Homeಮುಖಪುಟವರವರ ರಾವ್ ಆಸ್ಪತ್ರೆಗೆ: ಜಾಮೀನು ನಿರಾಕರಣೆ ವಿರುದ್ಧ ಹೈಕೋರ್ಟ್‌ನಲ್ಲಿ ಮನವಿ

ವರವರ ರಾವ್ ಆಸ್ಪತ್ರೆಗೆ: ಜಾಮೀನು ನಿರಾಕರಣೆ ವಿರುದ್ಧ ಹೈಕೋರ್ಟ್‌ನಲ್ಲಿ ಮನವಿ

ಕಳೆದ ವಾರದ ನಂತರ, ರಾವ್ ಅವರು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ವೈದ್ಯಕೀಯ ಆಧಾರದ ಮೇಲೆ ಸಲ್ಲಿಸಿದ್ದ ತಮ್ಮ ಮಧ್ಯಂತರ ಜಾಮೀನು ಅರ್ಜಿಯನ್ನು  ತಿರಸ್ಕರಿಸಲಾಯಿತು.

- Advertisement -
- Advertisement -

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ 2018 ರಿಂದ ಜೈಲಿನಲ್ಲಿರುವ ಇರುವ 80 ವರ್ಷದ ತೆಲುಗು ಕವಿ-ಸಾಹಿತಿ ಮತ್ತು ಹೋರಾಟಗಾರ ವರವರರಾವ್ ಅವರನ್ನು, ಅನಾರೋಗ್ಯದ ಕಾರಣದಿಂದ ಪರೀಕ್ಷೆಗಾಗಿ ಸೋಮವಾರ ಸರ್ಕಾರಿ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜುಲೈ 11 ರಂದು ಫೋನ್ ಮೂಲಕ ವರವರ ರಾವ್‌ರೊಂದಿಗೆ ಮಾತನಾಡಿದ ಸಮಯದಲ್ಲಿ, ಅವರು ಸ್ಪಷ್ಟವಾಗಿ ಮಾತನಾಡಿಲ್ಲ. ಅವರ ಆರೋಗ್ಯದ ಬಗೆಗಿನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. 70 ವರ್ಷಗಳ ಹಿಂದೆ ಮತ್ತು 40 ವರ್ಷಗಳ ಹಿಂದೆಯೇ ನಿಧನ ಹೊಂದಿರುವ ತಮ್ಮ ತಂದೆ ಮತ್ತು ತಾಯಿಯ ಅಂತ್ಯಕ್ರಿಯೆಯ ಬಗ್ಗೆ ಒಂದು ರೀತಿಯ ಭ್ರಮನಿರಸನ ಮತ್ತು ಭ್ರಮೆಯ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮಾತನಾಡಲು ಪದಗಳಿಗಾಗಿ ಅವರು ಹುಡುಕಾಡುತ್ತಿದ್ದರು. ಇದೆಲ್ಲವೂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಅವರ ಪತ್ನಿ ಭಾನುವಾರವಷ್ಟೇ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.


ಇದನ್ನೂ ಓದಿ: ಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ


ಜೈಲಿನಲ್ಲಿ ಕೋವಿಡ್ -19 ಗೆ ಒಳಗಾಗುವ ಸಾಧ್ಯತೆಯನ್ನು ಉಲ್ಲೇಖಿಸಿ ರಾವ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಜೂನ್ 27 ರಂದು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ಆದೇಶದ ವಿರುದ್ಧ ಬಾಂಬೆ ಹೈಕೋರ್ಟ್‌ಗೆ ಅವರು ಮನವಿ ಸಲ್ಲಿಸಿದ್ದರು. ಕಳೆದ ಶುಕ್ರವಾರ, ನ್ಯಾಯಾಲಯವು ಎನ್ಐಎ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಮುಂದಿನ ವಿಚಾರಣೆಯ ದಿನಾಂಕ ಜುಲೈ 17 ರೊಳಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ನೋಟಿಸ್ ನೀಡಿದೆ.

ಜೆಜೆ ಆಸ್ಪತ್ರೆಯ ಡೀನ್ ಡಾ.ರಂಜಿತ್ ಮಾಂಕೇಶ್ವರ ಮಾತನಾಡಿ “ನಾವು ಕೆಲವು ಪರೀಕ್ಷೆಗಳನ್ನು ನಡೆಸಿದ ನಂತರ ಅವರನ್ನು ಆಸ್ಪತ್ರೆಗೆ ಸೇರಿಸಬೇಕೆ ಎಂದು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಮುಂಬಯಿಯ ತಾಜೋಲಾ ಕೇಂದ್ರ ಕಾರಾಗೃಹದಿಂದ ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ರಾವ್ ಅವರ ಕುಟುಂಬವು ಒತ್ತಾಯಿಸಿತ್ತು.

ಸೋಮವಾರ ರಾವ್ ಪರ ವಕೀಲ ಆರ್ ಸತ್ಯನಾರಾಯಣನ್, ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ಎನ್‌ಐಎ ನ್ಯಾಯಾಲಯದ ವಿರುದ್ಧದ ಮೇಲ್ಮನವಿಯನ್ನು ಜುಲೈ 17ರ ಬದಲು ಮಂಗಳವಾರ ವಿಚಾರಣೆಗೆ ಒಳಪಡಿಸಬೇಕು ಎಂದು ಹೈಕೋರ್ಟ್‌ನ ಮುಂದೆ ತುರ್ತು ಪ್ರೆಸಿಪಿಯನ್ನು ಸಲ್ಲಿಸಿದ್ದಾರೆ. ಜೆಜೆ ಆಸ್ಪತ್ರೆಯ ಸೂಚನೆಯಂತೆ ವೈದ್ಯಕೀಯ ತಪಾಸಣೆ ನಡೆಸದಿರುವುದಕ್ಕೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್: ತಕ್ಷಣದ ವೈದ್ಯಕೀಯ ತಪಾಸಣೆ ಕೋರಿ ಬಾಂಬೆ ಹೈಕೋರ್ಟ್‌‌ಗೆ ಮೊರೆ ಹೋದ ವರವರ ರಾವ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...