Homeಮುಖಪುಟಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಟ್ರಸ್ಟ್‌ಗಳ ತನಿಖೆಗೆ ಸರ್ಕಾರಿ ಸಮಿತಿ ರಚನೆ

ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಟ್ರಸ್ಟ್‌ಗಳ ತನಿಖೆಗೆ ಸರ್ಕಾರಿ ಸಮಿತಿ ರಚನೆ

ಗಾಂಧಿ ಕುಟುಂಬ ನಡೆಸುವ ಟ್ರಸ್ಟ್‌ಗಳಿಂದ ಹಣ ವರ್ಗಾವಣೆ ತಡೆ ಕಾಯ್ದೆ (PMLA), ಆದಾಯ ತೆರಿಗೆ ಕಾಯ್ದೆ, ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಯಲಿದೆ.

- Advertisement -
- Advertisement -

ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಮೂರು ಟ್ರಸ್ಟ್‌ಗಳ ಆರ್ಥಿಕ ಪ್ರಮಾದಗಳಿಗಾಗಿ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಇಂದು ತಿಳಿಸಿದೆ. ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಗಳು ಆದಾಯ ತೆರಿಗೆ ಮತ್ತು ವಿದೇಶಿ ದೇಣಿಗೆ ನಿಯಮಗಳ ಉಲ್ಲಂಘನೆ ಮಾಡಿದೆ. ಅದರ ಕುರಿತು ತನಿಖೆಯನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯವು ಒಂದು ಸಮಿತಿಯನ್ನು ರಚಿಸಿದೆ ಎಂದು ಸಚಿವಾಲಯದ ವಕ್ತಾರರು ಟ್ವೀಟ್ ಮಾಡಿದ್ದಾರೆ.

ಗಾಂಧಿ ಕುಟುಂಬ ನಡೆಸುವ ಟ್ರಸ್ಟ್‌ಗಳಿಂದ ಹಣ ವರ್ಗಾವಣೆ ತಡೆ ಕಾಯ್ದೆ (PMLA), ಆದಾಯ ತೆರಿಗೆ ಕಾಯ್ದೆ, ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಯಲಿದೆ. ಜಾರಿ ನಿರ್ದೇಶನಾಲಯದ ವಿಶೇಷ ನಿರ್ದೇಶಕರು ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ರಾಜೀವ್ ಗಾಂಧಿ ಪ್ರತಿಷ್ಠಾನವನ್ನು ಜೂನ್ 1991 ರಲ್ಲಿ ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅನ್ನು 2002 ರಲ್ಲಿ ಸ್ಥಾಪಿಸಲಾಯಿತು; 1991 ರಲ್ಲಿ ಹತ್ಯೆಗೀಡಾದ ಮಾಜಿ ರಾಜೀವ್‌ ಗಾಂಧಿಯವರ ಪತ್ನಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇದರ ನೇತೃತ್ವ ವಹಿಸಿದ್ದಾರೆ.

ಎಲ್ಲಾ ಹಣಕಾಸಿನ ನಿರ್ವಹಣೆಯ ಕುರಿತು ಲೆಕ್ಕಪರಿಶೋಧನೆ ನಡೆಸಲಾಗಿದೆ. ಇಲ್ಲಿ ಯಾವುದೇ ತಪ್ಪುಗಳಾಗಿಲ್ಲ. ತಮ್ಮ ವಿರುದ್ಧದ ಇತ್ತೀಚಿಗೆ ಕೆಲವು ಸಂಚುಗಳನ್ನು ನಡೆಸುತ್ತಿದ್ದು, ಇವೆಲ್ಲಾ ರಾಜಕೀಯ ಕಾರಣಗಳಿಗಾಗಿ ಹೆಣೆಯಲ್ಪಟ್ಟ ತನಿಖೆಗಳಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

“RGF ವಹಿವಾಟಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಪಾರದರ್ಶಕತೆಗೆ ಬದ್ಧವಾಗಿದೆ” ಎಂದು ಆಡಳಿತಾರೂಢ BJP ಬಿಜೆಪಿ ಹೇಳಿದೆ.

