Homeಅಂತರಾಷ್ಟ್ರೀಯಅಕ್ಟೋಬರ್‌ನಲ್ಲಿ ಸಾಮೂಹಿಕ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ಆರಂಭ: ರಷ್ಯಾ

ಅಕ್ಟೋಬರ್‌ನಲ್ಲಿ ಸಾಮೂಹಿಕ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ಆರಂಭ: ರಷ್ಯಾ

ಲಸಿಕೆ ಉಚಿತವಾಗಿ ನೀಡಲಾಗುವುದು. ಕೊರೊನಾ ವೈರಸ್ ವ್ಯಾಕ್ಸಿನೇಷನ್ ಅಭಿಯಾನವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ಒಳಗೊಳ್ಳಲಾಗುವುದು ಎಂಬ ಯೋಚನೆಯಿದೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ವಿರುದ್ಧ ಅಕ್ಟೋಬರ್‌ನಲ್ಲಿ ರಷ್ಯಾ ಸಾಮೂಹಿಕ ವ್ಯಾಕ್ಸಿನೇಷನ್ ಅಭಿಯಾನವನ್ನು ಯೋಜಿಸುತ್ತಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಮಿಖಾಯಿಲ್ ಮುರಾಶ್ಕೊ ಹೇಳಿದ್ದಾರೆ.

ನಾವು ಹೊಸ ಚಿಕಿತ್ಸಾ ವಿಧಾನವನ್ನು ಕ್ರಮೇಣ ಪ್ರಾರಂಭಿಸಬೇಕಾಗಿರುವುದರಿಂದ, ಅಕ್ಟೋಬರ್‌ನಲ್ಲಿ ವ್ಯಾಪಕವಾದ ವ್ಯಾಕ್ಸಿನೇಷನ್ ಅಭಿಯಾನವನ್ನು ಯೋಜಿಸುತ್ತೇವೆ ಎಂದು ಸಚಿವರು ಟಾಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಗಮಲೇಯ ಸೈಂಟಿಫಿಕ್ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಮತ್ತು ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಮುಗಿದಿವೆ ಎಂದು ಮುರಾಶ್ಕೊ ಹೇಳಿದ್ದಾರೆ.

ಲಸಿಕೆ ಉಚಿತವಾಗಿ ನೀಡಲಾಗುವುದು. ಕೊರೊನಾ ವೈರಸ್ ವ್ಯಾಕ್ಸಿನೇಷನ್ ಅಭಿಯಾನವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ಒಳಗೊಳ್ಳಲಾಗುವುದು ಎಂಬ ಯೋಚನೆಯಿದೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು, ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರು ರಷ್ಯಾವು ಕೊರೊನಾ ವಿರುದ್ಧ ವಿಶ್ವಾಸಾರ್ಹ ಲಸಿಕೆಯನ್ನು ಉತ್ಪಾದಿಸುತ್ತದೆ ಎಂಬ ಭರವಸೆ ಇದೆ ಎಂದು ಹೇಳಿದ್ದರು.

ಇಲ್ಲಿಯವರೆಗೆ, ರಷ್ಯಾದಲ್ಲಿ 8,45,443 ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿದ್ದು, 6,46,524 ರೋಗಿಗಳು ಚೇತರಿಸಿಕೊಂಡಿದ್ದಾರೆ. ರಷ್ಯಾದ ಇತ್ತೀಚಿನ ಮಾಹಿತಿಯ ಪ್ರಕಾರ ದೇಶಾದ್ಯಂತ 14,058 ಸಾವು ಸಂಭವಿಸಿದೆ.

ಈ ಮೊದಲು, ಕೊರೊನಾ ವೈರಸ್ ಪರಿಸ್ಥಿತಿಯ ಬಗ್ಗೆ ಸಾರ್ವಜನಿಕರನ್ನು ಒಳಗೊಳ್ಳಲು ರಷ್ಯಾ ಸರ್ಕಾರವು ಇಂಟರ್ನೆಟ್ ಹಾಟ್‌ಲೈನ್ ಅನ್ನು ಸ್ಥಾಪಿಸಿತ್ತು.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...