Homeಕರ್ನಾಟಕವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ...

ವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ ನೋಟಿಸ್!

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯರೊಬ್ಬರು ವನ್ಯಜೀವಿಗಳ ಸೂಕ್ಷ್ಮ ಪ್ರದೇಶದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಭಾರೀ ಫಾರ್ಮ್ ಹೌಸ್‌ ನಿರ್ಮಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ, ರಾಜ್ಯ ವನ್ಯಜೀವಿ ಬೋರ್ಡ್(SBWL) ಸದಸ್ಯ ದಿನೇಶ್ ಕುಮಾರ್ ಸಿಂಘಿ ಎಂಬುವವರು ಫಾರ್ಮ್ ಹೌಸ್‌‌ ನಿರ್ಮಿಸುತ್ತಿದ್ದಾರೆ ಎನ್ನಲಾಗಿರುವ ಬಗ್ಗೆ ಉತ್ತರಿಸುವಂತೆ ಭೂಮಾಲಿಕ ಕೆ.ಎಸ್ ನರಸಿಂಹ ಮೂರ್ತಿ ಅವರಿಗೆ ಅರಣ್ಯ ಇಲಾಖೆ ನೋಟಿಸ್‌ ನೀಡಿದೆ.

ಎನ್ ಬೆಲತೂರ್ ಗ್ರಾಮ, ಎಚ್ ಡಿ ಕೋಟೆ ತಾಲೂಕಿನ ಸರ್ವೆ ಸಂಖ್ಯೆ 142 ಮತ್ತು 144 ರ ಕೆ ಎಸ್ ನರಸಿಂಹ ಮೂರ್ತಿ ಎಂಬವರ ಭೂಮಿಯಲ್ಲಿ ರಾಜ್ಯ ವನ್ಯಜೀವಿ ಸದಸ್ಯ ದಿನೇಶ್ ಕುಮಾರ್ ಸಿಂಘಿ ಅವರು ವಿಶಾಲವಾದ ಫಾರ್ಮ್ ಹೌಸ್ ನಿರ್ಮಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೇ ಅವುಗಳ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿ ವಲಯ ಅರಣ್ಯಾಧಿಕಾರಿ ಅವರಿಗೆ ಏಳು ದಿನದಲ್ಲಿ ಉತ್ತರಿಸುವಂತೆ ನೋಟಿಸ್‌ ನೀಡಿದ್ದಾರೆ.

ಈ ನಿರ್ಮಾಣ ಚಟುವಟಿಕೆ ನಡೆಯುತ್ತಿರುವ ಪ್ರದೇಶ ಪರಿಸರ ಸೂಕ್ಷ್ಮ ವಲಯ (ESZ) ಕ್ಕೆ ಸೇರಿದ್ದು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅಲ್ಲಿ ಯಾವುದೇ ಚಟುವಟಿಕೆ ನಡೆಯುಂತಿಲ್ಲ. ಅಲ್ಲದೆ ಆ ಪ್ರದೇಶವು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಬಫರ್‌ಝೂನ್ ವ್ಯಾಪ್ತಿಯಲ್ಲಿದೆ, ಜೊತೆಗೆ ಅದು ಆನೆಗಳ ಆವಾಸ ಸ್ಥಾನವಾಗಿರುವುದರಿಂದ ಆನೆಗಳ ಸಂರಕ್ಷಿತ ಪ್ರದೇಶ ಕೂಡಾ ಆಗಿದೆ ಎನ್ನಲಾಗಿದೆ.

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರದೇಶದಲ್ಲಿ ಯಾವುದೇ ಹೊಸ ನಿರ್ಮಾಣ ಕಾರ್ಯಗಳನ್ನು ನಡೆಸುವ ಮೊದಲು ಅರಣ್ಯ ಅಧಿಕಾರಿಯಿಂದ ಅನುಮತಿ ಪಡೆಯಬೇಕಾಗುತ್ತದೆ. ದಿನೇಶ್ ಕುಮಾರ್ ಆಗಲಿ ಭೂಮಿ ಮಾಲೀಕರಾಗಲಿ ಅಂತಹ ಅನುಮತಿ ಪಡೆದಿಲ್ಲ.

