Homeಮುಖಪುಟಪದ್ಮನಾಭ ಸ್ವಾಮಿ ದೇವಾಲಯ ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು: ಸುಪ್ರೀಂ ಕೋರ್ಟ್

ಪದ್ಮನಾಭ ಸ್ವಾಮಿ ದೇವಾಲಯ ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು: ಸುಪ್ರೀಂ ಕೋರ್ಟ್

ದೇವಾಲಯದ ಕೋಣೆಗಳಲ್ಲಿನ ಆಸ್ತಿಗಳ ವಿವರವಾದ ಪಟ್ಟಿಮಾಡಲು ನ್ಯಾಯಾಲಯ ಆದೇಶಿಸಿದೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದೆಂದು ಪರಿಗಣಿಸಲಾಗಿರುವ ತಿರುವನಂತಪುರಂನ ಐತಿಹಾಸಿಕ ಶ್ರೀ ಪದ್ಮನಾಭ ಸ್ವಾಮಿ ದೇವಾಲಯದ ಆಡಳಿತದಲ್ಲಿ ತಿರುವಾಂಕೂರು ರಾಜಮನೆತನದ ಹಕ್ಕನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ತಿರುವನಂತಪುರಂ ಜಿಲ್ಲಾ ನ್ಯಾಯಾಧೀಶರು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ಆಡಳಿತ ಸಮಿತಿಯ ಮುಖ್ಯಸ್ಥರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ದೇವಾಲಯದ ಆಡಳಿತವನ್ನು ವಹಿಸಿಕೊಳ್ಳಲು ಟ್ರಸ್ಟ್ ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದ್ದ ಕೇರಳ ಹೈಕೋರ್ಟ್‌‌ನ ಜನವರಿ 31, 2011 ರ ತೀರ್ಪನ್ನು ಸುಪ್ರೀಂ ಕೋರ್ಟ್ ಬದಿಗಿಟ್ಟಿದೆ.

ಆರ್ಥಿಕ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಐತಿಹಾಸಿಕ ದೇವಾಲಯದ ಆಡಳಿತ ಮತ್ತು ನಿರ್ವಹಣೆಯ ಕುರಿತ ಮೊಕದ್ದಮೆ ಕಳೆದ ಒಂಬತ್ತು ವರ್ಷಗಳಿಂದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇತ್ತು.

ತಿರುವಾಂಕೂರಿನ ಕೊನೆಯ ಮಹಾರಾಜರ ನಿಧನದ ನಂತರ, ದೇವಾಲಯವನ್ನು ಸರ್ಕಾರಕ್ಕೆ ವಹಿಸಲಾಗಿದೆ ಎಂದು ಹೈಕೋರ್ಟ್ 2011 ರ ಜನವರಿ 31 ರಂದು ತೀರ್ಪು ನೀಡಿತ್ತು.

ದೇವಾಲಯವನ್ನು ರಾಜಮನೆತನದ ಮುಂದಿನ ಕುಡಿಗಳಿಗೆ ಹಸ್ತಾಂತರಿಸಲು ಯಾವುದೇ ಅವಕಾಶವಿಲ್ಲದ ಕಾರಣ ಸರ್ಕಾರವು ದೇವಾಲಯವನ್ನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ಹೈಕೋರ್ಟ್ ಆದೇಶದ ವಿರುದ್ಧ ಉತ್ರಾದಂ ತಿರುನಾಲ್ ಮಾರ್ತಾಂಡ ವರ್ಮಾ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದರು. ನಂತರ ಸುಪ್ರೀಂ ಕೋರ್ಟ್ 2011 ರ ಮೇ 2 ರಂದು ಹೈಕೋರ್ಟ್ ಆದೇಶವನ್ನು ತಡೆಹಿಡಿದಿತ್ತು.

ಕೋಣೆ(ಕಲ್ಲಾರ) ಗಳಲ್ಲಿನ ಲೇಖನಗಳು, ಬೆಲೆಬಾಳುವ ವಸ್ತುಗಳು, ಆಭರಣಗಳ ವಿವರವಾದ ಪಟ್ಟಿ ಮಾಡಬೇಕು ಎಂದು ಉನ್ನತ ನ್ಯಾಯಾಲಯವು ನಿರ್ದೇಶಿಸಿತ್ತು.

ಜುಲೈ 8, 2011 ರಂದು ಸುಪ್ರೀಂ ಕೋರ್ಟ್ “ಬಿ. ಕೋಣೆ” ತೆರೆಯುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಬೇಕು ಎಂದು ಹೇಳಿತ್ತು.

ಜುಲೈ 2017 ರಲ್ಲಿ, ಸುಪ್ರೀಂ ಕೋರ್ಟ್ ದೇವಾಲಯದಲ್ಲಿ ಒಂದು ಕೋಣೆಯಲ್ಲಿ ‘ಅತೀಂದ್ರಿಯ’ ಶಕ್ತಿಯೊಂದಿಗೆ ಭಾರಿ ನಿಧಿ ಇದೆ ಎಂಬ ವಾದಗಳನ್ನು ಪರಿಶೀಲಿಸುವುದಾಗಿ ಹೇಳಿತ್ತು.

