Homeಕರೋನಾ ತಲ್ಲಣಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!

ಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!

ಭಾರತದ ಮೊದಲ ಸಂಭಾವ್ಯ ಸ್ಥಳೀಯ ಕೋವಿಡ್ -19 ಲಸಿಕೆಯನ್ನು ಕೋವಾಕ್ಸಿನ್ ಅನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (ಬಿಬಿಐಎಲ್) ಜಂಟಿಯಾಗಿ ಅಭಿವೃದ್ಧಿಪಡಿಸಿದೆ.

- Advertisement -
- Advertisement -

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ಕೋವಿಡ್ -19 ಲಸಿಕೆ ಕೊವಾಕ್ಸಿನ್‌ನ ಮಾನವ ಕ್ಲಿನಿಕಲ್ ಪ್ರಯೋಗವನ್ನು ನಡೆಸಲು ಸನ್ನದ್ದವಾಗಿದೆ. ಇದಕ್ಕಾಗಿ ಆರೋಗ್ಯವಂತ ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಸೋಮವಾರದಿಂದ ದಾಖಲಿಸಿಕೊಳ್ಳಬೇಕೆಂದು ಮನವಿ ಮಾಡಿದೆ.

ಏಮ್ಸ್ ಎಥಿಕ್ಸ್ ಕಮಿಟಿ ಶನಿವಾರ ಕೊವಾಕ್ಸಿನ್‌ನ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಅನುಮತಿ ನೀಡಿದ ನಂತರ ಈ ಸೂಚನೆ ಹೊರಬಿದ್ದಿದೆ.

ಕೋವಾಕ್ಸಿನ್‌ನ ಹಂತ I ಮತ್ತು II ಮಾನವ ಪ್ರಯೋಗಗಳನ್ನು ನಡೆಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆಯ್ಕೆ ಮಾಡಿದ 12 ಸಂಸ್ಥೆಗಳಲ್ಲಿ ಏಮ್ಸ್ ದೆಹಲಿ ಕೂಡ ಸೇರಿದೆ. ಮೊದಲ ಹಂತದಲ್ಲಿ 375 ಸ್ವಯಂಸೇವಕರ ಮೇಲೆ ಲಸಿಕೆ ಪರೀಕ್ಷಿಸಲಾಗುವುದು ಮತ್ತು ಅವರಲ್ಲಿ ಗರಿಷ್ಠ 100 ಮಂದಿ ಏಮ್ಸ್ ನಿಂದ ಬರಲಿದ್ದಾರೆ.

“ನಾವು ಸೋಮವಾರದಿಂದ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದ್ದೇವೆ. ಯಾವುದೇ ತೊಂದರೆಗಳಿಲ್ಲದ ಮತ್ತು ಕೋವಿಡ್ -19 ಇತಿಹಾಸವಿಲ್ಲದ ಆರೋಗ್ಯಕರ ವ್ಯಕ್ತಿಗಳನ್ನು ನಾವು ಆಯ್ಕೆ ಮಾಡಲಿದ್ದೇವೆ” ಎಂದು ಏಮ್ಸ್ ಸೆಂಟರ್ ಫಾರ್ ಕಮ್ಯುನಿಟಿ ಮೆಡಿಸಿನ್‌ನ ಪ್ರಾಧ್ಯಾಪಕ ಡಾ.ಸಂಜಯ್ ರಾಯ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪ್ರಯೋಗದಲ್ಲಿ ಭಾಗವಹಿಸಲು ಇಚ್ಛಿಸುವ ಯಾವುದೇ ಆರೋಗ್ಯವಂತ ವ್ಯಕ್ತಿ, [email protected] ಗೆ ಇಮೇಲ್ ಕಳುಹಿಸಬಹುದು ಅಥವಾ 7428847499 ನಂಬರ್‌ಗೆ ಕರೆ ಮಾಡಬಹುದು/ ಎಸ್‌ಎಂಎಸ್‌ ಕಳುಹಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಧ್ಯಯನಕ್ಕೆ 18 ರಿಂದ 55 ವರ್ಷಗಳ ಒಳಗಿನ ವಯಸ್ಸಿನವರನ್ನು ಆಯ್ಕೆ ಮಾಡುತ್ತೇವೆ. ಇದು ಯಾದೃಚ್ಛಿಕ, ಡಬಲ್-ಬ್ಲೈಂಡ್, ಪ್ಲಸೀಬೊ-ನಿಯಂತ್ರಿತ ಕ್ಲಿನಿಕಲ್ ಪ್ರಯೋಗವಾಗಿದೆ ಎಂದು ಅವರು ಹೇಳಿದ್ದಾರೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಏಮ್ಸ್ ದೆಹಲಿಯು 375 ಸ್ವಯಂಸೇವಕರಲ್ಲಿ 100 ಭಾಗವಹಿಸುವವರನ್ನು ಮಾತ್ರ ಆಯ್ಕೆ ಮಾಡುತ್ತದೆ ಮತ್ತು ಉಳಿದವರು ಇತರ ತಾಣಗಳಲ್ಲಿ ಭಾಗವಹಿಸುತ್ತಾರೆ ಎಂದು ಅವರು ಹೇಳಿದರು.

