Homeಮುಖಪುಟ'ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು' ಎಂದ ವಿದ್ಯಾರ್ಥಿಯ ಬಂಧನ

‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿಯ ಬಂಧನ

ವಿಷೇಶವೆಂದರೆ ಪ್ರಕರಣದಲ್ಲಿ ವಿದ್ಯಾರ್ಥಿಯು ಆರೆಸ್ಸೆಸ್ಸ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿದ್ದರೂ ಪೊಲೀಸರು ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡಲಾಗಿದೆ ಎಂದು ಕೇಸು ದಾಖಲಿಸಿದ್ದಾರೆ

- Advertisement -
- Advertisement -

ದೆಹಲಿಯ ತಬ್ಲೀಘ್ ಜಮಾತ್ ನ ನಿಜಾಮುದ್ದೀನ್ ಕೇಂದ್ರದಿಂದ ಕೊರೊನಾ ಸೋಂಕು ಹರಡಿರುವ ಕುರಿತು ಮಾಧ್ಯಮಗಳು ಉನ್ಮಾದದಲ್ಲಿದ್ದಾಗ ಬಿಜೆಪಿ ರಾಜಕಾರಣಿ ಬಬಿತಾ ಫೋಗತ್ ಮುಸಲ್ಮಾನರನ್ನು ‘ಅಜ್ಞಾನಿ ಹಂದಿಗಳು’ ಎಂದು ಟ್ವೀಟ್ ಮಾಡಿದ್ದರು.

ಈಗ ನಗರದ ಆರ್‌ಎಸ್‌ಎಸ್ ಕಛೇರಿಯಲ್ಲಿರುವ ಕಾರ್ಯಕರ್ತರಿಗೆ ಹೆಚ್ಚಾಗಿ ಸೋಂಕು ಹರಡುತ್ತಿರುವುದರ ಕುರಿತು ಜಬಲ್ ಪುರದ ಮುಸ್ಲಿಂ ಯುವಕನೊಬ್ಬ ಅದೇ ಪದವನ್ನು ಬಳಸಿದ್ದಾರೆ. ಕೋಮುದ್ವೇಷ ಹರಡುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಜುಲೈ 20 ರಂದು ಪೊಲೀಸರು ಜಬಲ್ ಪುರ್ ಜಿಲ್ಲೆಯ ಮನ್ಸೂರಾಬಾದ್ ಗೋಹಲ್ಪುರದ ನಿವಾಸಿ, ರಾಣಿ ದುರ್ಗಾವತಿ ವಿಶ್ವವಿದ್ಯಾಲಯದಲ್ಲಿ ಬಿ. ಫಾರ್ಮ್‌ನ ಅಂತಿಮ ವರ್ಷದ  ಜಿಯಾ-ಉಲ್-ಹಕ್ ಎಂಬ 23 ವರ್ಷದ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸೆಕ್ಷನ್ 295 (ಎ) ಅಡಿಯಲ್ಲಿ (‘ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶವನ್ನು ಹೊಂದಿವೆ’) ಮತ್ತು ಭಾರತೀಯರ 505 (‘ಕಿಡಿಗೇಡಿತನಕ್ಕೆ ಕಾರಣವಾಗುವ ಸಾರ್ವಜನಿಕ ಹೇಳಿಕೆಗಳು’) ದಂಡ ಸಂಹಿತೆ ಪ್ರಕಾರ ತಕ್ಷಣ ಆತನನ್ನು ಬಂಧಿಸಲಾಯಿತು.

ಜುಲೈ 19 ರಂದು ಜಬಲ್ಪುರ ಸಂಘದ ಕಚೇರಿಯಲ್ಲಿ 12 ಆರ್‌ಎಸ್‌ಎಸ್ ಕಾರ್ಯಕರ್ತರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೆಲವೇ ಗಂಟೆಗಳ ನಂತರ, ಜಿಯಾ-ಉಲ್-ಹಕ್ ಅವರು  ‘NSUI Group Jabalpur VVV’ಯ ಫೇಸ್‌ಬುಕ್ ಪುಟದಲ್ಲಿ ಈ ಪೋಸ್ಟ್ ಮಾಡಿದ್ದರು.

ಸ್ಥಳೀಯ ಟಿವಿ ನ್ಯೂಸ್ ಚಾನೆಲ್‌ನಿಂದ ಸುದ್ದಿಯ ಸ್ಕ್ರೀನ್‌ಶಾಟ್ ಹಂಚಿಕೊಂಡ ಅವರು, 12 ಹಂದಿಗಳು ಇಂದು ನಮ್ಮ ನಗರದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿವೆ. ಈ ಹಂದಿಗಳು ದೇಶಾದ್ಯಂತ ಕೊರೊನಾವನ್ನು ಹರಡುತ್ತಿದ್ದಾರೆ.

ವಿದ್ಯರ್ಥಿಯ ಫೇಸ್‌ಬುಕ್ ಪೋಸ್ಟ್‌ನಿಂದ ಕೋಪಗೊಂಡ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಬಲಪಂಥೀಯ ಹಿಂದೂ ಧರ್ಮ ಸೇನಾ ಸದಸ್ಯರು ಮರುದಿನ ಜಬಲ್ಪುರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಗೆ ಈ ವಿಷಯವನ್ನು ವರದಿ ಮಾಡಿದ್ದಾರೆ.

