Homeಮುಖಪುಟಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ಆ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವಂತಾಗಬೇಕು. ಅದಕ್ಕಾಗಿ ಆ ಕುಟುಂಬಕ್ಕೆ ಟ್ರಾಕ್ಟರ್ ನೀಡುತ್ತಿದ್ದೇನೆ ಎಂದು ಸೋನು ಸೂದ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟ ಸೋನು ಸೂದ್ ಚಿತ್ತೂರು ಜಿಲ್ಲೆಯ ರೈತನೊಬ್ಬರಿಗೆ ಸಹಾಯ ಮಾಡಲು ಟ್ರಾಕ್ಟರ್ ಅನ್ನು ಉಡುಗೊರೆಯಾಗಿ ನೀಡಿದ ನಂತರ, ಕುಟುಂಬವು ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದು, ಸೋನು ಸೂದ್‌ ನಮಗೆ “ದೇವರಿಗಿಂತ ಕಡಿಮೆಯಿಲ್ಲ” ಎಂದಿದ್ದಾರೆ.

“ಅವರು ಚಲನಚಿತ್ರಗಳಲ್ಲಿ ಖಳನಾಯಕನಾಗಿ ನಟಿಸಬಹುದು ಆದರೆ ನಿಜ ಜೀವನದಲ್ಲಿ ಅವರು ನಾಯಕ. ಅವರು ಸಾವಿರಾರು ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತಲುಪಲು ಸಹಾಯ ಮಾಡುತ್ತಿರುವ ವೀರ ಎಂಬ ವರದಿಗಳನ್ನು ಕೇಳಿದ್ದೆವು. ಆದರೆ ಇಂದು ನಾವು ಕೂಡ ಅವರ ಫಲಾನುಭವಿಯಾಗಿದ್ದೇವೆ. ಅವರು ನಮಗೆ ದೇವರಿಗಿಂತ ಕಡಿಮೆಯಿಲ್ಲ” ಎಂದು ನಟನಿಂದ ಟ್ರ್ಯಾಕ್ಟರ್ ಪಡೆದ ರೈತ ನಾಗೇಶ್ವರ ರಾವ್ ಹೇಳಿದ್ದಾರೆ.

ಸೋನು ಸೂದ್ ನಮ್ಮ ಬಡತನವನ್ನು ಗುರುತಿಸಿ ತಕ್ಷಣ ನಮಗೆ ಸಹಾಯ ಮಾಡಿದರು ಎಂದು ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ನಾಗೇಶ್ವರ ರಾವ್ ಅವರ ಮಗಳು ವೆನ್ನೆಲಾ ಮಾತನಾಡಿ “ನಾವು ಕೃಷಿ ಮಾಡಲು ಬಯಸಿದ್ದೆವು. ಆದರೆ ನಮ್ಮ ಬಳಿ ಹಣವಿರಲಿಲ್ಲ. ಆದ್ದರಿಂದ ನಮ್ಮ ಕುಟುಂಬ ಸದಸ್ಯರು ಎಲ್ಲರೂ ಸೇರಿ ದೈಹಿಕ ಕೆಲಸ ಮಾಡಲು ಆರಂಭಿಸಿದೆವು. ಈ ವಿಷಯ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ವೈರಲ್ ಆಗಿದೆ. ಸೋನು ಸೂದ್ ಜಿ ನಮ್ಮ ಅವಸ್ಥೆಯ ಬಗ್ಗೆ ತಿಳಿದು ಸಹಾಯ ಮಾಡಿದ್ದಾರೆ. ಅವರಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

ಚಿತ್ತೂರು ಜಿಲ್ಲೆಯ ಇಬ್ಬರು ಹೆಣ್ಣುಮಕ್ಕಳು ವೆನ್ನೆಲಾ ಮತ್ತು ಚಂದನಾ ತಮ್ಮ ಭೂಮಿಯನ್ನು ಉಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಭೂಮಿಯನ್ನು ಉಳುಮೆ ಮಾಡಲು ಕುಟುಂಬವು ಟ್ರಾಕ್ಟರ್ ಅಥವಾ ಎತ್ತುಗಳನ್ನು ಬಾಡಿಗೆಗೆ ತೆಗೆದುಕೊಳ್ಳಲು ಸಾಧ್ಯವಾಗದ ಕಾರಣ ತಮ್ಮ ಭುಜದ ಮೇಲೆ ನೊಗ ಹೊತ್ತು ಉತ್ತಿದ್ದರು. ಈ ವಿಡಿಯೋ ನೋಡಿದ ಸೋನು ಸೂದ್ ಅವರ ಮನೆಗೆ ಟ್ರಾಕ್ಟರ್ ಅನ್ನು ಉಡುಗೊರೆಯಾಗಿ ನೀಡಿದ್ದರು.

ಕಳೆದ 20 ವರ್ಷಗಳಿಂದ ಮದನಪಲ್ಲೆ ಮಂಡಲದಲ್ಲಿ ಚಹಾ ಅಂಗಡಿಯೊಂದನ್ನು ನಡೆಸುತ್ತಿದ್ದ ಆ ಹೆಣ್ಣು ಮಕ್ಕಳ ತಂದೆ ನಾಗೇಶ್ವರ ರಾವ್ ಲಾಕ್‌ಡೌನ್‌ ನಂತರ ಯಾವುದೇ ಕೆಲಸವಿಲ್ಲದೇ ತಮ್ಮ ಸ್ಥಳೀಯ ಗ್ರಾಮ ರಾಜುವರಿಪಲ್ಲಿಗೆ ಕೃಷಿ ಮಾಡಲು ಮರಳಿದ್ದರು.

ಆ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವಂತಾಗಬೇಕು. ಅದಕ್ಕಾಗಿ ಆ ಕುಟುಂಬಕ್ಕೆ ಟ್ರಾಕ್ಟರ್ ನೀಡುತ್ತಿದ್ದೇನೆ ಎಂದು ಸೋನು ಸೂದ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ತದನಂತರ ತೆಲುಗು ದೇಶಂ ಪಕ್ಷದ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಟ್ವೀಟ್ ಮಾಡಿ, ಸೋನು ಸೂದ್‌ರವರ ಸಹಾಯಕ್ಕಾಗಿ ಧನ್ಯವಾದಗಳು. ನಾನು ಆ ಇಬ್ಬರು ಹೆಣ್ಣು ಮಕ್ಕಳ ಶಿಕ್ಷಣದ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿದ್ಯಾರ್ಥಿ ಮಾರ್ಗದರ್ಶಿ: ಪಿಯುಸಿ ನಂತರ ಮುಂದೇನು?: ಆಯ್ಕೆಗಳ ಬಗ್ಗೆ ಸ್ಪಷ್ಟತೆ ಇರಲಿ; ಗೊಂದಲ ಬೇಡ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...