ರಾಜಸ್ಥಾನದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಜನರನ್ನು ಸಜ್ಜುಗೊಳಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ #SpeakUpForDemocracy (ಪ್ರಜಾಪ್ರಭುತ್ವಕ್ಕಾಗಿ ಮಾತನಾಡಿ) ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.
आइए #SpeakUpForDemocracy में एकजुट होकर लोकतंत्र की रक्षा के लिए आवाज़ उठायें। pic.twitter.com/7v1UiOGGZj
— Rahul Gandhi (@RahulGandhi) July 26, 2020
ಅಶೋಕ್ ಗೆಹ್ಲೋಟ್ ಸರ್ಕಾರವು ಉಳಿಯಲು ಹೆಣಗಾಡುತ್ತಿರುವ ಪರಿಸ್ಥಿತಿ ಕುರಿತು ಕಾಂಗ್ರೆಸ್ ಸೋಮವಾರ ದೇಶಾದ್ಯಂತ ಪ್ರತಿಭಟನೆ ನಡೆಸಲು ಯೋಜಿಸುತ್ತಿದೆ. ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರ ಅಧಿಕೃತ ನಿವಾಸ ಮತ್ತು ಅಧ್ಯಕ್ಷ ಭವನದ ಹೊರಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.
ಇಡೀ ದೇಶವು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವಾಗ ಬಿಜೆಪಿಯು “ಸಂವಿಧಾನವನ್ನು ಉರುಳಿಸಿದೆ ಮತ್ತು ಪ್ರಜಾಪ್ರಭುತ್ವವನ್ನು ಕೆಡವಿದೆ” ಎಂದು ವೀಡಿಯೊದಲ್ಲಿ ಕಾಂಗ್ರೆಸ್ ಆರೋಪಿಸಿದೆ.
ಮಧ್ಯಪ್ರದೇಶದಲ್ಲೂ ಬಿಜೆಪಿ ಇದೇ ರೀತಿ ಮಾಡಿದೆ ಎಂದು ಹೇಳಿರುವ ಅವರು, “ನಮ್ಮ ಸಾಂವಿಧಾನಿಕ ಹಕ್ಕುಗಳಲ್ಲಿರುವ ವಿಧಾನಸಭೆ ಅಧಿವೇಶನವನ್ನು ತಕ್ಷಣವೇ ಕರೆಯಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ವೀಡಿಯೊದಲ್ಲಿ ತಿಳಿಸಿದ್ದಾರೆ.
ವಿಧಾನಸಭೆ ಅಧಿವೇಶನ ಆರಂಭಿಸುವ ಪ್ರಸ್ತಾಪವನ್ನು ರಾಜಸ್ಥಾನ ರಾಜ್ಯಪಾಲ ಕಾಳ್‌ರಾಜ್ ಮಿಶ್ರಾ ತಿರಸ್ಕರಿಸಿದ್ದಾರೆ. ಎರಡನೆಯ ಪ್ರಸ್ತಾವವನ್ನು ಇಂದು ಸಲ್ಲಿಸಲಾಯಿತು. ಅದನ್ನು ಅವರು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು.
ಸಚಿನ್ ಪೈಲಟ್ ಬಣ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದ್ದು, ಸ್ಪೀಕರ್ ತೆಗೆದುಕೊಂಡಿರುವ ನಿರ್ಧಾರಗಳಿಗೆ ನ್ಯಾಯಾಲಯ ಹಸ್ತಕ್ಷೇಪ ಮಾಡಬಹುದೇ ಎಂದು ಸಹ ನಿರ್ಧರಿಸುತ್ತದೆ.
ಇದನ್ನೂ ಓದಿ: ಜುಲೈ 31ರಿಂದ ವಿಧಾನಸಭೆ ಅಧಿವೇಶನ ನಡೆಸಿ: ರಾಜ್ಯಪಾಲರಿಗೆ ಹೊಸ ಪ್ರಸ್ತಾಪ ಕಳುಹಿಸಿದ ಗೆಹ್ಲೋಟ್


