಸರನ್ನು ಹೊಂಚು ಹಾಕಿ ಕೊಲೆ ಮಾಡಿದ ಪ್ರಮುಖ ಆರೋಪಿ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮಂಗಳವಾರ ದೆಹಲಿ ಬಳಿಯ ಹರಿಯಾಣದ ಫರಿದಾಬಾದ್‌ನ ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಫರಿದಾಬಾದ್ ಹೋಟೆಲ್‌ನಲ್ಲಿ ಪೋಲಿಸರು ದಾಳಿ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರು ತಲುಪುವ ಮೊದಲೇ ವಿಕಾಸ್ ದುಬೆಯನ್ನು ಹೋಲುವ ವ್ಯಕ್ತಿಯೊಬ್ಬ ಹೋಟೆಲ್ ತೊರೆದಿದ್ದಾನೆ ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಆ ವ್ಯಕ್ತಿ ವಿಕಾಸ್ ದುಬೆ ಎಂದು ಪೊಲೀಸರು ನಂತರ ಖಚಿತಪಡಿಸಿದ್ದಾರೆ.

ಹೋಟೆಲ್‌ನ ವ್ಯವಸ್ಥಾಪಕ ರೋಮಿ NDTVಗೆ ನೀಡಿದ ಹೇಳಿಕೆಯಲ್ಲಿ, “ನಿನ್ನೆ ಮಧ್ಯಾಹ್ನ 12:30 ರ ಸುಮಾರಿಗೆ ಇಬ್ಬರು ಬಂದರು. ಅವರಲ್ಲಿ ಒಬ್ಬರು ಗುರುತಿನ ಚೀಟಿಗಳನ್ನು ತೋರಿಸಿದರು, ಫೋಟೋ ಸ್ಪಷ್ಟವಾಗಿರಲಿಲ್ಲ. ಈ ಐಡಿಯನ್ನು ಬಳಸಲಾಗುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಇದಕ್ಕೂ ಮೊದಲು ವಿಕಾಸ್ ದುಬೆ ಅವರನ್ನು ನೋಡಿರಲಿಲ್ಲ. ಸಂಜೆ 4:30 ರ ಸುಮಾರಿಗೆ ಪೊಲೀಸರು ಬಂದು ದುಬೆ ಅವರ ಕೋಣೆಯ ವಿವರಗಳನ್ನು ಕೇಳಿದರು. ನಂತರ CCTV ಕ್ಯಾಮರಾದ ತುಣುಕುಗಳನ್ನು ತೆಗೆದುಕೊಂಡರು” ಎಂದು ಹೇಳಿದ್ದಾರೆ.

ಪೊಲೀಸರು ವಶಪಡಿಸಿಕೊಂಡ CCTV ದೃಶ್ಯಾವಳಿಗಳು ವಿಕಾಸ್ ದುಬೆ ಮಾಸ್ಕ್‌ ಧರಿಸಿರುವುದು ಖಚಿತವಾಗಿದೆ. ಮಂಗಳವಾರ ಬಂಧಿಸಲ್ಪಟ್ಟ ಇಬ್ಬರಲ್ಲಿ, ಕುಖ್ಯಾತ ಅಪರಾಧಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಅಂಕುರ್. ಮತ್ತೊಬ್ಬ ಪ್ರಭಾತ ಎಂಬುವವನು ಸಂಚುಕೋರರ ಗ್ರಾಮದವನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನಡೆದ ಹತ್ಯಾಕಾಂಡದ ನಂತರ ನಾಪತ್ತೆಯಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಲು ಯುಪಿ ಪೊಲೀಸರ ಇಪ್ಪತ್ತೈದು ತಂಡಗಳು ದಾಳಿ/ತನಿಖೆ ನಡೆಸುತ್ತಿವೆ. ಆರೋಪಿಯ ಬಗ್ಗೆ ಸುಳಿವು ಕೊಟ್ಟವರಿಗೆ 2.5 ಲಕ್ಷ ಬಹುಮಾನ ಘೋಷಿಸಲಾಗಿದೆ.

ದೆಹಲಿಯ ಸಮೀಪವಿರುವ ಹರಿಯಾಣದ ಎರಡು ನಗರಗಳು – ಫರಿದಾಬಾದ್ ಮತ್ತು ಗುರಗಾಂವ್ ಹೈ-ಅಲರ್ಟ್ ಘೋಷಿಸಿವೆ. ಈ ಎಚ್ಚರಿಕೆಯ ನಡುವೆಯೇ ಕುಖ್ಯಾತ ಅಪರಾಧಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಶರಣಾಗಬಹುದು ಎಂಬ ಊಹಾಪೋಹಗಳಿವೆ.

ಬುಧವಾರ ಮುಂಜಾನೆ ಯುಪಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್)  ರಾಜ್ಯ ರಾಜಧಾನಿ ಲಕ್ನೋದಿಂದ 200 ಕಿ.ಮೀ ದೂರದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಯುಪಿ ದರೋಡೆಕೋರನ ಆಪ್ತ ಸಹಾಯಕ ಅಮರ್ ದುಬೆ ಮೃತಪಟ್ಟಿದ್ದಾನೆ. ಕಾನ್ಪುರದಲ್ಲಿ  ಶ್ಯಾಮು ಬಾಜ್‌ಪೈ ಎಂಬ ಇನ್ನೊಬ್ಬ ಸಹಾಯಕನನ್ನು ಬಂಧಿಸಲಾಗಿದೆ.

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ. ದುಬೆಯ ಬಿಕ್ರು ಗ್ರಾಮವು ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.

ಕಾನ್ಪುರ ಪೊಲೀಸರ ಮಾಜಿ ಮುಖ್ಯಸ್ಥ ಅನಂತ್ ಡಿಯೋ ಅವರನ್ನು ಯುಪಿ ಸರ್ಕಾರ ವರ್ಗಾಯಿಸಿದೆ. ಎಸ್‌ಟಿಎಫ್‌ನೊಂದಿಗೆ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಡಿಯೊ ಅವರನ್ನು ಮೊರಾದಾಬಾದ್‌ನ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಗೆ ವರ್ಗಾಯಿಸಲಾಗಿದೆ. ಶುಕ್ರವಾರ ಕೊಲೆಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರು ಮಾರ್ಚ್‌ನಲ್ಲಿ ಬರೆದ ಪತ್ರವೊಂದನ್ನು ಅವರು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದೇವೇಂದ್ರ ಮಿಶ್ರಾ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ, ಚೌಬೆಪುರ ಪೊಲೀಸ್ ಠಾಣೆಯ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ದರೋಡೆಕೋರರಿಗೆ ಸಹಾಯ ಮಾಡುತ್ತಿದ್ದಾರೆ ಎಂದು  ಆರೋಪ ಮಾಡಿದ್ದರು. ದೂರನ್ನು ನಿರ್ಲಕ್ಷಿಸಿದರೆ “ದೊಡ್ಡ ಅಚಾತುರ್ಯ” ನಡೆಯುವ ಬಗ್ಗೆ ಪತ್ರದಲ್ಲಿ ಎಚ್ಚರಿಕೆ ನೀಡಿದ್ದರು. ಪತ್ರದ ನಕಲನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತಿದೆ. ಆದರೆ ಪತ್ರ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಿನಯ್ ತಿವಾರಿ ಅವರನ್ನು ಭಾನುವಾರ ಅಮಾನತು ಮಾಡಲಾಗಿದೆ.


ಇದನ್ನೂ ಓದಿ: ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...