Homeಕರ್ನಾಟಕವಿಚಾರಣಾಧೀನ ಖೈದಿಗೆ ಕೊರೊನಾ: ಕೊಡಿಗೇನಹಳ್ಳಿ ಪೊಲೀಸ್ ಠಾಣೆ ಸೀಲ್ ಡೌನ್

ವಿಚಾರಣಾಧೀನ ಖೈದಿಗೆ ಕೊರೊನಾ: ಕೊಡಿಗೇನಹಳ್ಳಿ ಪೊಲೀಸ್ ಠಾಣೆ ಸೀಲ್ ಡೌನ್

- Advertisement -
- Advertisement -

ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತನಾಗಿದ್ದ ವಿಚಾರಣಾಧೀನ ಖೈದಿಯೊಬ್ಬನಿಗೆ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಧುಗಿರಿ ತಾಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಮಧುಗಿರಿಯ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ರಾಜಗೋಪಾಲ್ ಇತ್ತೀಚೆಗೆ ಪೂಜಾರ ಹಳ್ಳಿಯಲ್ಲಿ ಸಿಸಿ ರಸ್ತೆ ಕಾಮಗಾರಿ ವೀಕ್ಷಿಸಲು ಬಂದಿದ್ದಾಗ ಅವರ ಮೇಲೆ ಅಶ್ವತ್ಥಪ್ಪ ಮತ್ತು ಕೃಷ್ಣಮೂರ್ತಿ ಜಾತಿ ನಿಂದನೆ ಮಾಡಿದ್ದರು. ರಾಜಗೋಪಾಲ್ ಮೇಲೆ ಹಲ್ಲೆಯನ್ನು ನಡೆಸಿದ್ದರು. ಹೀಗಾಗಿ ರಾಜಗೋಪಾಲ್ ಕೋಡಿಗೇನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು.

ದೂರಿನ ಮೇರೆ ಆರೋಪಿಗಳನ್ನು ಬಂಧಿಸಿ ವಿಚಾರಣೆಗಾಗಿ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಆರೋಪಿಗಳ ರಕ್ತ ಮತ್ತು ಗಂಟಲು ಸ್ರಾವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದರು.. ನ್ಯಾಯಾಲಯದಿಂದ ಅರೋಪಿಗಳನ್ನು ಜೈಲಿನಲ್ಲಿರಿಸಲಾಗಿತ್ತು.

ಇಂದು ಪರೀಕ್ಷೆಯ ವರದಿ ಬಂದಿದ್ದು, ವಿಚಾರಣಾಧೀನ ಕೈದಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಜೈಲಿನಿಂದ ಖೈದಿಯನ್ನು ಕೊರೊನಾ ಆಸ್ಪತ್ರೆಗೆ ದಾಖಲಿಸಿ, ಕೋಡಿಗೇನಹಳ್ಳಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್‌ ಮಾಡಲಾಗಿದೆ.

ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಇದೇ ಮೊದಲ ಬಾರಿಗೆ ಕೊಡಿಗೇನ ಹಳ್ಳಿ ಠಾಣೆಯನ್ನು ಸೀಲ್ ಡೌನ್ ಮಾಡಿದ್ದು ಜನರನ್ನು ಭೀತಿಗೊಳ್ಳುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಮತ್ತು ಶಾಸಕರು ಕೈಚೆಲ್ಲಿ ಕುಳಿತಿರುವುದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಇಂದಿನಿಂದ ಸಿಎಂ ಯಡಿಯೂರಪ್ಪ ವರ್ಕ್‌ ಫ್ರಂ ಹೋಮ್‌: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...