Homeಕರ್ನಾಟಕರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರ ವಜಾ

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರ ವಜಾ

- Advertisement -
- Advertisement -

ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ ಎಂಬ ನೆಪದಲ್ಲಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಸುಮಾರು 1500 ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಲಾಗಿದೆ. ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಮಿಕರೂ ಸೇರಿದಂತೆ ಹಲವರು ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ.

30 ಹೆಚ್ಚು ಹಳ್ಳಿಗಳ ಕಾರ್ಮಿಕರು, ವ್ಯಾಪಾರಿಗಳು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ ರಾಜ್ಯಸರ್ಕಾರವು ಇಲ್ಲಿ ವಿದ್ಯುತ್‌ ಖರೀದಿ ನಿಲ್ಲಿಸಿ, ಖಾಸಗಿಯವರಿಂದ ವಿದ್ಯುತ್ ಖರೀದಿಗೆ ಮುಂದಾಗಿದ್ದೆ ರಾಯಚೂರು ಶಾಖೊತ್ಪನ್ನ ವಿದ್ಯುತ್ ಕೇಂದ್ರದ ವಿದ್ಯುತ್ ಬೇಡಿಕೆ ಕಡಿಮೆಯಾಗಲು ಮತ್ತು ಕಾರ್ಮಿಕರು ಕೆಲಸ ಕಳೆದುಕೊಳ್ಳಲು ಕಾರಣ ಎಂಬ ಆರೋಪ ಕೇಳಿಬಂದಿದೆ.

3500 ಸರ್ಕಾರಿ ನೌಕರರು, 10000 ಕ್ಕೂ ಹೆಚ್ಚು ಗುತ್ತಿಗೆ ನೌಕರರು, 500ಕ್ಕೂ ಹೆಚ್ಚು ಅಪ್ರೆಂಟಿಸ್ ತರಬೇತಿದಾರರು ಕೆಲಸ ನಿರ್ವಹಿಸುತ್ತಿರುವ ಇಲ್ಲಿ ವಿದ್ಯುತ್ ಬೇಡಿಕೆಯಿಲ್ಲ ಎಂಬ ಕಾರಣದಿಂದ ಕೆಲ ಸಮಯ ಕೆಲಸ ಸ್ಥಗಿತಗೊಳಿಸಲು ಸೂಚಿಸಲಾಗಿದೆ.

ನಾಡಿಗೆ ಶೇ.40 ರಷ್ಟು ವಿದ್ಯುತ್ ನೀಡುವ ಈ ಸಂಸ್ಥೆಯ ಕಾರ್ಮಿಕರು ಈಗ ಅನಾಥರಾಗಿದ್ದಾರೆ. ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಂಡು ಈಗ ಉದ್ಯೋಗವೂ ಇಲ್ಲದೇ ಅತಂತ್ರರಾಗಿರುವ ಈ ಕಾರ್ಮಿಕರ ಪರಿಸ್ಥಿತಿಗೆ ಯಾರು ಹೊಣೆ? ಈ ವಿದ್ಯುತ್ ಸ್ಥಾವರದಿಂದ ಹೊರಸೂಸುವ ಹಾರುಬೂದಿಯಿಂದ ಹಲವಾರು ರೋಗಗಳಿಂದ ಬಳಲುವುದು, ಅಸ್ತಮಾದಂತಹ ತೀವ್ರತರ ರೋಗಗಳಿಗೆ ಇಲ್ಲಿನ ಜನರು ಬಲಿಯಾಗುತ್ತಲೇ ಇದ್ದಾರೆ. ಫಲವತ್ತಾದ ಕೃಷಿ ಭೂಮಿಯನ್ನು, ತಮ್ಮ ಆರೋಗ್ಯವನ್ನು ತ್ಯಾಗ ಮಾಡಿದ ಇಲ್ಲಿನ ಜನರಿಗೆ ಸರ್ಕಾರ ನೀಡಿರುವ ಕೊಡುಗೆಯೆಂದರೆ ಕಾರ್ಮಿಕರನ್ನು ಮನೆಗೆ ಕಳಿಸಿರುವುದು ಎಂದು ಸ್ಥಳೀಯರಾದ ಪ್ರವೀಣ್ ರೆಡ್ಡಿ ಗುಂಜಳ್ಳಿಯವರು ದೂರಿದ್ದಾರೆ.

ಈ ಕುರಿತು ರಾಯಚೂರು ಗ್ರಾಮಾಂತರ ಶಾಸಕರಾದ ಬಸನಗೌಡ ದದ್ದಲ್‌ರವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ ಮತ್ತು ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರವನ್ನು ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಈ ಭಾಗದ ಸಾವಿರಾರು ಜನರು ಕಾರ್ಖಾನೆಗಾಗಿ ತಮ್ಮ ಭೂಮಿ ಕೊಟ್ಟಿದ್ದಾರೆ. ಕಾರ್ಖಾನೆಯ ದೂಳು ಕುಡಿದಿದ್ದಾರೆ. ಈಗ ಇದ್ದಕ್ಕಿದ್ದಂತೆ ಖಾಸಗಿಯವರಿಂದ ವಿದ್ಯುತ್ ಖರೀದಿಸುವ ಮೂಲಕ ಸರ್ಕಾರಿ ಕಾರ್ಖಾನೆಗಳನ್ನು ಮುಚ್ಚಲು ಸರ್ಕಾರ ಹೊರಟಿರುವುದು ಸರಿಯಿಲ್ಲ. ಈ ಕ್ರಮದಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ ಎಂಬ ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದು ಕಡೆ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರವನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ಒಪ್ಪಿಸಿರುವುದು ಅತ್ಯಂತ ಮೂರ್ಖತನದ ಕೆಲಸವಾಗಿದೆ. ರೈತರ ಕೃಷಿ ಭೂಮಿಯನ್ನು ಪಡೆದುಕೊಂಡು ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ನಿರ್ಮಿಸಿರುವ ವಿದ್ಯುತ್ ಕೇಂದ್ರವನ್ನು ಇಡಿಯಾಗಿ ಪವರ್ ಮ್ಯಾಕ್ ಎನ್ನುವ ಖಾಸಗಿ ಸಂಸ್ಥೆಗೆ ಬಳುವಳಿಯಾಗಿ ನೀಡಿರುವ ಸರ್ಕಾರ ನಾಡಿನ ಜನತೆಗೆ, ಈ ಭಾಗದ ಉದ್ಯೋಗಾಂಕ್ಷಿಗಳಿಗೆ ಮೋಸವೆಸಗಿದೆ ಎಂದು ಪ್ರವೀಣ್ ರೆಡ್ಡಿ ಆರೋಪಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...