Homeಮುಖಪುಟಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

- Advertisement -
- Advertisement -

ಮಧ್ಯಪ್ರದೇಶದ ಗುಣಾ ಜಿಲ್ಲೆಯಲ್ಲಿ ತಾವು ಬೆಳೆದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಮುಂದಾದ ದಲಿತ ದಂಪತಿಯ ಮೇಲೆ ಹತ್ತಾರು ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ. ಕ್ರೂರ ದೌರ್ಜನ್ಯಕ್ಕೆ ತುತ್ತಾದ ದಂಪತಿಗಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ವಿಡಿಯ ವೈರಲ್ ಆಗಿದೆ. ಈ ಕುರಿತು ಮಧ್ಯಪ್ರದೇಶ ಸರ್ಕಾರದ ವಿರುದ್ಧ ಸಾವಿರಾರು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಣಾ ಜಿಲ್ಲೆಯಲ್ಲಿ ಸರ್ಕಾರಕ್ಕೆ ಸೇರಿದ್ದ ಜಮೀನನ್ನು ಗುತ್ತಿಗೆಗೆ ತೆಗೆದುಕೊಂಡು ದಲಿತ ಕುಟುಂಬವೊಂದು ಬೆಳೆ ಬೆಳೆಯುತ್ತಿತ್ತು. ಇತ್ತೀಚೆಗೆ, ಆ ಪ್ರದೇಶದಲ್ಲಿ ಕಾಲೇಜನ್ನು ನಿರ್ಮಿಸಲು ಸರ್ಕಾರ ಆ ಜಮೀನನ್ನು ಸ್ವಾಧೀನಪಡಿಸಿಕೊಳ್ಳುಲು ಆದೇಶಿಸಿತ್ತು. ಈ ವೇಳೆ ದಲಿತ ದಂಪತಿಗಳಾದ ರಾಜ್‌ಕುಮಾರ್ ಅಹಿರ್ವಾರ್ ಮತ್ತು ಸಾವಿತ್ರಿ ಸ್ವಲ್ಪ ಸಮಯ ಕೊಡಿ ಬೆಳೆ ಕೊಯ್ದುಕೊಂಡ ನಂತರ ವಶಪಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಸೊಪ್ಪು ಹಾಕದ ಪೊಲೀಸರು ಬಲವಂತವಾಗಿ ಬೆಳೆ ನಾಶಕ್ಕೆ ಮುಂದಾದಾಗ ಬೇರೆ ದಾರಿ ಕಾಣದೇ ದಂಪತಿಗಳು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

Posted by Naanu Gauri on Thursday, July 16, 2020

ಬೆಳೆ ಕಟಾವಿನ ಹಂತಕ್ಕೆ ಬಂದಿದ್ದು, ಕಾಟಾವು ಮಾಡುವವರೆಗೂ ಸಮಯಾವಕಾಶ ಕೊಡಿ ಎಂದು ಕುಟುಂಬ ಜಮೀನಿನಿಂದ ಒಕ್ಕಲೆಬ್ಬಿಸಲು ಬಂದ ಅಧಿಕಾರಿಗಳ ಬಳಿ ಅಂಗಲಾಚಿಕೊಂಡರೂ ಅಧಿಕಾರಗಳು ದರ್ಪ ಮೆರೆದಿದ್ದಾರೆ. ಪೊಲೀಸರು ಮನಬಂದಂತೆ ಥಳಿಸಿದ್ದಾರೆ.

ಮನಕಲಕುವ ವೈರಲ್ ವಿಡಿಯೋದಲ್ಲಿ ದಂಪತಿಗಳಿಬ್ಬರನ್ನು ನೆಲದಲ್ಲಿ ಎಳೆದೊಯ್ಯುವ, ತನ್ನ ಮಕ್ಕಳ ಎದುರೆ ಕಾಲಿನಿಂದ ಒದೆಯುವ, ಲಾಠಿಯಿಂದ ಹಲ್ಲೆ ಮಾಡುವುದನ್ನು ಕಾಣಬಹುದಾಗಿದೆ. ಕೇವಲ ಇಬ್ಬರ ಮೇಲೆ ಸುಮಾರು 25-30 ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಘಟನೆಯಲ್ಲಿ ಅಸ್ವಸ್ಥಗೊಂಡು ಸಾವು-ಬದುಕಿನ ನಡುವಿನ ಹೋರಾಟದಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅಹಿರ್ವಾರ್ ಮತ್ತು ಪತ್ನಿ ಸಾವಿತ್ರಿಯವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಸಾವಿರಾರು ಜನ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಿದ್ದಾರೆ. ಘಟನೆಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ದಲಿತ ಕುಟುಂಬಕ್ಕೆ ಭೂಮಿ, ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

“ನಮ್ಮ ಹೋರಾಟವು ಇಂತಹ ಮನಸ್ಥಿತಿ ಮತ್ತು ಅನ್ಯಾಯದ ವಿರುದ್ಧವಾಗಿದೆ” ಎಂಬ ಶೀರ್ಷಿಕೆಯೊಂದಿಗೆ ಆ ವಿಡಿಯೋವನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಭೂಸ್ವಾಧೀನಕ್ಕಾಗಿ ದೌರ್ಜನ್ಯ ನಡೆಸಿದ ಗುಣಾ ಜಿಲ್ಲಾಧಿಕಾರಿ ಎಸ್‌ ವಿಶ್ವನಾಥ್‌ ಮತ್ತು ಎಸ್‌ಪಿ ತರುಣ್‌ ನಾಯಕ್‌ ಅವರನ್ನು ಸೇವೆಯಿಂದ ತೆಗೆದುಹಾಕಲಾಗಿದೆ ಎಂದು ಮಧ್ಯಪ್ರದೇಶದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ಇದೇ ಸಮಯದಲ್ಲಿ ದಲಿತ ದಂಪತಿಯ ಮೇಲೂ ಸಹ ಆತ್ಮಹತ್ಯೆಗೆ ಪ್ರಯತ್ನ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.