“ನಾವು ಈಗಾಗಲೇ ಕೆಲವು ಸ್ವಯಂಸೇವಕರನ್ನು ನೋಂದಾಯಿಸಿದ್ದೇವೆ. ಸೋಮವಾರದಿಂದ ನಮ್ಮ ತಂಡವು ಲಸಿಕೆ ನೀಡುವ ಮೊದಲು ಅವರ ಆರೋಗ್ಯ ತಪಾಸಣೆಯನ್ನು ಪ್ರಾರಂಭಿಸುತ್ತದೆ” ಎಂದು ಅವರು ಹೇಳಿದರು.

ಭಾರತದ ಮೊದಲ ಸಂಭಾವ್ಯ ಸ್ಥಳೀಯ ಕೋವಿಡ್ -19 ಲಸಿಕೆಯನ್ನು ಕೋವಾಕ್ಸಿನ್ ಅನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (ಬಿಬಿಐಎಲ್) ಜಂಟಿಯಾಗಿ ಅಭಿವೃದ್ಧಿಪಡಿಸಿದೆ.

ಕೋವಿಡ್ -19 ಲಸಿಕೆಗಳನ್ನು ತಯಾರಿಸುವ ಏಳು ಭಾರತೀಯ ಸಂಸ್ಥೆಗಳಲ್ಲಿ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕೂಡ ಸೇರಿದೆ. ಪರಿಣಾಮಕಾರಿತ್ವ ಮತ್ತು ಸುರಕ್ಷತೆಗಾಗಿ ಲಸಿಕೆಯನ್ನು ಪರೀಕ್ಷಿಸಲು ಹಂತ 1 ಮತ್ತು ಹಂತ 2 ಮಾನವ ಪ್ರಯೋಗಗಳನ್ನು ಪ್ರಾರಂಭಿಸಲು ನಿಯಂತ್ರಕ ಅನುಮೋದನೆಯನ್ನು ಪಡೆದ ಮೊದಲ ಸಂಸ್ಥೆ ಇದಾಗಿದೆ.


ಇದನ್ನೂ ಓದಿ: ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾದೃಚ್ಛಿಕ (random)>ಗೊತ್ತುಗುರಿಇಲ್ಲದ,ಎಕ್ಕಾಸಕ್ಕ
    ಸೆಲೆ: ಸಂಸ್ಕೃತ ಕನ್ನಡ ಪದನೆರಕೆ
    (ಡಾ.ಡಿ.ಎನ್ ಶಂಕರಬಟ್
    ಯೋ.ಬರತ ಕುಮಾರ
    ಸಂದೀಪ್ ಕಂಬಿ)

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...