Homeಅಂತರಾಷ್ಟ್ರೀಯ"Strike For Black Lives": 200ಕ್ಕೂ ಹೆಚ್ಚು ನಗರಗಳಲ್ಲಿ ಸಾವಿರಾರು ಕಾರ್ಮಿಕರ ಕೂಗು!

“Strike For Black Lives”: 200ಕ್ಕೂ ಹೆಚ್ಚು ನಗರಗಳಲ್ಲಿ ಸಾವಿರಾರು ಕಾರ್ಮಿಕರ ಕೂಗು!

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ನ್ಯೂಯಾರ್ಕ್ ನಗರದ 22,000 ಕ್ಕೂ ಹೆಚ್ಚು ಜನ ಆಫ್ರಿಕನ್ ಅಮೆರಿಕನ್ನರು ಮತ್ತು ಹಿಸ್ಪಾನಿಕ್ಸ್ ನಿವಾಸಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ವರ್ಣಭೇದ ನೀತಿಯ ವಿರುದ್ಧ ಪ್ರಪಂಚದಾದ್ಯಂತ ನಡೆಯುತ್ತಿರುವ Black Lives Matter ಆಂದೋಲನದ ಪರ ಐಕ್ಯಮತ್ಯ ಸಾರಲು ಸೋಮವಾರ ಅಮೆರಿಕಾ ದೇಶಾದ್ಯಂತ ಸಾವಿರಾರು ಅಮೇರಿಕನ್ ಕಾರ್ಮಿಕರು ತಮ್ಮ ಉದ್ಯೋಗ ತ್ಯಜಿಸಿ ಮುಷ್ಕರ ನಡೆಸಿದ್ದಾರೆ.

“Strike For Black Lives” ಹೆಸರಿನಲ್ಲಿ ನಡೆಸಿದ ಮುಷ್ಕರದಲ್ಲಿ ಹಲವಾರು ಶ್ರೇಣಿಯ ಕೈಗಾರಿಕೆಗಳ ಉದ್ಯೋಗಿಗಳು “ವ್ಯವಸ್ಥಿತ ವರ್ಣಭೇದ ನೀತಿಯನ್ನು ಕೊನೆಗೊಳಿಸಬೇಕೆಂದು” ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಈ ಮುಷ್ಕರದಲ್ಲಿ ಅಮೆರಿಕದ 200 ಕ್ಕೂ ಹೆಚ್ಚು ನಗರಗಳಲ್ಲಿನ ಸಾವಿರಾರು ಜನರು ಭಾಗವಹಿಸಿದ್ದಾರೆ ಎಂದು ಅಮೇರಿಕನ್ ಮಾಧ್ಯಮಗಳು ವರದಿ ಮಾಡಿದೆ.

ಸುಮಾರು 1,500 ಭದ್ರತಾ ಸಿಬ್ಬಂದಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ, ನ್ಯೂಯಾರ್ಕ್, ನ್ಯೂಜೆರ್ಸಿ ಮತ್ತು ಕನೆಕ್ಟಿಕಟ್‌ನ 85 ವಿವಿಧ ನರ್ಸಿಂಗ್ ಹೋಂಗಳಿಂದ ಸುಮಾರು 6,000 ದಾದಿಯರು ಮುಷ್ಕರ ನಡೆಸಿದರು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ನ್ಯೂಯಾರ್ಕ್‌ನಲ್ಲಿ, ಸುಮಾರು 100 ಜನರು ಟ್ರಂಪ್ ಇಂಟರ್ ನ್ಯಾಷನಲ್ ಹೋಟೆಲ್ ಹೊರಗೆ ಮೆರವಣಿಗೆ ನಡೆಸಿದರು. ಹೀರೋಸ್ ಕಾಯ್ದೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು. ಇದು ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಹೆಣಗಾಡುತ್ತಿರುವ ಮನೆಗಳಿಗೆ ಆರ್ಥಿಕ ನೆರವು ನೀಡುವ ಶಾಸನವಾಗಿದೆ.

ಈ ಮಸೂದೆಯನ್ನು ಮೇ ತಿಂಗಳಲ್ಲಿ ಡೆಮೋಕ್ರಾಟ್ ಬಹುಮತದ ಪ್ರತಿನಿಧಿ ಸಭೆ ಅಂಗೀಕರಿಸಿತು. ಆದರೆ ರಿಪಬ್ಲಿಕನ್ನರು ನಿಯಂತ್ರಣದಲ್ಲಿರುವ ಸಂಸತ್ತು ಇದನ್ನು ನಿರ್ಬಂಧಿಸಿತು.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ನ್ಯೂಯಾರ್ಕ್ ನಗರದ 22,000 ಕ್ಕೂ ಹೆಚ್ಚು ಜನ ಆಫ್ರಿಕನ್ ಅಮೆರಿಕನ್ನರು ಮತ್ತು ಹಿಸ್ಪಾನಿಕ್ಸ್ ನಿವಾಸಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

“ನಾವು ಆರ್ಥಿಕತೆಯನ್ನು ಮುಂದುವರೆಸಿದ್ದೇವೆ. ಪ್ರತಿಯೊಬ್ಬರನ್ನು ಸುರಕ್ಷಿತವಾಗಿರಿಸಿದ್ದೇವೆ. ಅದಕ್ಕಾಗಿ ನಾವು ಗೌರವಿಸಲ್ಪಡಬೇಕು ಮತ್ತು ನಮಗೆ ಪರಿಹಾರವನ್ನು ನೀಡಬೇಕು” ಎಂದು 42 ವರ್ಷದ ಭದ್ರತಾ ಸಿಬ್ಬಂದಿಯಾದ ಜೋರ್ಡಾನ್ ವೈಸ್ ಹೇಳಿದ್ದಾರೆ.

ಬೋಸ್ಟನ್, ಲಾಸ್ ಏಂಜಲೀಸ್ ಮತ್ತು ಚಿಕಾಗೊ ಸೇರಿದಂತೆ 24ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ಸೇವಾ ನೌಕರರ ಅಂತರರಾಷ್ಟ್ರೀಯ ಒಕ್ಕೂಟ ತಿಳಿಸಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...