HomeಮುಖಪುಟPM Cares ದೇಣಿಗೆಯನ್ನು NDRFಗೆ ವರ್ಗಾಹಿಸುವುದಿಲ್ಲ: ಕೇಂದ್ರ ಸರ್ಕಾರ

PM Cares ದೇಣಿಗೆಯನ್ನು NDRFಗೆ ವರ್ಗಾಹಿಸುವುದಿಲ್ಲ: ಕೇಂದ್ರ ಸರ್ಕಾರ

ಜೊತೆಗೆ ಈಗಾಗಲೇ ಬಂದಿರುವ ದೇಣಿಗೆಗಳನ್ನು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿಗೆ (NDRF) ವರ್ಗಾಯಿಸಬೇಕೆಂಬ ಸಲಹೆಯನ್ನು ಕೇಂದ್ರವು ವಿರೋಧಿಸಿದೆ.

- Advertisement -
- Advertisement -

ಕೇಂದ್ರ ಸರ್ಕಾರವು PM Cares ನಿಧಿ ರಚನೆಯನ್ನು ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥಿಸಿಕೊಂಡಿದೆ. ಜೊತೆಗೆ ಈಗಾಗಲೇ ಬಂದಿರುವ ದೇಣಿಗೆಗಳನ್ನು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿಗೆ (NDRF) ವರ್ಗಾಯಿಸಬೇಕೆಂಬ ಸಲಹೆಯನ್ನು ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಎಂ.ಆರ್. ಶಾ ಅವರಿದ್ದ ನ್ಯಾಯಪೀಠವು ಈ ಕುರಿತು ದಾಖಲಾದ ಪಿಐಎಲ್‌ ವಿಚಾರಣೆ ನಡೆಸಿ ಕೇಂದ್ರ ಸಲ್ಲಿಸಿದ್ದ ಅಫಿಡವಿಟ್‌ ಅನ್ನು ಪರಿಶೀಲಿಸಿತು. PIL ವತಿಯಿಂದ ಹಾಜರಾಗಿರುವ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಎ ಎಂ ಸಿಂಘ್ವಿ ಅವರಿಗೆ ಅಫಿಡವಿಟ್‌ ಕಾಪಿಗಳನ್ನು ವಿತರಿಸುವಂತೆ ಸಾಲಿಸಿಟರ್ ಜನರಲ್‌ಗೆ ಸುಪ್ರೀಂ ಸೂಚಿಸಿದೆ.

NDRF ನಲ್ಲಿರುವ ಹಣವನ್ನು ಕೊರೊನಾ ವಿರುದ್ಧದ ಹೋರಾಟ ಮತ್ತು ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಬಳಸಿಕೊಳ್ಳಬೇಕು. ಹಾಗೆಯೇ PM Cares ಗೆ ಬಂದಿರುವ ಹಣವನ್ನು NDRFಗೆ ವರ್ಗಾಹಿಸುವಂತೆ ಪಿಐಎಲ್ ವಾದಿಸಿತ್ತು.

PM Caresಗೆ ಸ್ವಯಂ ಪ್ರೇರಿತವಾಗಿ ಬಂದಿರುವ ಹಲವಾರು ವಯಕ್ತಿಕ ದೇಣಿಗೆಗಳ ಹಣವನ್ನು ಈಗಾಗಲೇ ಹಲವಾರು ಸುಧಾರಣಾ ಕಾರ್ಯಗಳಿಗಾಗಿ ಬಳಸಲಾಗಿದೆ ಎಂದು ಕೇಂದ್ರವು ಅಫಿಡವಿಟ್‌ ಅನ್ನು ಕೋರ್ಟಿಗೆ ಸಲ್ಲಿಸಿದೆ.

ಕೇಂದ್ರದ ಗೃಹ ಸಚಿವಾಲಯ ಕೊಟ್ಟಿರುವ ದಾಖಲೆಯ ಪ್ರಕಾರ PM Cares ನಲ್ಲಿರುವ ಹಣವನ್ನು NDRF ವರ್ಗಾಯಿಸಲು ಸಾಧ್ಯವಿಲ್ಲವೆಂದು ಹೇಳಿದೆ.

ಮಾರ್ಚ್ 28 ರಂದು ಕೇಂದ್ರವು ಕೊರೊನಾದಿಂದ ಉಂಟಾದಂತಹ ತುರ್ತು ಸಂದರ್ಭಗಳನ್ನು ಎದುರಿಸಲು ಮತ್ತು ಸೋಂಕಿತರಿಗೆ ಪರಿಹಾರವನ್ನು ಒದಗಿಸಲು ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಯ ಪರಿಹಾರ (PM CARES) ನಿಧಿಯನ್ನು ಸ್ಥಾಪಿಸಿತು.

ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ ಉಚಿತ ಆಹಾರ ಧಾನ್ಯದ ಜೊತೆಗೆ ಜುಲೈ 7 ರವರೆಗೆ ನೇರ ನಗದು ವರ್ಗಾವಣೆಯ ಮೂಲಕ ವಿವಿಧ ಯೋಜನೆಗಳ ಸುಮಾರು 42.06 ಕೋಟಿ ಫಲಾನುಭವಿಗಳಿಗೆ 67,478 ಕೋಟಿ ರೂ.ಗಳನ್ನು ಕಳುಹಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.


ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...