ಆದರೆ, ದೇವಾಲಯದ ಕೋಣೆಗಳಲ್ಲಿನ ಆಸ್ತಿಗಳ ವಿವರವಾದ ಪಟ್ಟಿಮಾಡಲು ನ್ಯಾಯಾಲಯ ಆದೇಶಿಸಿದೆ.

ಅಮಿಕಸ್ ಕ್ಯೂರಿಯಂತೆ ನೇಮಕಗೊಂಡ ಗೋಪಾಲ್ ಸುಬ್ರಮಣ್ಯಂ ಮತ್ತು ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವಿನೋದ್ ರೈ ಅವರು ದೇವಾಲಯದ ಆಡಳಿತ ಮತ್ತು ಅದರ ಆಸ್ತಿಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಹಿಂದಿನ ತಿರುವಾಂಕೂರು ರಾಜಮನೆತನದ ರಾಜರ ಸ್ವಂತ ವೆಚ್ಚಕ್ಕೆ ಸರಕಾರದ ಬೊಕ್ಕಸದಿಂದ ಕೊಡುವ ಹಣ ಮತ್ತು ರಾಜಪ್ರಭುತ್ವದ ಆಡಳಿತವು ಕೊನೆಗೊಂಡಿದ್ದರಿಂದ ರಾಜನ ವೈಯಕ್ತಿಕ ಸವಲತ್ತುಗಳು ಅಸ್ತಿತ್ವದಲ್ಲಿಲ್ಲ ಎಂದು ವಾದಿಸಿದರು. ದೇವಾಲಯವು ಸಾರ್ವಜನಿಕರಿಗೆ ಮುಕ್ತವಾಗಿದ್ದರೂ, ದೇವಾಲಯದ ಆಡಳಿತದ ಮೇಲೆ ರಾಜಮನೆತನಕ್ಕೆ ಹಕ್ಕಿದೆ.

ಆದಾಗ್ಯೂ, ಅಮಿಕಸ್ ಕ್ಯೂರಿ ಮತ್ತು ಹಿಂದಿನ ಸಿಎಜಿ ದೇವಾಲಯದ ಆಡಳಿತದಲ್ಲಿ ಅಕ್ರಮಗಳು ನಡೆದಿರೆಉ ಕಂಡುಕೊಂಡಿದೆ ಎಂದು ರಾಜ್ಯ ಸರ್ಕಾರ ವಾದಿಸಿತು. ಗುರುವಾಯೂರ್ ದೇವಾಲಯದಂತೆಯೇ ಆಡಳಿತಾತ್ಮಕ ಮಾದರಿಯನ್ನು ಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಪರಿಗಣಿಸಬೇಕು ಎಂದು ಕೇಳಿದೆ.

ದಕ್ಷಿಣ ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳನ್ನು ಆಳ್ವಿಕೆ ನಡೆಸಿದ್ದ ತಿರುವಾಂಕೂರು ರಾಜ ಮನೆತನವೂ 18 ನೇ ಶತಮಾನದಲ್ಲಿ ಈ ವಿಸ್ತಾರವಾದ ದೇವಾಲಯವನ್ನು ಗ್ರಾನೈಟ್‌ನಲ್ಲಿ ನಿರ್ಮಿಸಿತ್ತು.

ಭಾರತದ ಸ್ವಾತಂತ್ರ್ಯದ ನಂತರವೂ ಈ ದೇವಾಲಯವನ್ನು ಹಿಂದಿನ ರಾಜಮನೆತನದವರು ನಿಯಂತ್ರಿಸುವ ಟ್ರಸ್ಟ್‌ನಿಂದ ನಿಯಂತ್ರಿಸಲಾಗುತ್ತಿತ್ತು.

ಸುಪ್ರೀಂ ಕೋರ್ಟಿನ ಈ ತೀರ್ಪಿಗೆ ಹಲವಾರು ಜನರು ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್. ದ್ವಾರಕ್‌ನಾಥ್ “ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಹಕ್ಕು ಆಗಬೇಕಾದುದು ರಾಜಮನೆತನದ ಹಕ್ಕು ಹೇಗಾಗುತ್ತೋ ?” ಎಂದು ಹೇಳಿದ್ದಾರೆ.

ರಾಜಮನೆತನದ ಹಕ್ಕುರಕ್ಷಣೆಗೆ ಸುಪ್ರೀಂ ಕೋರ್ಟ್!!- – – – – – – – – "ಅನಂತಪದ್ಮನಾಭ ದೇವಸ್ಥಾನದ (ಬೆಲೆಕಟ್ಟಲಾಗದಷ್ಟು ಅಮೂಲ್ಯ) ಸಂಪತ್ತಿನ…

Posted by Dwarakanath Chokka on Monday, July 13, 2020


ಓದಿ: ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...