ಇದೆಲ್ಲವನ್ನೂ ಮೀರಿ ಸ್ವತಃ ರಾಜ್ಯ ವನ್ಯ ಜೀವಿ ಬೋರ್ಡ್ ಇದರ ಸದಸ್ಯರಾದ ದಿನೇಶ್ ಕುಮಾರ್ ಸಿಂಘಿ ನಿರ್ಮಾಣ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತ ಹಾಗೂ ಮಾಜಿ ವನ್ಯಜೀವಿ ಬೋರ್ಡ್ ಸದಸ್ಯರಾದ ಜೋಸೆಫ್ ಹೂವರ್‌, “ದಿನೇಶ್ ಕುಮಾರ್ ಸಿಂಘಿ ಅವರು ಗಣಿ ಉದ್ಯಮಿಯಾಗಿದ್ದು, ಗಣಿ ಉದ್ಯಮಿಗಳು ವನ್ಯಜೀವಿ ಬೋರ್ಡ್‌ನಲ್ಲಿ ಇರಬಾರದೆಂದು ನಿಯಮವಿದೆ. ಸುಪ್ರೀಂ ಆದೇಶವನ್ನು ಮೀರಿ ಅಲ್ಲಿ ಫಾರ್ಮ್ ನಿರ್ಮಾಣ ಚಟುವಟಿಕೆ ನಡೆಯುತ್ತಿದೆ. ಅಧಿಕಾರ, ಹಣವಿದೆಯೆಂದು ಸ್ಥಳೀಯ ಅರಣ್ಯ ಅಧಿಕಾರಿಯ ನಿರಪೇಕ್ಷಣ ದೃಡೀಕರಣ  ಪತ್ರ ಪಡೆಯದೆ ನಿರ್ಮಾಣ ಕಾರ್ಯನಡೆಯುತ್ತಿದೆ. ಇದನ್ನು ವನ್ಯಜೀವಿಗಳ ಹಿತದೃಷ್ಟಿಯಿಂದ ತಡೆಯಬೇಕು” ಎಂದು ಹೇಳಿದ್ದಾರೆ.


ಓದಿ: ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೀಘ್ರವೇ ಪೌರಕಾರ್ಮಿಕರ ಉಪಹಾರ ಭತ್ಯೆ ₹70 ಕ್ಕೆ ಹೆಚ್ಚಿಸುವೆ: ಸಿಎಂ ಡಿ.ಕೆ. ಶಿವಕುಮಾರ್

ಪೌರಕಾರ್ಮಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪೌರಕಾರ್ಮಿಕರ ಉಪಹಾರ ಭತ್ಯೆಯನ್ನು ₹35 ರಿಂದ ₹70 ಕ್ಕೆ ಏರಿಕೆ ಮಾಡಿ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು...

ಎಸ್ಐಆರ್ ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ : ಪ್ರಕಾಶ್ ರಾಜ್

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು. ಎಸ್ಐಆರ್ ಪರಿಶೋಧನೆ ಮತ್ತು ಪ್ರತಿರೋಧ ಜಾಥಾದ ಭಾಗವಾಗಿ ಶುಕ್ರವಾರ (ಸೆ.25)...

ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ: ದಲಿತ ಸಂಘಟನೆಗಳ ಒಕ್ಕೂಟ ಖಂಡನೆ

ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿರುವ ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದ ಬೆಂಗಳೂರಿನ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದಲಿತ ಸಂಘಟನೆಗಳ...

ಮುರ್ಷಿದಾಬಾದ್‌: ಎಸ್ಐಆರ್ ಪ್ರಕ್ರಿಯೆಯಲ್ಲಿ ಹೆಸರುಗಳು ಉಳಿದರೂ ‘ಬಾಂಗ್ಲಾದೇಶಿ’ ಎಂದು ಅನುಮಾನಿಸಿ 60 ವರ್ಷದ ತಂದೆ, ಮೂವರು ಪುತ್ರರ ಗಡಿಪಾರು ಆರೋಪ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಂಗಾಳಿ ಮುಸ್ಲಿಂ ಕುಟುಂಬವೊಂದರ ನಾಲ್ವರು ಸದಸ್ಯರನ್ನು ಪೊಲೀಸರು ಮನೆಯಿಂದ ಕರೆದೊಯ್ದು, ಅವರು ಬಾಂಗ್ಲಾದೇಶಿ ಪ್ರಜೆಗಳು ಎಂದು ಆರೋಪಿಸಿ ಬಿಎಸ್‌ಎಫ್‌ಗೆ ಹಸ್ತಾಂತರಿಸಿ ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು...