ಕಳೆದ ತಿಂಗಳು ಬಿಜೆಪಿ, “ಇದು ಕಾಂಗ್ರೆಸ್ ಟ್ರಸ್ಟ್‌ಗಳಿಗೆ ಸಂಬಂಧಿಸಿರುವ ಲಜ್ಜೆಗೆಟ್ಟ ವಂಚನೆ ಎಂದು ಆರೋಪಿಸಿತ್ತು. ತಾನು ಅಧಿಕಾರದಲ್ಲಿದ್ದಾಗ, ಮನಮೋಹನ್ ಸಿಂಗ್ ಸರ್ಕಾರದ ಪ್ರಧಾನ ಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿಯಿಂದ ಹಣವನ್ನು ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ನೀಡಿತ್ತು ಎಂದು ಆರೋಪಿಸಿದರು.

“ಯುಪಿಎ ತನ್ನ ಆಡಳಿತದಲ್ಲಿ ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಹಣವನ್ನು ದಾನ ಮಾಡುತ್ತಿತ್ತು. PMNRF ಮಂಡಳಿಯಲ್ಲಿ ಕುಳಿತಿದ್ದವರು ಶ್ರೀಮತಿ ಸೋನಿಯಾ ಗಾಂಧಿ. RGF ಅಧ್ಯಕ್ಷರು ಶ್ರೀಮತಿ ಸೋನಿಯಾ ಗಾಂಧಿಯಾಗಿದ್ದರು. ಇದು ಸಂಪೂರ್ಣವಾಗಿ ಖಂಡನೀಯ” ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಜೂನ್ 15 ರಂದು ಚೀನಾ ಜೊತೆಗಿನ ಗಡಿ ಘರ್ಷಣೆಯ ಕುರಿತ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ದೈನಂದಿನ ದಾಳಿಗೆ ಪ್ರತಿಯಾಗಿ 2005 ರಲ್ಲಿ ಚೀನಾದ ರಾಯಭಾರ ಕಚೇರಿಯಿಂದ ರಾಜೀವ್ ಗಾಂಧಿ ಪ್ರತಿಷ್ಠಾನವು ಹಣವನ್ನು ಪಡೆದುಕೊಂಡಿದೆ ಎಂದು ಆಡಳಿತ ಪಕ್ಷ ಆರೋಪಿಸಿದೆ.

“ಆಗಿನ ಯುಪಿಎ ಸರ್ಕಾರ ಚೀನಿಯರಿಂದ ಲಂಚ ಪಡೆದಿದೆಯೇ? ಈ ದೇಣಿಗೆಯನ್ನು ತೆಗೆದುಕೊಂಡ ನಂತರ, ಪ್ರತಿಷ್ಠಾನವು ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಶಿಫಾರಸು ಮಾಡಿತು, ಅದು ಚೀನೀಯರ ಪರವಾಗಿ ಹೆಚ್ಚು ಒಲವು ತೋರಿತು” ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದರು.

1991 ರಲ್ಲಿ ಹಣಕಾಸು ಸಚಿವರಾಗಿ ತಮ್ಮ ಬಜೆಟ್ ಭಾಷಣದಲ್ಲಿ ಮನಮೋಹನ್ ಸಿಂಗ್ ಅವರು ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದರು ಎಂದು ಬಿಜೆಪಿ ಆರೋಪಿಸಿದೆ.

ಸೋನಿಯಾ ಗಾಂಧಿಯವರಲ್ಲದೆ, ರಾಜೀವ್ ಗಾಂಧಿ ಪ್ರತಿಷ್ಠಾನದ ಮಂಡಳಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಪಿ ಚಿದಂಬರಂ ಮತ್ತು ಮನಮೋಹನ್ ಸಿಂಗ್ ಸೇರಿದ್ದಾರೆ.

ಈ ಆರೋಪಗಳನ್ನೆಲ್ಲಾ ಅಲ್ಲಗಳೆದ ಕಾಂಗ್ರೇಸ್, ಚೀನಾ ಬಿಕ್ಕಟ್ಟನ್ನು ಸರ್ಕಾರ ಸರಿಯಾಗಿ ನಿಭಾಯಿಸುವುದರಿಂದ ಎಡವಿದೆ. ಹಾಗಾಗಿ ಈ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಇದು ಎಂದು ಕಾಂಗ್ರೆಸ್ ಹೇಳಿದೆ.


ಇದನ್ನೂ ಓದಿ: ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...