ಹಿಂದೂ ಧರ್ಮ ಸೇನಾದ ರಾಜ್ಯ ಉಪಾಧ್ಯಕ್ಷ ಮತ್ತು ತನ್ನನ್ನು ಆರ್‌ಎಸ್‌ಎಸ್ ಕಾರ್ಯಕರ್ತ ಎಂದು ಬಣ್ಣಿಸಿಕೊಂಡಿರುವ ನೀರಜ್ ರಜಪೂತ್ ಅವರ ದೂರಿನ ಆಧಾರದ ಮೇಲೆ, ಒಂದು ಗುಂಪಿನ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ್ದಕ್ಕಾಗಿ ಜಬಲ್ಪುರ್ ಪೊಲೀಸರು ಜಿಯಾ-ಉಲ್-ಹಕ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಹಕ್, “ಅಸಭ್ಯ, ನಾಚಿಕೆಗೇಡು ಮತ್ತು ಅಸಹನೀಯ” ಹೇಳಿಕೆಗಳನ್ನು ನೀಡಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದೂರುದಾರರು ಆರೋಪಿಸಿದ್ದಾರೆ.

ಮುಸ್ಲಿಂ ಯುವಕ “ರಾಷ್ಟ್ರೀಯವಾದಿ ಸಂಘಟನೆಯ” ವಿರುದ್ಧದ ಇಂತಹ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತವೆ ಎಂದು ಅವರು ಹೇಳಿದರು. “ಆರ್‌ಎಸ್‌ಎಸ್ ದೇಶಭಕ್ತಿ ಮತ್ತು ಸಾಮಾಜಿಕ ಕಾರ್ಯ ಸಂಸ್ಥೆಯಾಗಿದ್ದು, ಈ ದೇಶದಲ್ಲಿ ಕೋಟ್ಯಂತರ ಸದಸ್ಯರನ್ನು ಹೊಂದಿದೆ. ಅಂತಹ ಸಂಘಟನೆಯ ಬಗ್ಗೆ ಮುಸ್ಲಿಂ ಯುವಕನ ಅಸಭ್ಯ ಉಲ್ಲೇಖವು ಸಾಮಾಜಿಕ ಸಾಮರಸ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ.”

“ಈತ ಮಾಡಿದ ನಿಂದನೀಯ ಉಲ್ಲೇಖವು ರಾಷ್ಟ್ರೀಯವಾದಿ ಮತ್ತು ಸಾಮಾಜಿಕ ಸೇವೆಯ ನನ್ನ ಭಾವನೆಗಳನ್ನು ಘಾಸಿಗೊಳಿಸಿದೆ” ಎಂದು ದೂರುದಾರ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

“ಮುಸ್ಲಿಂ ಯುವಕರ” ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಆತನನ್ನು ಬಂಧಿಸುವಂತೆ ಆಗ್ರಹಿಸಿದ ಅವರು ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದುಎಂದು ಎಚ್ಚರಿಕೆ ನೀಡಿದರು.

ಕುತೂಹಲಕಾರಿ ಸಂಗತಿಯೆಂದರೆ, ಮುಸ್ಲಿಂ ಯುವಕ, ಆರ್‌ಎಸ್‌ಎಸ್ ಮತ್ತು ಅದರ ಸದಸ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ ಎಂಬ ಆರೋಪ ಇದ್ದರೂ, ಪೊಲೀಸರು ಐಪಿಸಿಯ ಸೆಕ್ಷನ್ 295 (ಎ) (ಉದ್ದೇಶಪೂರ್ವಕವಾಗಿ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಲಾಗಿದೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದರ ಕುರಿತು ಪ್ರಶ್ನೆಯನ್ನು ಪೊಲೀಸ್ ಅಧೀಕ್ಷಕ ಸಿದ್ಧಾರ್ಥ್ ಬಹುಗುನಾಗೆ ಕೇಳಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು ಮತ್ತು ತಮ್ಮ ಅಧೀನ ಅಧಿಕಾರಿಗಳೊಂದಿಗೆ ಮಾತನಾಡಲು ಸಲಹೆ ನೀಡಿದರು ಎಂದು ದಿ ವೈರ್‌ಗೆ ವರದಿ ಮಾಡಿದೆ.

ಅಷ್ಟೇ ಅಲ್ಲದೆ, ಜಿಯಾ-ಉಲ್-ಹಕ್ ಪರ ವಕೀಲ ವಿಕಾಶ್ ರಾಥೌರ್ ಜುಲೈ 21 ರಂದು ಜಬಲ್ಪುರ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದಾಗ, ಅಪರಾಧವು ಗಂಭೀರವಾಗಿದೆ ಎಂದು ಆರೋಪಿಸಿ ಜಾಮೀನು ನಿರಾಕರಿಸಿದ ನ್ಯಾಯಾಲಯ ಅವರನ್ನು ಜುಲೈ 24 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಜಿಯಾ-ಉಲ್-ಹಕ್ ಪರವಾಗಿ ಮಧ್ಯಪ್ರದೇಶದ ಹೈಕೋರ್ಟ್ ವಕೀಲ ನಯೀಮ್ ಖಾನ್, ಈ ವಿಷಯವು ಮಾನಹಾನಿಗೆ ಸಂಬಂಧಿಸಿದೆ ಮತ್ತು ಯಾರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದಿನ ವಕೀಲರು ಈ ಪ್ರಕರಣವನ್ನು ಸರಿಯಾಗಿ ಸಮರ್ಥಿಸಲಿಲ್ಲ. ಆದ್ದರಿಂದ, ಜುಲೈ 24 ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ಈ ಪ್ರಕರಣವು ಇತ್ಯರ್ಥವಾಗುತ್ತದೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...