ಸೇವೆಯಿಂದ ಅಮಾನತಾಗುವ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿ ವಿಶ್ವನಾಥನ್‌, “ಅಹಿರ್ವಾರ್ ಅವರ ಸಂಬಂಧಿಕರು ದಂಪತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಬಿಡದ ಕಾರಣ ಪೊಲೀಸರು ಬಲವನ್ನು ಬಳಸಬೇಕಾಯಿತು. ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರ 12 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಇನ್ನೂ ವಿಳಂಬ ಮಾಡಿದಲ್ಲಿ ಅದನ್ನು ಬೇರೆ ಜಿಲ್ಲೆಗೆ ಸ್ಥಳಾಂತರಿಸಬಹುದು. ಹಾಗಾಗಿ ನಾವು ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗಿತ್ತು” ಎಂದು ಹೇಳಿದ್ದಾರೆ.

‘ಈ ಘಟನೆಯ ಬಗ್ಗೆ ಭೋಪಾಲ್‌ನ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಾರೆ ಮತ್ತು ಘಟನೆಗೆ ಯಾರು ಹೊಣೆಗಾರರಾಗಿದ್ದಾರೆ ಎಂಬುದರ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ’ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದರು.

“ಭೂಮಿಯ ಬಗ್ಗೆ ವಿವಾದವಿದ್ದರೆ, ಅದನ್ನು ಕಾನೂನುಬದ್ಧವಾಗಿ ಪರಿಹರಿಸಬಹುದಿತ್ತು… ಜನ ಸೇವಕರು ಎಂದು ಕರೆದುಕೊಳ್ಳುವ ಬಿಜೆಪಿ ಸರ್ಕಾರವು, ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಆಕ್ರಮಣ ಮಾಡಿಕೊಂಡಿರುವವರನ್ನು ತೆರವುಗೊಳಿಸುವಲ್ಲಿ ಇದೇ ರೀತಿಯ ದರ್ಪವನ್ನು ತೋರುತ್ತದೆಯೇ?” ಎಂದು ಮಾಜಿ ಸಿಎಂ ಕಮಲ್ ನಾಥ್ ಪ್ರಶ್ನಿಸಿದ್ದಾರೆ.

ಗುಣಾ ಜಿಲ್ಲೆಯು ಇತ್ತೀಚೆಗೆ ಕಾಂಗ್ರೆಸ್ ನಿಂದ ಬಿಜೆಪಿಗೆ ಹಾರಿ ಕಾಂಗ್ರೆಸ್ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಜಿಲ್ಲೆಯಾಗಿದ್ದು ಭಾರೀ ಟೀಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಪ್ರತಿಭಟನೆ

ಕರ್ನಾಟಕದ ಸಿಂಧನೂರಿನಲ್ಲಿ ಈ ಘಟನೆಯನ್ನು ಖಂಡಿಸಿ ಕ್ರಾಂತಿಕಾರಿ ಯುವಜನ ರಂಗ (RYF) ಪ್ರತಿಭಟನೆ ನಡೆಸಿದೆ.

ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದದಿನಿದ ದಲಿತ ಸಮುದಾಯದ ಮೇಲೆ ದೌರ್ಜನ್ಯ, ದಬ್ಬಾಳಿಕೆ ಹಾಗೂ ಕೊಲೆಯಂತಹ ಘಟನೆಗಳು ದೇಶಾದ್ಯಂತ ಮಿತಿ ಮೀರಿವೆ. ಇನ್ನು ಮಧ್ಯಪ್ರದೇಶದಲ್ಲಿನ ಬಿಜೆಪಿ ಸರಕಾರ ಅಲ್ಲಿನ ದಲಿತರು, ಬಡವರು ಹಾಗೂ ಆದಿವಾಸಿ ಕುಟುಂಬಗಳ ಮೇಲೆ ನಿರಂತರ ದೌರ್ಜನ್ಯ ಮುಂದುವರಿಸಿದ್ದು, ಬಡ ಹಾಗೂ ಮಧ್ಯಮ ವರ್ಗದ ಅಸಹಾಯಕ ಕುಟುಂಬಗಳು ಬದುಕುವುದೇ ದುಸ್ತರ ಎನ್ನುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು RYF ಆರೋಪಿಸಿದೆ.

ಪೊಲೀಸ್ ದೌರ್ಜನ್ಯವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಅಧಿಕಾರಿಗಳನ್ನು ಅಮಾನತು ಮಾಡಬೇಕು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈ ಘಟನೆಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ದಲಿತ ರೈತ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ದಲಿತ ರೈತ ಕುಟುಂಬ ಉಳುಮೆ ಮಾಡಲು ಜಮೀನನ್ನು ವಾಪಸ್ ಕೊಡಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಪ್ರತಿಭಟನೆಯಲ್ಲಿ ನಾಗರಾಜ ಪೂಜಾರ್, ಆರ್.ಎಚ್ ಕಲಮಂಗಿ, ಬಸವರಾಜ ಕೊಂಡೆ, ಮಹಾದೇವ ಅಮರಾಪುರ, ಮಲ್ಲಿಕಾರ್ಜುನ ಕುರುಗೋಡು, ಹುಸೇನಪ್ಪ ತಿಡಿಗೋಳ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...