Homeಕರ್ನಾಟಕಜಮೀನು ವ್ಯಾಜ್ಯ; ನಿವೃತ್ತ ಶಿಕ್ಷಕನಿಂದ ಚಾಕು ಇರಿತ; ತಹಶೀಲ್ದಾರ್ ಸಾವು

ಜಮೀನು ವ್ಯಾಜ್ಯ; ನಿವೃತ್ತ ಶಿಕ್ಷಕನಿಂದ ಚಾಕು ಇರಿತ; ತಹಶೀಲ್ದಾರ್ ಸಾವು

ಭೂ ಸರ್ವೇ ನಡೆಸಲು ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಕಳವಂಚಿ ಗ್ರಾಮಕ್ಕೆ ಹೋದ ಸಂದರ್ಭ ನಿವೃತ್ತ ಶಿಕ್ಷಕ ವೆಂಕಟಪತಿ ಎಂಬವರು ಚೂರಿಯಿಂದ ಇರಿದಿದ್ದಾರೆ.

- Advertisement -
- Advertisement -

ನಿವೃತ್ತ ಶಿಕ್ಷಕರೊಬ್ಬರು ಜಮೀನು ವ್ಯಾಜ್ಯಕ್ಕಾಗಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಹಶೀಲ್ದಾರ್‌‌ಗೆ ಚಾಕುವಿನಿಂದ ಇರಿದ ಪರಿಣಾಮ, ತಹಶೀಲ್ದಾರ್ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಳವಂಚಿ ಗ್ರಾಮದಲ್ಲಿ ಇಂದು ನಡೆದಿದೆ.

ಸರ್ವೇ ನಡೆಸಲು ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಕಳವಂಚಿ ಗ್ರಾಮಕ್ಕೆ ಹೋಗಿದ್ದರು. ಈ ಸಂದರ್ಭ ನಿವೃತ್ತ ಶಿಕ್ಷಕ ವೆಂಕಟಪತಿ ಎಂಬ ವ್ಯಕ್ತಿ ಚೂರಿಯಿಂದ ತಹಶೀಲ್ದಾರ್‌‌ಗೆ ಇರಿದಿದ್ದಾರೆ.

ರಾಮಮೂರ್ತಿ ಹಾಗೂ ಆರೋಪಿ ವೆಂಕಟಪತಿ ಎಂಬುವರ ನಡುವೆ ಜಮೀನು ವ್ಯಾಜ್ಯವಿದ್ದು, ರಾಮಮೂರ್ತಿ ಬಂಗಾರಪೇಟೆ ತಹಶೀಲ್ದಾರ್‌‌ಗೆ ಇಬ್ಬರ ಜಮೀನನ್ನು ಹದ್ದುಬಸ್ತು ಮಾಡುವಂತೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಇಂದು ತಹಶೀಲ್ದಾರ್ ಚಂದ್ರಮೌಳೇಶ್ವರ್, ಕಾಮಸಮುದ್ರ ಪೊಲೀಸ್ ಠಾಣೆಯ ಪೇದೆ ಜೊತೆ ಗ್ರಾಮಕ್ಕೆ ಭೇಟಿ ನೀಡಿದ್ದರು. ನಂತರ ಸರ್ವೇ ನಡೆಸಿದ ಅವರು ವೆಂಕಟಪತಿ ಜಮೀನಿನಲ್ಲಿ ಕಲ್ಲು ಹೂಳಿಸಿದ್ದಾರೆ. ಇದಕ್ಕೆ ಕೋಪಗೊಂಡ ವೆಂಕಟಪತಿ ಏಕಾಏಕಿ ತಹಶೀಲ್ದಾರ್ ಎದೆ ಭಾಗಕ್ಕೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ.

ತಹಶೀಲ್ದಾರ್ ಗೆ ತೀವ್ರ ರಕ್ತ ಸ್ರಾವವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಲೂಕಿನಲ್ಲಿ ಒಳ್ಳೆ ಹೆಸರು ಮಾಡಿ, ಜನರ ವಿಶ್ವಾಸ ಗೆದ್ದಿದ್ದ ಚಂದ್ರಮೌಳೇಶ್ವರ, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ರಾತ್ರಿ ಹಗಲು ದುಡಿದಿದ್ದಾರೆ. ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಅವರ ಸಾವಿಗೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ : ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಪ್ರದೇಶ: ದಲಿತ ಬಾಲಕಿಯ ಸಜೀವ ದಹನ

0
ಬಯಲು ಶೌಚಾಲಯಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಹರಯಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಬಲರಾಂಪುರ್ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ್ದ 13...