Homeಎಕಾನಮಿಮಾರುತಿ ಸುಜುಕಿ: 15 ವರ್ಷಗಳಲ್ಲಿಯೇ ಮೊದಲ ತ್ರೈಮಾಸಿಕ ನಷ್ಟ

ಮಾರುತಿ ಸುಜುಕಿ: 15 ವರ್ಷಗಳಲ್ಲಿಯೇ ಮೊದಲ ತ್ರೈಮಾಸಿಕ ನಷ್ಟ

ಕೊರೊನಾ ಹರಡುವುದನ್ನು ತಡೆಯಲು ರಾಷ್ಟ್ರವ್ಯಾಪಿ ಲಾಕ್‌ಡೌನ್ ಹೇರಿದ ಹಿನ್ನೆಲೆಯಲ್ಲಿ ದೇಶದ ಕಾರು ಮಾರಾಟ ಕುಗ್ಗಿದೆ. ಆದ್ದರಿಂದ ಐತಿಹಾಸಿಕ ನಷ್ಟಕ್ಕೆ ಗುರಿಯಾಗಿದೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಇಂಡಿಯಾವು ಏಪ್ರಿಲ್-ಜೂನ್ ತ್ರೈಮಾಸಿಕ ಅವಧಿಯಲ್ಲಿ 249.4 ಕೋಟಿ ರೂ. ನಿವ್ವಳ ನಷ್ಟ ಉಂಟಾಗಿದೆ ಎಂದು ವರದಿ ಮಾಡಿದೆ. ಕಳೆದ 15 ವರ್ಷಗಳಲ್ಲಿ ಇದು ಮೊದಲ ತ್ರೈಮಾಸಿಕ ನಷ್ಟವಾಗಿದೆ ಎಂದು ತಿಳಿಸಿದೆ.

ಕೊರೊನಾ ಹರಡುವುದನ್ನು ತಡೆಯಲು ರಾಷ್ಟ್ರವ್ಯಾಪಿ ಲಾಕ್‌ಡೌನ್ ಹೇರಿದ ಹಿನ್ನೆಲೆಯಲ್ಲಿ ದೇಶದ ಕಾರು ಮಾರಾಟ ಕುಗ್ಗಿದೆ. ಆದ್ದರಿಂದ ಐತಿಹಾಸಿಕ ನಷ್ಟಕ್ಕೆ ಗುರಿಯಾಗಿದೆ ಎಂದು ಹೇಳಲಾಗುತ್ತಿದೆ.

ಒಂದು ವರ್ಷದ ಹಿಂದೆ ಇದೇ ಅವಧಿಯಲ್ಲಿ 1,435.5 ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದ್ದ ಕಂಪನಿ ಈಗ ನಷ್ಟಕ್ಕೆ ಒಳಗಾಗಿದೆ. ಕಡಿಮೆ ನಿರ್ವಹಣಾ ವೆಚ್ಚಗಳು ಮತ್ತು ಹೂಡಿಕೆ ಮಾಡಿದ ಹೆಚ್ಚುವರಿ ಮೊತ್ತದ ಮೇಲಿನ ನ್ಯಾಯಯುತ ಮೌಲ್ಯದ ಲಾಭದಿಂದ ನಿವ್ವಳ ನಷ್ಟವನ್ನು ಭಾಗಶಃ ಸರಿದೂಗಿಸಲಾಗಿದೆ ಎಂದು ಹೇಳಿದೆ.

ಮಾರುತಿ ಸುಜುಕಿಯು ಏಪ್ರಿಲ್-ಜೂನ್ ಅವಧಿಯಲ್ಲಿ ಕಾರುಗಳ ಮಾರಾಟದಿಂದ 3,677.5 ಕೋಟಿ ರೂ. ವಹಿವಾಟು ನಡೆಸಿದೆ ಎನ್ನಲಾಗಿದೆ. ಇದು ಒಂದು ವರ್ಷದ ಹಿಂದಿನ ಅವಧಿಗೆ ಹೋಲಿಸಿದರೆ 80.37 ರಷ್ಟು ಕುಸಿತವಾಗಿದೆ.

ಮಾರುತಿ ಸುಜುಕಿ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಟ್ಟು 76,599 ವಾಹನಗಳನ್ನು ಮಾರಾಟ ಮಾಡಿದೆ. ದೇಶೀಯ ಮಾರುಕಟ್ಟೆಯಲ್ಲಿ 67,027 ವಾಹನಗಳ ಮಾರಾಟ ಮತ್ತು 9,572 ಯುನಿಟ್‌ಗಳ ರಫ್ತು ಇದರಲ್ಲಿ ಸೇರಿದೆ.


ಇದನ್ನೂ ಓದಿ: ರಫೇಲ್ ಒಂದು ಗೇಮ್ ಚೇಂಜರ್, ಚೀನಾದ ಜೆ20 ಇದಕ್ಕೆ ಸಮವಲ್ಲ: ಮಾಜಿ ವಾಯುದಳ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...