Homeಮುಖಪುಟಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

ಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

ಪ್ರಾಯೋಜಕತ್ವವನ್ನು ಬದಲಿಸುವ ನಿರ್ಧಾರ ತೆಗೆದುಕೊಳ್ಳದಿದ್ದರೆ ಭಾರತೀಯರು ಈ ಪ್ರಮುಖ ಕ್ರಿಕೆಟ್ ಸರಣಿಯನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

- Advertisement -
- Advertisement -

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಪ್ರಾಯೋಜಿಸಲು ಚೀನಾದ ಪ್ರಮುಖ ಕಂಪನಿ VIVOಗೆ ಅವಕಾಶ ನೀಡುವ ನಿರ್ಧಾರವನ್ನು ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಮರುಪರಿಶೀಲಿಸಬೇಕು ಎಂದು ಸ್ವದೇಶಿ ಜಾಗರಣ ಮಂಚ್ (ಎಸ್‌ಜೆಎಂ) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಒತ್ತಾಯಿಸಿದೆ.

ಚೀನಾದ ಸರಕುಗಳನ್ನು ಬಹಿಷ್ಕರಿಸುವ ಅಭಿಯಾನದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಾಸಂಘದ (ಆರ್‌ಎಸ್‌ಎಸ್) ಅಂಗಸಂಸ್ಥೆಯಾದ ಎಸ್‌ಜೆಎಂ, ಚೀನಾದ ಪ್ರಾಯೋಜಕತ್ವವನ್ನು ಅನುಮತಿಸುವ ಬಿಸಿಸಿಐ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಾಯೋಜಕತ್ವವನ್ನು ಬದಲಿಸುವ ನಿರ್ಧಾರ ತೆಗೆದುಕೊಳ್ಳದಿದ್ದರೆ ಭಾರತೀಯರು ಈ ಪ್ರಮುಖ ಕ್ರಿಕೆಟ್ ಸರಣಿಯನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

ಎಸ್‌ಜೆಎಂನ ರಾಷ್ಟ್ರೀಯ ಸಹ-ಸಂಚಾಲಕ ಅಶ್ವನಿ ಮಹಾಜನ್ ‘ಬಿಸಿಸಿಐ ನಿರ್ಧಾರವು ಪ್ರಸ್ತುತ ರಾಷ್ಟ್ರದ ಪರಿಸ್ಥಿತಿಗೆ ವಿರುದ್ಧವಾಗಿದೆ’ ಎಂದಿದ್ದಾರೆ.

“ಚೀನೀ ಸರಕುಗಳನ್ನು ಬಹಿಷ್ಕರಿಸುವ ಕರೆ ಇನ್ನು ಮುಂದೆ ಕೇವಲ ಎಸ್‌ಜೆಎಂನ ಕರೆಯಲ್ಲ. ಇದು ಭಾರತ ಮತ್ತು ಚೀನಾ ನಡುವೆ ಏನಾಯಿತು ಎಂಬುದರ ಹಿನ್ನೆಲೆಯಲ್ಲಿ ಸಾಮಾನ್ಯ ನಾಗರಿಕರ ಕರೆ” ಎಂದು ಅವರು ಹೇಳಿದರು.

ಕ್ರಿಕೆಟ್ ಮಂಡಳಿ ರಾಷ್ಟ್ರದ ವಿಷಯದಲ್ಲಿ ಸೂಕ್ಷ್ಮವಾಗಿರಬೇಕು, ಮತ್ತು ಅದು ಭದ್ರತಾ ಕಾಳಜಿಗಳನ್ನು ಹೊಂದಿರಬೇಕು ಎಂದು ಮಹಾಜನ್ ಹೇಳಿದರು.

“ಇಡೀ ಜಗತ್ತು ಚೀನಾವನ್ನು ಬಹಿಷ್ಕರಿಸುತ್ತಿದೆ, ಆದರೆ ಐಪಿಎಲ್ ಅವರಿಗೆ ಆಶ್ರಯ ನೀಡುತ್ತಿದೆ. ರಾಷ್ಟ್ರಕ್ಕಿಂತ ಯಾವುದು ದೊಡ್ಡದಲ್ಲ ಎಂದು ಅವರು ಅರ್ಥಮಾಡಿಕೊಳ್ಳಬೇಕು” ಎಂದಿದ್ದಾರೆ.

ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು.

ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಚೀನಾವನ್ನು ಎದುರಿಸಲು ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳನ್ನು ಮರುಪರಿಶೀಲಿಸುವ ಅಭಿಯಾನವನ್ನು ತೀವ್ರಗೊಳಿಸಿವೆ.

ಚೀನಾದ ಸರಕುಗಳನ್ನು ಬಹಿಷ್ಕರಿಸುವ ಬೇಡಿಕೆಗೆ ಬೆಂಬಲ ನೀಡಿ, ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯಾಜಿ ಜೋಶಿ ಕಳೆದ ತಿಂಗಳು ಆರ್‌ಎಸ್‌ಎಸ್ ಪ್ರಕಟಣೆಯೊಂದಕ್ಕೆ ಮಾತನಾಡುತ್ತಾ, ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಅಭಿಯಾನವು ಸ್ವಾಭಾವಿಕವಾಗಿ ಸಂಭವಿಸಿದೆ ಎಂದಿದ್ದರು. ಪ್ರತಿಪಕ್ಷಗಳು ಕೂಡ ಬಿಸಿಸಿಐ ನಿರ್ಧಾರವನ್ನು ಟೀಕಿಸಿವೆ.


ಇದನ್ನೂ ಓದಿ: VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...