ಗ್ಯಾನೇಶ್ ಕುಮಾರ್‌ನನ್ನು ಬಂಧಿಸುವಂತೆ ಬಿ.ಕೆ. ಹರಿಪ್ರಸಾದ್ ಆಗ್ರಹ: ನಾಳೆ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಇನ್ನುಳಿದ ಇಬ್ಬರು ಆಯುಕ್ತರ ಭಿನ್ನಮತವನ್ನು ಸಂಪೂರ್ಣವಾಗಿ ತಳ್ಳಿಹಾಕಿ ಗೌಪ್ಯವಾಗಿ 'ಎಸ್‌ಐಆರ್'...

‘ಪೆನ್ಶನ್ ಹೋಗಲ್ಲ, SIR ಹೋಗುತ್ತೆ, ಹೆದರಬೇಡಿ’: ತುಮಕೂರಿನಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕಾಶ್ ರಾಜ್ ಭರವಸೆ

ತುಮಕೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ನೋಟಿಸ್‌ಗಳಿಂದ ಆತಂಕಕ್ಕೊಳಗಾಗಿರುವ ತುಮಕೂರಿನ ಎನ್‌ಆರ್ ಕಾಲೊನಿಯ ನಿವಾಸಿಗಳ ಮನೆಗಳಿಗೆ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಭೇಟಿ ನೀಡಿ, ಅವರ ಸಮಸ್ಯೆಗಳನ್ನು...

SIR ಅಕ್ರಮ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾಂವಿಧಾನಿಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಶಿಸ್ತು ಹಾಗೂ...

ಜೆನ್ ಝಿ ಮತದಾರರ ನೋಂದಣಿ ಸ್ಥಗಿತದ ಹಿಂದೆ ಮೋದಿ-ಸಿಇಸಿ ಸಂಚು: ಕಾಂಗ್ರೆಸ್ ಆರೋಪ

18 ವರ್ಷ ತುಂಬಿದ ಯುವಜನರನ್ನು (Gen Z) ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ 'ವಿಶೇಷ ಸಂಕ್ಷಿಪ್ತ ಪರಿಷ್ಕರಣೆ' (SSR) ಪ್ರಕ್ರಿಯೆಯು 2024 ರಿಂದ ತಡೆಹಿಡಿಯಲ್ಪಟ್ಟಿರುವುದು ಹಾಗೂ ಈ ವಿಷಯವಾಗಿ ಕೇಂದ್ರ ಚುನಾವಣಾ ಆಯೋಗದಲ್ಲಿ (ECI)...

ತುಮಕೂರಿನ ಎನ್.ಆರ್. ಕಾಲೋನಿ ಕೋತಿ ತೋಪಿನಲ್ಲಿ ಎಸ್ಐಆರ್ ಪರಿಶೋಧನೆ: ಸಂತ್ರಸ್ತರ ಅಹವಾಲು ಆಲಿಸಿದ ಪ್ರಕಾಶ್ ರಾಜ್: ಸೆ.26ಕ್ಕೆ ಬೆಂಗಳೂರಿನಲ್ಲಿ ಪ್ರತಿಭಟನೆ

ತುಮಕೂರು: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳನ್ನು ನೇರವಾಗಿ ಪರಿಶೀಲಿಸುವ ಉದ್ದೇಶದಿಂದ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು ತುಮಕೂರು ನಗರದ ಎನ್‌ಆರ್‌ ಕಾಲೊನಿ...

SIR ವಿವಾದ ಮತ್ತು ಆಂತರಿಕ ಬಿಕ್ಕಟ್ಟು: ಮೀರತ್, ವಾರಾಣಸಿ ಪ್ರವಾಸ ದಿಢೀರ್ ರದ್ದುಗೊಳಿಸಿದ ಗ್ಯಾನೇಶ್‌ ಕುಮಾರ್! Gen-Z ಆಕ್ರೋಶಕ್ಕೆ ಬೆದರಿತೇ ಆಯೋಗ?

ದೇಶಾದ್ಯಂತ ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (SIR) ವಿವಾದ, ಸ್ಥಗಿತಗೊಂಡಿರುವ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆ (SSR) ಹಾಗೂ ಚುನಾವಣಾ ಆಯೋಗದ ಉನ್ನತ ಹಂತದ ಶೀತಲ...