Homeಕರ್ನಾಟಕಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ತಪ್ಪು ಮಾಡಿದೆವು: ಸಿದ್ದರಾಮಯ್ಯ

ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ತಪ್ಪು ಮಾಡಿದೆವು: ಸಿದ್ದರಾಮಯ್ಯ

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾಪೂರ್ವ ಮೈತ್ರಿ ಬೇಡ ಎಂದು ನಾನೂ ಹೇಳಿದ್ದೆ. ಇದರಿಂದ ನಿರೀಕ್ಷಿಸಿದ ಹಾಗೆ ಮತ ಧ್ರುವೀಕರಣ ಆಗುವುದಿಲ್ಲ ಎಂಬುದು ನನ್ನ ಲೆಕ್ಕಾಚಾರವಾಗಿತ್ತು. ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ ಕನಿಷ್ಠ 7-8 ಸ್ಥಾನಗಳನ್ನು ಗೆಲ್ಲುತ್ತಿದ್ದೆವು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಕೊರೊನಾ ನಿಯಂತ್ರಣ, ಅನ್ ಲೈನ್ ಶಿಕ್ಷಣ ಮತ್ತು ಲಾಕ್‌ಡೌನ್‌ ಬಗ್ಗೆ ಮಾತನಾಡಿದ್ದಾರೆ.

ಹಲವು ಮಂದಿ ತಜ್ಞರು ಕೇವಲ ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಲಾಕ್‌ಡೌನ್ ನಂತರವೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಹಾಗಾದರೆ ಲಾಕ್‌ಡೌನ್‌ನಿಂದಾದ ಪ್ರಯೋಜನವೇನು? ಈಗ ನಿಜವಾಗಿ ಲಾಕ್‌ಡೌನ್ ಅಗತ್ಯವಿದೆ. ಸರ್ಕಾರ ಕೇವಲ ಆರ್ಥಿಕತೆಗೆ ಮಹತ್ವ ನೀಡುತ್ತಿದೆ, ಜನರ ಜೀವಗಳಿಗೆ ಬೆಲೆ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಹಳ್ಳಿಗಳಿಂದ ಬಂದ ಜನರು ಬೆಂಗಳೂರಿನಲ್ಲಿ ಉಳಿದುಕೊಳ್ಳುವಂತಹ ವಾತಾವರಣವನ್ನು ಸರ್ಕಾರ ಕಲ್ಪಿಸಬೇಕಿತ್ತು, ಆಗ ಅವರು ಮರಳಿ ಹಳ್ಳಿಕಡೆ ಮುಖ ಮಾಡುವಂತಹಾ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ. ಅವರಿಗೆ ವಸತಿ, ಉದ್ಯೋಗ ನೀಡುವ ಜೊತೆಗೆ ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದೇ ಜನ ಹಳ್ಳಿಗಳಿಗೆ ಮರಳಲು ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಖರ್ಚು ವೆಚ್ಚಗಳ ಸೂಕ್ತ ಮಾಹಿತಿ ಸರ್ಕಾರದ ಬಳಿಯಿದ್ದರೆ ಅಧಿಕಾರಿಗಳ ಜೊತೆ ಅದನ್ನು ಕಳಿಸಿಕೊಡಲಿ, ನಾನೂ ಒಮ್ಮೆ ನೋಡುತ್ತೇನೆ. ತಾರ್ತಿಕ ಅಂತ್ಯ ಕಾಣುವವರೆಗೂ ಈ ವಿಚಾರದಿಂದ ಹಿಂದೆ ಸರಿಯುವುದಿಲ್ಲ. ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು. ಇದನ್ನು ಕೇಳುವುದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...