Homeಕರ್ನಾಟಕಕನಿಷ್ಠ 12,000 ವೇತನ ನೀಡಿ: ’ಆಶಾ’ ಕಾರ್ಯಕರ್ತರ ಪ್ರತಿಭಟನೆ

ಕನಿಷ್ಠ 12,000 ವೇತನ ನೀಡಿ: ’ಆಶಾ’ ಕಾರ್ಯಕರ್ತರ ಪ್ರತಿಭಟನೆ

ಆಶಾ ಕಾರ್ಯಕರ್ತರನ್ನು ಧಾರಕ ವಲಯಗಳಿಗೆ ಕಳುಹಿಸಲಾಗುತ್ತಿದ್ದು, ಆದರೆ ಯಾವುದೇ ಸುರಕ್ಷಾ ಕವಚವನ್ನು ನೀಡುತ್ತಿಲ್ಲ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ.

12,000 ರೂ. ಮಾಸಿಕ ಗೌರವಧನ ನಿಗದಿ, ಪಿಪಿಇ ಕಿಟ್‌ಗಳು ಹಾಗೂ ಇತರ ಆರೋಗ್ಯ ಸುರಕ್ಷಾ ಸೌಲಭ್ಯಗಳನ್ನು ನೀಡುವಂತೆ ಕೋರಿ ಅನಿರ್ದಿಷ್ಟಾವಧಿ ಪ್ರತಿಭಟಯನ್ನು ಕೈಗೊಳ್ಳಲಾಗಿದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಪಾಸಿಟಿವ್‌ ಪರೀಕ್ಷಿಸುವವರ ಸಂಪರ್ಕಗಳನ್ನು ಪತ್ತೆಹಚ್ಚಲು ಆಶಾ ಕಾರ್ಯಕರ್ತರನ್ನು ಕಂಟೈನ್‌ಮೆಂಟ್‌ ವಲಯಗಳಿಗೆ ಕಳುಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪಿಪಿಇ ಕಿಟ್‌ ಸಹ ಕೊಡುತ್ತಿಲ್ಲ ಎಂದು ಆಶಾ ಕಾರ್ಯಕರ್ತರು ಆರೋಪಿಸಿದ್ದಾರೆ.

“ನಮ್ಮನ್ನು ಸಾಂಕ್ರಾಮಿಕ ರೋಗದ ಮುಂಚೂಣಿಯ ಯೋಧರು ಎಂದು ಕರೆಯಲಾಗುತ್ತದೆ. ಆದರೆ ಯಾವುದೇ ಸುರಕ್ಷತೆಯಿಲ್ಲದೆ ಕರ್ತವ್ಯಕ್ಕೆ ಹೋಗುತ್ತಿದ್ದೇವೆ. ನಮಗೆ ಪಿಪಿಇ ಕಿಟ್‌ಗಳು ಬೇಕು. ಕನಿಷ್ಠ 12,000 ರೂ.ಗಳ ಸ್ಥಿರ ವೇತನವನ್ನು ನಾವು ಕೋರುತ್ತಿದ್ದೇವೆ. ಆದರೆ ಸರ್ಕಾರ ಸ್ಪಂದಿಸಿಲ್ಲ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದರೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮಾಡಲಿದ್ದೇವೆ” ಎಂದು ಎಂದು ಆಶಾ ಕಾರ್ಯಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ರಾಮ ಹೇಳಿದ್ದಾರೆ.

ಪ್ರಸ್ತುತ ಆಶಾ ಕಾರ್ಯಕರ್ತರಿಗೆ ಮಾಸಿಕ 6,000 ರೂ.ಗಳ ಗೌರವಧನ ನೀಡಲಾಗುತ್ತಿದೆ. ಕೊರೊನಾ ಸಾಂಕ್ರಮಿಕ ಪ್ರಾರಂಭವಾದಾಗ ಸರ್ಕಾರ 3 ಸಾವಿರ ರೂ. ಗಳ ಪ್ರೋತ್ಸಾಹ ಧನ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಇದುವರೆಗೂ ಅದನ್ನೂ ಸಹ ನೀಡಿಲ್ಲ” ಎಂದು 5 ವರ್ಷಗಳಿಂದ ಆಶಾ ಕಾರ್ಯಕರ್ತರಾಗಿ ದುಡಿಯುತ್ತಿರುವ ನಾಗಲಕ್ಷ್ಮಿ ಹೇಳಿದ್ದಾರೆ.

ಆರೋಗ್ಯ ಮತ್ತು ಆಹಾರ ಸುರಕ್ಷತಾ ಆಯುಕ್ತ ಪಂಕಜ್ ಪಾಂಡೆ  ಮಾತನಾಡಿ “ಅವರ ಪಾವತಿಗಳನ್ನು ಹೆಚ್ಚಿಸಲಾಗಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಮಿಕರು, ದಾದಿಯರು ಮತ್ತು ಎಲ್ಲಾ ಆರೋಗ್ಯ ಕಾರ್ಯಕರ್ತರ ಸಂಬಳಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಲು ನಾವು ವಿಶೇಷ ಕಾಳಜಿ ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತರು ಮುಖ್ಯವಾಗಿ ನಿಗದಿತ ವೇತನಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಅವರ ವಿಮೆಯ ಬೇಡಿಕೆಗಳನ್ನು ಈಡೇರಿಸಲಾಗಿದೆ. ಪಿಪಿಇ ಕಿಟ್‌ಗಳು ಮತ್ತು ಮಾಸ್ಕ್‌ಗಳ ಕೊರತೆಯಿಲ್ಲ. ಅವರಿಗೆ ಈ ಎಲ್ಲವನ್ನು ನೀಡಲಾಗಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ, ಹಗಲಿರುಳು ಕೊರೊನಾ ವಾರಿಯರ್ಸ್‌ಗಳಾಗಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಕಡೆಗಣಿಸಿರುವುದು ಖಂಡನೀಯ. ಪ್ರತಿ ಗ್ರಾಮಗಳ ಕೌಟುಂಬಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 2,228 ಹೊಸ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದು, ಕೇವಲ ಬೆಂಗಳೂರಿನಲ್ಲಿಯೇ 1,373 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇದುವರೆಗೂ ಒಟ್ಟು 31,105 ಪ್ರಕರಣಗಳು ವರದಿಯಾಗಿವೆ.

 


ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...