Homeಅಂತರಾಷ್ಟ್ರೀಯಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ಧಾರಾವಿಯಲ್ಲಿ ಜೂನ್ 9 ರಂದು ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದ್ದು, ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳಿವೆ.

- Advertisement -
- Advertisement -

ವಿಶ್ವದ ಅತಿದೊಡ್ಡ ಕೊಳೆಗೇರಿಗಳಲ್ಲಿ ಒಂದಾದ ’ಧಾರಾವಿ ಸ್ಲಂ’ ನಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ತೆಗೆದುಕೊಂಡ ಪ್ರಯತ್ನಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಸಾಂಕ್ರಾಮಿಕದ ವಿರುದ್ದ ರಾಷ್ಟ್ರೀಯ ಏಕತೆ ಮತ್ತು ಜಾಗತಿಕ ಒಗ್ಗಟ್ಟಿನೊಂದಿಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯ ಅಗತ್ಯವನ್ನು ಅದು ಒತ್ತಿಹೇಳಿದೆ.

ಭಾರತದ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿರುವ ಧಾರವಿ ಕೊಳೆಗೇರಿ 2.5 ಚದರ ಕಿಲೋಮೀಟರ್ ವಿಸ್ತೀರ್ಣದಷ್ಟು ದೊಡ್ಡದಿದೆ ಹಾಗೂ ಅಲ್ಲಿ 6.5 ಲಕ್ಷ ಜನರು ವಾಸಿಸುತ್ತಿದ್ದಾರೆ. ಕಿರಿದಾದ ಲೇನ್‌ಗಳು ಮತ್ತು ತೆರೆದ ಚರಂಡಿಗಳನ್ನು ಹೊಂದಿರುವ ಕೊಳೆಗೇರಿಯಲ್ಲಿ ಜನರು ಗುಡಿಸಲುಗಳು ಮತ್ತು ಶಿಥಿಲಗೊಂಡ ಕಟ್ಟಡಗಳಲ್ಲಿ ವಾಸಿಸುತ್ತಿದ್ದಾರೆ.

ಮಾರ್ಚ್ 11 ರಲ್ಲಿ ಮುಂಬೈಯ ಮೊದಲ ಕೊರೊನಾ ಪ್ರಕರಣ ವರದಿಯಾದ ಸುಮಾರು ಮೂರು ವಾರಗಳ ನಂತರ, ’ಧಾರಾವಿ ಕೊಳೆಗೇರಿ’ ಯಲ್ಲಿ ಮೊದಲ ಕೊರೊನಾ ಪತ್ತೆಯಾಗಿದ್ದರು.

ಶುಕ್ರವಾರ ಜಿನೇವಾದಲ್ಲಿ ವರ್ಚುವಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ’’ಸಾಂಕ್ರಮಿಕ ಹರಡುವುದು ತೀವ್ರವಾಗಿದ್ದರೂ ಸಹ ಅದನ್ನು ಮತ್ತೆ ನಿಯಂತ್ರಣಕ್ಕೆ ತರಬಹುದು ಎಂದು ಪ್ರಪಂಚದಾದ್ಯಂತದ ಅನೇಕ ಉದಾಹರಣೆಗಳಿವೆ.

ಇಟಲಿ, ಸ್ಪೇನ್ ಮತ್ತು ದಕ್ಷಿಣ ಕೊರಿಯಾ ಅಲ್ಲದೆ ಮುಂಬೈ ಮಹಾನಗರದ ಜನದಟ್ಟನೆಯ ಪ್ರದೇಶವಾದ ಧಾರವಿ ಸಹ ಇದಕ್ಕೆ ಉದಾಹರಣೆಯಾಗಿದೆ” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ದಾರಾವಿಯಲ್ಲಿ ಜೂನ್ 9 ರಂದು ಕೇವಲ ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದೆ. ಇದುವರೆಗೆ ಅಲ್ಲಿ ಒಟ್ಟು ಪ್ರಕರಣ 2,347 ವರದಿಯಾಗಿದೆ. ಮುಂಬೈಯಲ್ಲಿ 88,000 ಕೊರೊನಾ ಪ್ರಕರಣಗಳು ಮತ್ತು 5,129 ಸಾವುಗಳು ದಾಖಲಾಗಿವೆ.

ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳು ಹೊಂದಿದ್ದು, 1,815 ರೋಗಿಗಳು ಇದುವರೆಗು ಚೇತರಿಸಿಕೊಂದ್ದಾರೆ.

ಶನಿವಾರ ಭಾರತದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8.2 ಲಕ್ಷವನ್ನು ತಲುಪಿದ್ದು, 27,114 ಹೊಸ ಪ್ರಕರಣಗಳು ವರದಿಯಾಗಿದೆ ಹಾಗೂ ಇದುವರೆಗೆ 22,123 ಜನರು ಮೃತಪಟ್ಟಿದ್ದಾರೆ.


ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...