Homeಮುಖಪುಟಪೋಲಿಸರ ಎನ್‌ಕೌಂಟರ್‌ನಲ್ಲಿ 6 ಕ್ರಿಮಿನಲ್‌ಗಳ ಸಾವು, 12 ಮಂದಿ ಉಳಿದಿದ್ದಾರೆ: ADG ಪ್ರಶಾಂತ್ ಕುಮಾರ್

ಪೋಲಿಸರ ಎನ್‌ಕೌಂಟರ್‌ನಲ್ಲಿ 6 ಕ್ರಿಮಿನಲ್‌ಗಳ ಸಾವು, 12 ಮಂದಿ ಉಳಿದಿದ್ದಾರೆ: ADG ಪ್ರಶಾಂತ್ ಕುಮಾರ್

“ಈ ಪ್ರಕರಣದಲ್ಲಿ ಇಲ್ಲಿಯವರೆಗೆ, ಮೂರು ಜನರನ್ನು ಬಂಧಿಸಲಾಗಿದೆ. ಆರು ಆರೋಪಿಗಳನ್ನು ಕೊಲ್ಲಲಾಗಿದೆ. ಮತ್ತು ಏಳು ಜನರನ್ನು ಜೈಲಿಗೆ ಕಳುಹಿಸಲಾಗಿದೆ (ಸೆಕ್ಷನ್ 120 ಬಿ ಐಪಿಸಿ ಅಡಿಯಲ್ಲಿ). ಇನ್ನೂ ಹನ್ನೆರಡು ಪ್ರಮುಖ ಅಪರಾಧಿಗಳು ಪರಾರಿಯಾಗಿದ್ದಾರೆ”

- Advertisement -
- Advertisement -

ಜುಲೈ 3 ರಂದು ಕಾನ್ಪುರದ ಬಿಕ್ರು ಗ್ರಾಮದಲ್ಲಿ ಪೊಲೀಸ್ ತಂಡದ ಮೇಲೆ ಗುಂಡಿನ ದಾಳಿ ನಡೆಸಿ 8 ಪೊಲೀಸರು ಹತ್ಯೆಗೆ ಕಾರಣರಾದವರಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ, 12 ಪರಾರಿಯಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

“ಈ ಪ್ರಕರಣದಲ್ಲಿ ಇಲ್ಲಿಯವರೆಗೆ, ಮೂರು ಜನರನ್ನು ಬಂಧಿಸಲಾಗಿದೆ. ಆರು ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ. ಮತ್ತು ಏಳು ಜನರನ್ನು ಜೈಲಿಗೆ ಕಳುಹಿಸಲಾಗಿದೆ (ಸೆಕ್ಷನ್ 120 ಬಿ ಐಪಿಸಿ ಅಡಿಯಲ್ಲಿ). ಇನ್ನೂ ಹನ್ನೆರಡು ಪ್ರಮುಖ ಅಪರಾಧಿಗಳು ಪರಾರಿಯಾಗಿದ್ದಾರೆ” ಎಂದು ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕೊಲೆ ಯೋಜಿಸಿದ ವ್ಯಕ್ತಿ, ದರೋಡೆಕೋರ ವಿಕಾಸ್ ದುಬೆ ಶುಕ್ರವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. ಶೂಟೌಟ್ ನಂತರ ಪರಾರಿಯಾಗಿದ್ದ ದುಬೆಯನ್ನು ಗುರುವಾರ ಮಧ್ಯಪ್ರದೇಶದ ಉಜ್ಜಯಿನಿ ನಲ್ಲಿ ಬಂಧಿಸಲಾಗಿತ್ತು.

ಪೊಲೀಸರು ದುಬೆಯನ್ನು ಪತ್ತೆಹಚ್ಚಲು ಹಲವು ತಂಡಗಳಲ್ಲಿ ತನಿಖೆ ನಡೆಸುತ್ತಿದ್ದರು. ದುಬೆಯ ಸಂಬಂಧಿಕರು ಸೇರಿದಂತೆ ಅನೇಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿತ್ತು. ವಿವಿಧ ನಗರಗಳಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಅವನ ಅನೇಕ ಸಹಾಯಕರು ಕೊಲ್ಲಲ್ಪಟ್ಟರು.

ಇದರ ಜೊತೆಗೆ, ಜುಲೈ 3 ರ ದಾಳಿಯ ಬಗ್ಗೆ ದುಬೆ ಹೇಗೆ ಮಾಹಿತಿ ಪಡೆದಿದ್ದ ಎಂಬ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದರು. ಇದು ದರೋಡೆಕೋರ ಮತ್ತು ಸ್ಥಳೀಯ ಪೊಲೀಸರ ನಡುವಿನ ಸಂಬಂಧವನ್ನು ಬಹಿರಂಗಪಡಿಸಿತ್ತು.

ಚೌಬೆಪುರದ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ಮಾಹಿತಿ ನೀಡಿದ್ದಾರೆ ಎಂಬ ಸಂಶಯ ವ್ಯಕ್ತಿವಾಗಿತ್ತು. ಹಾಗಾಗಿ ಅವರು ಮತ್ತು ಇತರ ಸಬ್ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿ ಬಂಧಿಸಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...