ಪಂಜಾಬ್‌ನ ಹಲವಾರು ಜಿಲ್ಲೆಗಳಲ್ಲಿ ವಿಷಕಾರಿ ಮದ್ಯ ಸೇವಿಸಿದ ನಂತರ 21 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
“ಅಮೃತಸರ, ಗುರುದಾಸ್‌ಪುರ ಮತ್ತು ತರ್ನ್ ತರಣ್‌ಗಳಲ್ಲಿ ಶಂಕಿತ ನಕಲಿ ಮದ್ಯ ಸಾವುಗಳ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ನಾನು ಆದೇಶಿಸಿದ್ದೇನೆ. ಜಲಂಧರ್ ವಿಭಾಗದ ಆಯುಕ್ತರು ವಿಚಾರಣೆ ನಡೆಸಿ ಸಂಬಂಧಪಟ್ಟ ಎಸ್‌ಎಸ್‌ಪಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಾರೆ. ತಪ್ಪಿತಸ್ಥರನ್ನು ಬಿಡುವುದಿಲ್ಲ ” ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.
ಮುಚಾಲ್ ಗ್ರಾಮದ ನಿವಾಸಿ ಬಲ್ವಿಂದರ್ ಕೌರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ನೀರು ಮತ್ತು ತಂಪು ಪಾನೀಯಕ್ಕೆ ಸ್ಯಾನಿಟೈಸರ್ ಬೆರೆಸಿ ಸೇವನೆ; 9 ಜನ ಸಾವು


