Homeಕರ್ನಾಟಕಹಿಂದೂ ದೇವರುಗಳ ಅವಹೇಳನದ ವಾಟ್ಸಾಪ್ ಸಂದೇಶ: ಮುರುಗೇಶ್ ನಿರಾಣಿ ಕ್ಷಮೆಯಾಚನೆ

ಹಿಂದೂ ದೇವರುಗಳ ಅವಹೇಳನದ ವಾಟ್ಸಾಪ್ ಸಂದೇಶ: ಮುರುಗೇಶ್ ನಿರಾಣಿ ಕ್ಷಮೆಯಾಚನೆ

- Advertisement -
- Advertisement -

ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಅಧಿಕೃತ ವಾಟ್ಸಾಪ್ ನಂಬರ್‌ನಿಂದ ಹಿಂದೂ ದೇವರುಗಳನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ವಾಟ್ಸಾಪ್‌ ಸಂದೇಶವೊಂದು ಕೆಲ ಗ್ರೂಪ್‌ಗಳಲ್ಲಿ ಫಾರ್ವಾಡ್ ಆಗಿ ವಿವಾದ ಭುಗಿಲೆದ್ದಿದೆ.

ಮಗಳನ್ನೇ ಮದುವೆಯಾದ ಬ್ರಹ್ಮ ನಮಗೆ ದೇವರು, 16 ಸಾವಿರ ಹೆಂಡಂದಿರನ್ನು ಮದುವೆಯಾದ ದನಕಾಯುವ ಕೃಷ್ಣ ದೇವರು, ತುಂಬು ಗರ್ಭಿಣಿಯನ್ನು ಕಾಡಿಗಟ್ಟಿದ ರಾಮ ನಮಗೆ ದೇವರು… ಹೀಗೆ ಉದ್ದದ ವಾಟ್ಸಾಪ್ ಸಂದೇಶವೊಂದನ್ನು ಫಾರ್ವಾಡ್ ಮಾಡಲಾಗಿದೆ.

ಸುದ್ದಿ ಮಾಧ್ಯಮಗಳಲ್ಲಿ ಈ ಸಂದೇಶ ಪ್ರಕಟಗೊಂಡು ಮುರುಗೇಶ್ ನಿರಾಣಿಯವರು ವಿರುದ್ಧ ಹಲವರು ಕಿಡಿ ಕಾರಿದ್ದಾರೆ.

ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಹಿಂದೂ ದೇವರುಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾದ ವಿಚಾರ ಮಾಧ್ಯಮಗಳ‌ ಮೂಲಕ ಗಮನಕ್ಕೆ ಬಂತು‌. ಇದು ನಿಜವಾಗಿದ್ದರೆ, ಬಹಳ ಕೆಟ್ಟ ನಡೆ-ನುಡಿ ಎಂದು ಹೇಳಬೇಕಾಗುತ್ತದೆ. ದೇವರು ಮತ್ತು ಧರ್ಮ ಅವರವರ ನಂಬಿಕೆ, ಅದನ್ನು ನಾವು ಗೌರವಿಸಬೇಕು ಅವಹೇಳನ ಮಾಡಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ದೇವರು ಧರ್ಮದ ಹೆಸರಲ್ಲಿ ಮುಗ್ಧರ ಶೋಷಣೆ, ಮೂಢನಂಬಿಕೆಯ ಆಚರಣೆ ಮಾಡುವುದು ತಪ್ಪು. ರಾಜಕೀಯ ಇಲ್ಲವೇ ಇನ್ನಾವುದೋ ಸ್ವಾರ್ಥಸಾಧನೆಗಾಗಿ ದೇವರು- ಧರ್ಮವನ್ನು ದುರ್ಬಳಕೆ ಮಾಡುವುದುಕೂಡಾ ತಪ್ಪು ಆದರೆ.. ದೇವರನ್ನು ಗೇಲಿ-ಅವಹೇಳನ ಮಾಡುವುದು ವಿಕೃತಿ. ಇದನ್ನು ಯಾರು ಮಾಡಿದರೂ ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕ್ಷಮೆಯಾಚಿಸಿದ ನಿರಾಣಿ

ವಿವಾದ ಭುಗಿಲೇಳುತ್ತಲೇ ಎಚ್ಚೆತ್ತುಕೊಂಡ ಮುರುಗೇಶ್ ನಿರಾಣಿಯವರು ವಿಡಿಯೋ ಒಂದನ್ನು ಮಾಡಿ ಕ್ಷಮೆ ಕೇಳಿದ್ದಾರೆ. “ಸಂದೇಶವೊಂದು ಫಾರ್ವಾಡ್‌ ಆಗಿರುವ ನಂಬರ್ ನನ್ನದೇ ಆಗಿದೆ. ಆ ಮೊಬೈಲ್ ನಂಬರ್ ಅನ್ನು ಸಾರ್ವಜನಿಕ ಸಂಪರ್ಕಕ್ಕಾಗಿ ನನ್ನ ಪಿಎ ಮತ್ತು ಗನ್ ಮ್ಯಾನ್ ಬಳಸುತ್ತಾರೆ. ನಿನ್ನೆ ರಾತ್ರಿ ಆ ಮೊಬೈಲ್ ನನ್ನ ಪಿಎ ಬಳಿಯಿತ್ತು. ಇಂದು ಬೆಳಿಗ್ಗೆ ಬಂದ ಸಂದೇಶವೊಂದನ್ನು ಅಜಾಗರೂಕತೆಯಿಂದ ಫಾರ್ವಾಡ್ ಆಗಿ ಅವಾಂತರ ಸೃಷ್ಠಿಯಾಗಿದೆ. ತಪ್ಪು ಯಾರೇ ಮಾಡಿದರೂ ಸಹ ತಪ್ಪು. ಈ ತಪ್ಪಿಗಾಗಿ ಅವರು ನನ್ನ ಬಳಿ ಕ್ಷಮೆ ಕೇಳಿದ್ದಾರೆ. ಅವರು ಉದ್ದೇಶ ಪೂರ್ವಕವಾಗಿ ಆ ಸಂದೇಶವನ್ನು ಫಾರ್ವಾಡ್ ಮಾಡಿಲ್ಲ. ಇದಕ್ಕಾಗಿ ನಾಡಿನ ಜನತೆಯಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ” ಎಂದು ನಿರಾಣಿ ತಿಳಿಸಿದ್ದಾರೆ.

ನಾನು ಸರ್ವಧರ್ಮ ಸಹಿಷ್ಣುವಾಗಿದ್ದೇನೆ. ಧರ್ಮ ನಂಬಿಕೆಗಳ ಬಗ್ಗೆ ಹಗುರವಾಗಿ ಎಂದೂ ಮಾತನಾಡಿಲ್ಲ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...