Homeಮುಖಪುಟಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಲಿ ಎಂದು ಬಿಜೆಪಿಯ ಹಿರಿಯ ನಾಯಕ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರವು ‘ಗೋಧನ್ ನ್ಯಾಯ’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೊಜನೆಯ ಅಡಿಯಲ್ಲಿ ಸಾವಯವ ಗೊಬ್ಬರ ತಯಾರಿಸಲು ರಾಜ್ಯವು ಜಾನುವಾರು ಮಾಲೀಕರಿಂದ ಗೋವಿನ ತ್ಯಾಜ್ಯವನ್ನು ಖರೀದಿಸುತ್ತಿದೆ.

ಪಕ್ಷದ ಸೈದ್ಧಾಂತಿಕ ಮಾತೃಸಂಘಟನೆ ಆರ್‌ಎಸ್‌ಎಸ್ ಈ ಯೋಜನೆಯನ್ನು ಸ್ವಾಗತಿಸಿದೆ. ಆದರೆ ಕೆಲವು ಬಿಜೆಪಿ ನಾಯಕರು ಅಪಹಾಸ್ಯ ಮಾಡಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಮ್ಮ ಅಧಿಕೃತ ನಿವಾಸದಲ್ಲಿ ಜಾನುವಾರು ಮಾಲೀಕರಿಂದ ಗೋವಿನ ಸಗಣಿಯನ್ನು ಸಾಂಕೇತಿಕವಾಗಿ ಸಂಗ್ರಹಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದ್ದಾರೆ.

ವರ್ಮಿಕಾಂಪೋಸ್ಟ್ ಉತ್ಪಾದಿಸಲು ಡೈರಿ ರೈತರಿಂದ ದನಗಳ ತ್ಯಾಜ್ಯವನ್ನು ಪ್ರತಿ ಕೆ.ಜಿ.ಗೆ ₹ 2 ರಂತೆ ಸಂಗ್ರಹಿಸುವ ಯೋಜನೆ ಇದಾಗಿದೆ. ನಂತರ ಸರ್ಕಾರ ತಯಾರು ಮಾಡುವ ಸಾವಯವ ಗೊಬ್ಬರವನ್ನು ರೈತರಿಗೆ ಕೆಜಿಗೆ ₹ 8 ರಂತೆ ಮಾರಾಟ ಮಾಡಲಾಗುತ್ತದೆ. ರೈತರು ಮತ್ತು ಜಾನುವಾರು ಮಾಲೀಕರ ಮನೆ ಬಾಗಿಲಿಗೆ ಹೋಗಿ ಸೆಗಣಿ ಸಂಗ್ರಹ ಮಾಡಲಾಗುವುದು ಮತ್ತು ಯೋಜನೆಯ ವಿವರಗಳ ಪ್ರಕಾರ ಖರೀದಿಯ 15 ದಿನಗಳಲ್ಲಿ ಪಾವತಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

2018ರಲ್ಲಿ ಅಧಿಕಾರ ವಹಿಸಿಕೊಂಡ ಬಾಗೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸರಿ ಪಕ್ಷವನ್ನು ಎದುರಿಸಲು ಗೋವನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿ ಅದರ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಯೋಜನೆಗಳನ್ನು ಪ್ರಾರಂಭಿಸಿದೆ. ಇದು ಎಷ್ಟರಮಟ್ಟಿಗೆಂದರೆ ಬಿಜೆಪಿ ಈಗ ರಾಜ್ಯ ಸರ್ಕಾರದ ಹಸು-ಸಗಣಿ ಯೋಜನೆಯನ್ನು ಅಪಹಾಸ್ಯ ಮಾಡಿ ಟೀಕಿಸುತ್ತಿದೆ.

ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅಜಯ್ ಚಂದ್ರಕರ್ ಅವರು ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಬೇಕು ಎಂದು ವ್ಯಂಗ್ಯವಾಡುವ ಮೂಲಕ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮನ್ ಸಿಂಗ್ ಈ ಯೋಜನೆಯನ್ನು “ಕಲಗಚ್ಚು” ಎಂದು ಕರೆದಿದ್ದಾರೆ. ರೈತರಿಂದ ಭತ್ತವನ್ನು ಖರೀದಿಸಲು ಸಾಧ್ಯವಾಗದ ಸರ್ಕಾರ ಈಗ ಅವರಿಂದ ಹಸುವಿನ ಸಗಣಿ ಖರೀದಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ಈ ಕ್ರಮವನ್ನು ಶ್ಲಾಘಿಸಿದೆ. ದರವನ್ನು ಪ್ರತಿ ಕೆಜಿಗೆ ₹ 1.5 ರಿಂದ ₹ 2 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿತ್ತು. ಆರ್‌ಎಸ್‌ಎಸ್ ನಿಯೋಗವೊಂದು ಇತ್ತೀಚೆಗೆ ಮುಖ್ಯಮಂತ್ರಿಗೆ ಮೆಚ್ಚುಗೆಯ ಪತ್ರವನ್ನು ಹಸ್ತಾಂತರಿಸಿದ್ದು, ಅದಕ್ಕೆ ಸಂಘಟನೆಯ ಪ್ರಾದೇಶಿಕ ಸಂಚಾಲಕರಾದ ಬಿಸ್ರಾರಾಮ್ ಯಾದವ್ ಅವರು ಸಹಿ ಮಾಡಿದ್ದಾರೆ.

ಸರ್ಕಾರವು ಈ ಹಿಂದೆ ಸೆಗಣಿಗೆ ಕನಿಷ್ಠ ಬೆಂಬಲ ದರವನ್ನು ಪ್ರತಿ ಕೆಜಿಗೆ ₹ 1.5 ಎಂದು ನಿಗದಿಪಡಿಸಲು ನಿರ್ಧರಿಸಿತ್ತು, ಆದರೆ ಆರ್‌ಎಸ್‌ಎಸ್ ಸದಸ್ಯರ ಕೋರಿಕೆಯ ಮೇರೆಗೆ ಬೆಲೆಯನ್ನು 50 ಪೈಸೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಈ ಯೋಜನೆ ಗೋರಾಜಕೀಯ ಮಾಡುತ್ತಿದ್ದ ಬಿಜೆಪಿ ದೊಡ್ಡ ತಲೆನೋವಾಗಿದೆ. ಅದನ್ನು ಬೆಂಬಲಿಸಲು ಆಗದೇ, ವಿರೋಧಿಸಲು ಆಗದೇ ಒದ್ದಾಡುತ್ತಿದೆ.


ಓದಿ: ಛತ್ತೀಸ್‌ಗಡ ಸಿಎಂ ಬಾಗೆಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...